AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಪಂದ್ಯದಲ್ಲಿ RCB ಗೆಲ್ಲದಿದ್ದರೂ ಈ ಅಂತರದಿಂದ ಸೋಲಲೇ ಬಾರದು!

IPL 2026 Sunrisers Hyderabad vs Royal Challengers Bengaluru: ಐಪಿಎಲ್​ನ 67ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. 

ಕೊನೆಯ ಪಂದ್ಯದಲ್ಲಿ RCB ಗೆಲ್ಲದಿದ್ದರೂ ಈ ಅಂತರದಿಂದ ಸೋಲಲೇ ಬಾರದು!
RCB
ಝಾಹಿರ್ ಯೂಸುಫ್
|

Updated on:May 21, 2026 | 2:21 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅದು ಕೂಡ ಸನ್​ರೈಸರ್ಸ್ ಹೈದರಾಬಾದ್ ತಂಡದ ತವರು ಮೈದಾನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ. ಆರ್​ಸಿಬಿ ವಿರುದ್ಧದ ಈ ಪಂದ್ಯವು ಸನ್​ರೈಸರ್ಸ್ ಹೈದರಾಬಾದ್ ಪಾಲಿಗೆ ತುಂಬಾ ಮಹತ್ವದ್ದು.

ಏಕೆಂದರೆ ಈ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸಿದರೆ ಸನ್​ರೈಸರ್ಸ್ ಹೈದರಾಬಾದ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಬಹುದು. ಅತ್ತ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ಕೂಡ ಅಮೋಘ ಗೆಲುವು ದಾಖಲಿಸಿದರೂ ಮೊದಲ ಸ್ಥಾನವನ್ನು ಅಲಂಕರಿಸಬಹುದು.

ಈ ಎರಡೂ ತಂಡಗಳು ಕೊನೆಯ ಲೀಗ್ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ, ಪ್ರಸ್ತುತ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಇದರಿಂದ ಪ್ಲೇಆಫ್​ ಸುತ್ತಿನಲ್ಲಿ ಎಲಿಮಿನೇಟರ್ ಪಂದ್ಯವಾಡಬೇಕಾದ ಅನಿವಾರ್ಯತೆ ಎದುರಾಗಬಹುದು.

  • ಐಪಿಎಲ್​ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡಲಿದೆ.
  • ಮೂರನೇ ಮತ್ತು ನಾಲ್ಕನೇ ಸ್ಥಾನಗಳನ್ನು ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ.
  • ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಿದರೆ, ಸೋಲುವ ತಂಡಕ್ಕೆ ಎರಡನೇ ಕ್ವಾಲಿಫೈಯರ್​ ಪಂದ್ಯವಾಡುವ ಅವಕಾಶ ದೊರೆಯಲಿದೆ.
  • ಅದೇ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ.
  • ಹೀಗಾಗಿಯೇ ಎಲ್ಲಾ ತಂಡಗಳು ಟಾಪ್-2 ನಲ್ಲಿ ಸ್ಥಾನ ಪಡೆದು ಮೊದಲ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಲು ಮುಂದಾಗಲಿದೆ.

RCB ಗೆಲ್ಲದಿದ್ದರೂ ಈ ಅಂತರದಿಂದ ಸೋಲಲೇ ಬಾರದು!

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಕೊನೆಯ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಜಯ ಸಾಧಿಸಿದರೆ ಒಟ್ಟು 18 ಅಂಕಗಳನ್ನು ಪಡೆಯಲಿದೆ. ಅತ್ತ ಆರ್​ಸಿಬಿ ಗೆದ್ದರೆ 20 ಅಂಕಗಳೊಂದಿಗೆ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದನ್ನು ಖಚಿತಪಡಿಸಿಕೊಳ್ಳಲಿದೆ.

ಒಂದು ವೇಳೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಭಾರೀ ಅಂತರದಿಂದ ಗೆದ್ದರೆ ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಬಹುದು. ಹೀಗೆ ಆರ್​ಸಿಬಿ (+1.065) ತಂಡವನ್ನು ಯಾವ ಅಂತರದಿಂದ ಸೋಲಿಸಿದರೆ ಎಸ್​ಆರ್​ಹೆಚ್ (+0.350) ಅಂಕ ಪಟ್ಟಿಯಲ್ಲಿ ನೆಟ್​ ರನ್ ರೇಟ್ ಮೂಲಕ ಮೊದಲ ಸ್ಥಾನಕ್ಕೇರಬಹುದು ಎಂದು ನೋಡುವುದಾದರೆ…

  • ಮೊದಲು ಬ್ಯಾಟಿಂಗ್ ಮಾಡಿದರೆ:-
  • ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲು ಬ್ಯಾಟಿಂಗ್ ಮಾಡಿ ನಿಖರವಾಗಿ 250 ರನ್ ಗಳಿಸಿದರೆ, ಆರ್‌ಸಿಬಿ ತಂಡವನ್ನು 162 ರನ್ ಅಥವಾ ಅದಕ್ಕಿಂತ ಕಡಿಮೆ ಮೊತ್ತಕ್ಕೆ ನಿಯಂತ್ರಿಸಬೇಕಾಗುತ್ತದೆ.
  • ಸನ್​ರೈಸರ್ಸ್ ಹೈದರಾಬಾದ್ ತಂಡವು ಮೊದಲು ಬ್ಯಾಟ್ 200 ರನ್ ಗಳಿಸಿದರೆ, ಆರ್‌ಸಿಬಿ ತಂಡವನ್ನು ಕೇವಲ 115 ರನ್‌ಗಳ ಒಳಗಾಗಿ ಆಲೌಟ್ ಮಾಡಬೇಕು
  • ಅಂದರೆ ಕನಿಷ್ಠ 85+ ರನ್​ಗಳ ಅಂತರದಿಂದ ಗೆದ್ದರೆ ಮಾತ್ರ ಸನ್​ರೈಸರ್ಸ್ ಹೈದರಾಬಾದ್ ತಂಡವು ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡವನ್ನು ಹಿಂದಿಕ್ಕಬಹುದು.
  • ಚೇಸಿಂಗ್ ಮಾಡಿದರೆ:-
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬ್ಯಾಟ್ ಮಾಡಿದ 200 ರನ್​ಗಳ ಗುರಿ ನೀಡಿದರೆ, ಈ ಗುರಿಯನ್ನು ಎಸ್‌ಆರ್‌ಹೆಚ್ ತಂಡವು ಕೇವಲ 11 ಓವರ್‌ಗಳಲ್ಲಿ (66 ಎಸೆತಗಳು) ಅಥವಾ ಅದಕ್ಕಿಂತ ಕಡಿಮೆ ಓವರ್‌ಗಳಲ್ಲಿ ಚೇಸ್ ಮಾಡಬೇಕು.
  • ಆರ್‌ಸಿಬಿ 180 ರನ್‌ಗಳ ಗುರಿಯನ್ನು ನೀಡಿದರೆ ಎಸ್‌ಆರ್‌ಹೆಚ್ ತಂಡವು ಕೇವಲ 11 ರಿಂದ 12 ಓವರ್‌ಗಳಲ್ಲಿ ಈ ಟಾರ್ಗೆಟ್ ಅನ್ನು ಬೆನ್ನಟ್ಟಬೇಕಾಗುತ್ತದೆ.
  • ಅಂದರೆ ಇಲ್ಲಿ ಕನಿಷ್ಠ 65+ ಎಸೆತಗಳನ್ನು ಬಾಕಿಯಿರಿಸಿ ಗೆದ್ದರೆ ಮಾತ್ರ ಸನ್​ರೈಸರ್ಸ್ ಹೈದರಾಬಾದ್ ತಂಡವು ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನವನ್ನು ಅಲಂಕರಿಸಬಹುದು.
  • ನೆಟ್​ ರನ್​ ರೇಟ್ ವ್ಯತ್ಯಾಸ: RCB (+1.065) vs SRH (+0.350) ನಡುವೆ 0.715 ರಷ್ಟು ದೊಡ್ಡ ನೆಟ್ ರನ್ ರೇಟ್ ವ್ಯತ್ಯಾಸವಿದೆ.

SRH ಅಮೋಘ ಗೆಲುವು ಸಾಧಿಸಿದರೆ ಏನಾಗಲಿದೆ?

ಒಂದು ವೇಳೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಆರ್​ಸಿಬಿ ವಿರುದ್ಧ ಈ ಮೇಲೆ ತಿಳಿಸಿದರೆ 85+ ರನ್​ಗಳ ಅಂತರದಿಂದ ಅಥವಾ 11 ಓವರ್​ಗಳಲ್ಲಿ ಚೇಸ್ ಮಾಡಿ ಗೆದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿಯಲಿದೆ. ಇತ್ತ ದ್ವಿತೀಯ ಸ್ಥಾನದಿಂದ ಆರ್​ಸಿಬಿ ತಂಡವನ್ನು ಹಿಂದಿಕ್ಕಲು ಗುಜರಾತ್ ಟೈಟಾನ್ಸ್ ತಂಡಕ್ಕೂ ಅವಕಾಶ ಇದೆ.

ಅಂದರೆ ಇಂದಿನ ಮ್ಯಾಚ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವು ಸಿಎಸ್​ಕೆ ವಿರುದ್ಧ ಭಾರೀ ಅಂತರದಿಂದ ಗೆದ್ದರೆ, ನೆಟ್ ರನ್​ ರೇಟ್​ ಏರಿಕೆಯಾಗಲಿದೆ. ಇದರಿಂದ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ಹೀನಾಯವಾಗಿ ಸೋತರೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿಯಬಹುದು.

ಇಲ್ಲಿ ಗುಜರಾತ್ ಟೈಟಾನ್ಸ್ ತಂಡವು ಆರ್​ಸಿಬಿ ತಂಡದ ನೆಟ್​ ರನ್ ರೇಟ್​ ಹಿಂದಿಕ್ಕಬೇಕಿದ್ದರೆ ಈ ಕೆಳಗೆ ನೀಡಲಾದ ಅಂತರದಿಂದ ಸಿಎಸ್​ಕೆ ತಂಡವನ್ನು ಮಣಿಸಬೇಕಾಗುತ್ತದೆ.

  • ಮೊದಲ ಬ್ಯಾಟಿಂಗ್ ಮಾಡಿದರೆ:-
  • ಗುಜರಾತ್ ಟೈಟಾನ್ಸ್ ತಂಡವು ಮೊದಲ ಬ್ಯಾಟಿಂಗ್ ಮಾಡಿ 220 ರನ್​ಗಳಿಸಿದರೆ, ಸಿಎಸ್​ಕೆ ತಂಡವನ್ನು 100 ರನ್​ಗಳ ಒಳಗೆ ನಿಯಂತ್ರಿಸಬೇಕು. ಅಂದರೆ ಬರೋಬ್ಬರಿ 120 ರನ್​ಗಳ ಅಮೋಘ ಜಯ ಸಾಧಿಸಬೇಕು.
  • ಗುಜರಾತ್ ಟೈಟಾನ್ಸ್ 200 ರನ್ ಬಾರಿಸಿದರೆ, ಸಿಎಸ್‌ಕೆ ತಂಡವನ್ನು ಕೇವಲ 80 ರಿಂದ 85 ರನ್‌ಗಳಿಗೆ ಆಲೌಟ್ ಮಾಡಬೇಕು.
  • ಅಂದರೆ ಕನಿಷ್ಠ 100+ ರನ್‌ಗಳ ಭಾರಿ ಅಂತರದ ಗೆಲುವು ಸಾಧಿಸಿದರೆ ಮಾತ್ರ ಗುಜರಾತ್ ಟೈಟಾನ್ಸ್ ತಂಡಕ್ಕೆ ಆರ್​ಸಿಬಿ ತಂಡವನ್ನು ಅಂಕ ಪಟ್ಟಿಯಲ್ಲಿ ಹಿಂದಿಕ್ಕಬಹುದು.
  • ಚೇಸಿಂಗ್ ಮಾಡಿದರೆ:-
  • ಒಂದು ವೇಳೆ ಗುಜರಾತ್ ಟೈಟಾನ್ಸ್ ತಂಡವು ಚೇಸಿಂಗ್ ಮಾಡಿದರೆ, ಸಿಎಸ್​ಕೆ ತಂಡ ನೀಡುವ 200 ರನ್​ಗಳ ಗುರಿಯನ್ನು 9.4 ಓವರ್​​ಗಳಲ್ಲಿ ಚೇಸ್ ಮಾಡಬೇಕು.
  • ಸಿಎಸ್‌ಕೆ 180 ರನ್​ಗಳ ಗುರಿ ನೀಡಿದರೆ ಗುಜರಾತ್ ಟೈಟಾನ್ಸ್ ತಂಡವು ಈ ಟಾರ್ಗೆಟ್ ಅನ್ನು 10 ರಿಂದ 11 ಓವರ್‌ಗಳ ಒಳಗೆ ಚೇಸ್ ಮಾಡಬೇಕಾಗುತ್ತದೆ.
  • ಅಂದರೆ ಕನಿಷ್ಠ 60 ಎಸೆತಗಳನ್ನು ಬಾಕಿಯಿರಿಸಿ ಗೆದ್ದರೆ ಮಾತ್ರ ಗುಜರಾತ್ ಟೈಟಾನ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಬಹುದು.
  • RCB (+1.065) vs GT (+0.400) ನಡುವೆ 0.665 ರಷ್ಟು ದೊಡ್ಡ ನೆಟ್ ರನ್ ರೇಟ್ ವ್ಯತ್ಯಾಸವಿದೆ.

ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಇಂದು (ಮೇ.21) ಪಂದ್ಯವಾಡಲಿದೆ ಎಂಬುದು. ಅದೇ ಆರ್​ಸಿಬಿ ಮತ್ತು ಎಸ್​ಆರ್​ಹೆಚ್ (ಮೇ.22) ನಾಳೆ ಪಂದ್ಯವಾಡಲಿದೆ.

ಅಂದರೆ ಗುಜರಾತ್ ಟೈಟಾನ್ಸ್ ಮೊದಲ ಕ್ವಾಲಿಫೈಯರ್ ಆಡಲು ಸಿಎಸ್​ಕೆ ವಿರುದ್ಧ ಭರ್ಜರಿ ಜಯ ಸಾಧಿಸಿ ನೆಟ್ ರನ್ ರೇಟ್ ಉತ್ತಮಪಡಿಸಿಕೊಳ್ಳಬೇಕಿರುವುದು ಅನಿವಾರ್ಯ.

ಇಲ್ಲದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು ಗುಜರಾತ್ ಟೈಟಾನ್ಸ್ ತಂಡದ ನೆಟ್ ರನ್ ರೇಟ್ ಅನ್ನು ಸಹ ಟಾರ್ಗೆಟ್ ಮಾಡಲಿದೆ. ಈ ಮೂಲಕ ದ್ವಿತೀಯ ಸ್ಥಾನಕ್ಕೇರುವ ಮೂಲಕ ಮೊದಲ ಕ್ವಾಲಿಫೈಯರ್​ಗೇರಲು ಪ್ಲ್ಯಾನ್ ರೂಪಿಸಲಿದೆ.

ಇದನ್ನೂ ಓದಿ: IPL 2026: ಹೀಗಾದ್ರೆ CSK ಪ್ಲೇಆಫ್​ಗೇರುವುದು ಖಚಿತ..!

ಒಂದು ವೇಳೆ ಗುಜರಾತ್ ಟೈಟಾನ್ಸ್ ತಂಡವು ಸಿಎಸ್​ಕೆ ವಿರುದ್ಧ ಅಮೋಘ ಗೆಲುವು ದಾಖಲಿಸಿ ನೆಟ್ ರನ್ ರೇಟ್​ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಆರ್​ಸಿಬಿ ತಂಡವನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ ದ್ವಿತೀಯ ಅಥವಾ ಪ್ರಥಮ ಸ್ಥಾನಕ್ಕೇರಲು ಸನ್​ರೈಸರ್ಸ್ ಹೈದರಾಬಾದ್ ತಂಡ ಪ್ಲ್ಯಾನ್ ರೂಪಿಸಲಿದೆ.

ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಕೊನೆಯ ಪಂದ್ಯದಲ್ಲಿ ಗೆಲ್ಲಲು ಸಾಧ್ಯವಾಗದೇ ಇದ್ದರೆ, ಭಾರೀ ಅಂತರದಿಂದ ಸೋಲುವುದನ್ನು ತಪ್ಪಿಸಿಕೊಳ್ಳಬೇಕು. ಈ ಮೂಲಕ ಪಾಯಿಂಟ್ಸ್ ಟೇಬಲ್​ನಲ್ಲಿ ಟಾಪ್-2 ನಲ್ಲಿ ಕಾಣಿಸಿಕೊಳ್ಳುವ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡಬಹುದು.

Published On - 2:20 pm, Thu, 21 May 26

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!