ಸಚಿನ್ 40 ನೇ ವಯಸ್ಸಿನಲ್ಲಿ ರಣಜಿ ಆಡಬಹುದಾದರೆ ಕೊಹ್ಲಿ- ರೋಹಿತ್​ಗೆ ಏಕೆ ಸಾಧ್ಯವಿಲ್ಲ? ಅಭಿಮಾನಿಗಳ ನೇರ ಪ್ರಶ್ನೆ

Kohli & Rohit's Form Slump: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತದ ಸೋಲಿಗೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಕಳಪೆ ಬ್ಯಾಟಿಂಗ್ ಪ್ರಮುಖ ಕಾರಣವಾಗಿದೆ. ಎರಡೂ ಪಂದ್ಯಗಳಲ್ಲಿ ಇವರಿಬ್ಬರೂ ನಿರಾಶಾದಾಯಕ ಪ್ರದರ್ಶನ ನೀಡಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ದೇಶೀಯ ಕ್ರಿಕೆಟ್‌ನಲ್ಲಿ ಆಡದಿರುವುದು ಇದಕ್ಕೆ ಕಾರಣವೆಂದು ಅಭಿಮಾನಿಗಳು ವಾದಿಸುತ್ತಿದ್ದಾರೆ. ಕೊಹ್ಲಿ ಮತ್ತು ರೋಹಿತ್ ರಣಜಿ ಟ್ರೋಫಿಯಲ್ಲಿ ಆಡಬೇಕೆಂಬ ಆಗ್ರಹವಿದೆ.

ಸಚಿನ್ 40 ನೇ ವಯಸ್ಸಿನಲ್ಲಿ ರಣಜಿ ಆಡಬಹುದಾದರೆ ಕೊಹ್ಲಿ- ರೋಹಿತ್​ಗೆ ಏಕೆ ಸಾಧ್ಯವಿಲ್ಲ? ಅಭಿಮಾನಿಗಳ ನೇರ ಪ್ರಶ್ನೆ
ಕೊಹ್ಲಿ, ಸಚಿನ್, ರೋಹಿತ್
Follow us
ಪೃಥ್ವಿಶಂಕರ
|

Updated on: Oct 28, 2024 | 4:39 PM

ನ್ಯೂಜಿಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಸೋತಿರುವ ಟೀಂ ಇಂಡಿಯಾ 12 ವರ್ಷಗಳ ಬಳಿಕ ತವರಿನಲ್ಲಿ ಟೆಸ್ಟ್ ಸರಣಿಯನ್ನು ಕಳೆದುಕೊಂಡಿದೆ. ತಂಡದ ಈ ಕಳಪೆ ಸಾಧನೆಗೆ ಬ್ಯಾಟಿಂಗ್‌ ವೈಫಲ್ಯವೇ ಪ್ರಮುಖ ಕಾರಣ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಅದರಲ್ಲೂ ಅನುಭವಿಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಕಳಪೆ ಬ್ಯಾಟಿಂಗ್ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು. ಆಡಿರುವ ಎರಡು ಟೆಸ್ಟ್​ಗಳಲ್ಲಿ ಈ ಇಬ್ಬರು ಆಟಗಾರರು ಒಂದೊಂದು ಇನ್ನಿಂಗ್ಸ್​ನಲ್ಲಿ ಶೂನ್ಯಕ್ಕೆ ಔಟಾದರೆ, ಉಳಿದ ಇನ್ನಿಂಗ್ಸ್​ಗಳಲ್ಲಿ ರನ್ ಕಲೆಹಾಕಿದ್ದು ಕೂಡ ಅಲ್ಪಸ್ವಲ್ಪ. ಅನುಭವಿಗಳಾಗಿ ತಂಡವನ್ನು ಮುನ್ನಡೆಸಬೇಕಿದ್ದ ಈ ಇಬ್ಬರು ಬೇಗನೇ ಪೆವಿಲಿಯನ್ ಸೇರಿಕೊಂಡಿದ್ದು, ಇತರ ಆಟಗಾರರ ಪ್ರದರ್ಶನದ ಮೇಲೆ ಪರಿಣಾಮ ಬೀರಿತು. ಹೀಗಾಗಿ ಈ ಇಬ್ಬರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ರೋಹಿತ್ ಹಾಗೂ ಕೊಹ್ಲಿ ಫಾರ್ಮ್​ ಕಂಡುಕೊಳ್ಳಲು ದೇಶೀ ಕ್ರಿಕೆಟ್ ಆಡಲಿ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಕೊಹ್ಲಿ-ರೋಹಿತ್ ರಣಜಿ ಆಡಲಿ

ಬೆಂಗಳೂರು ಮತ್ತು ಪುಣೆ ಎರಡೂ ಟೆಸ್ಟ್ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರಿಂದ ಹೆಚ್ಚಿನ ನಿರೀಕ್ಷೆಗಳನ್ನು ಇಡಲಾಗಿತ್ತು. ಆದರೆ, ಇಬ್ಬರೂ ಸ್ಟಾರ್ ಬ್ಯಾಟ್ಸ್‌ಮನ್‌ಗಳು ಅಭಿಮಾನಿಗಳಿಗೆ ಸಾಕಷ್ಟು ನಿರಾಸೆ ಮೂಡಿಸಿದರು. ಪುಣೆ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ರೋಹಿತ್ ಖಾತೆ ತೆರೆಯದೆ ಔಟಾದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕೊಹ್ಲಿ ಸ್ಥಿತಿಯೂ ಇದಕ್ಕಿಂತ ಹೊರತಾಗಿರಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ ಒಂದು ರನ್ ಗಳಿಸಿದ್ದ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ 17 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು.

ಸತತ ಎರಡು ಪಂದ್ಯಗಳಲ್ಲಿ ಈ ಇಬ್ಬರ ಕಳಪೆ ಆಟವನ್ನು ನೋಡಿದ ಅಭಿಮಾನಿಗಳು ಕೊಹ್ಲಿ-ರೋಹಿತ್ ವಿರುದ್ಧ ಗುಡುಗಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಆಡದಿರುವ ಬಗ್ಗೆ ಅಭಿಮಾನಿಗಳು ಈ ಇಬ್ಬರು ಲೆಜೆಂಡರಿ ಬ್ಯಾಟ್ಸ್‌ಮನ್‌ಗಳಿಗೆ ನೇರ ಪ್ರಶ್ನೆಗಳನ್ನು ಕೇಳಿದ್ದಾರೆ. ‘ಕ್ರಿಕೆಟ್ ದೇವರು’ ಸಚಿನ್ ತೆಂಡೂಲ್ಕರ್ 40ರ ಹರೆಯದಲ್ಲಿ ರಣಜಿ ಟ್ರೋಫಿಯಲ್ಲಿ ಆಡುತ್ತಾರೆ ಎಂದಾದರೆ ರೋಹಿತ್-ಕೊಹ್ಲಿ ಏಕೆ ಆಡಬಾರದು ಎಂದು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತಿದ್ದಾರೆ.

ದೇಶೀಯ ಕ್ರಿಕೆಟ್‌ ಆಡಿ ವರ್ಷಗಳೇ ಕಳೆದಿವೆ

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ದೇಶೀಯ ಕ್ರಿಕೆಟ್ ಆಡಿ ವರ್ಷಗಳೇ ಕಳೆದಿವೆ. ಕೊಹ್ಲಿ ತಮ್ಮ ಕೊನೆಯ ರಣಜಿ ಪಂದ್ಯವನ್ನು 2012 ರಲ್ಲಿ ಆಡಿದ್ದರು. ಆದರೆ, ಸಚಿನ್ ತೆಂಡೂಲ್ಕರ್ ತಮ್ಮ ಕೊನೆಯ ರಣಜಿ ಪಂದ್ಯವನ್ನು 2013 ರಲ್ಲಿ ಆಡಿದ್ದರು. ಅಂದರೆ ಸಚಿನ್ ನಿವೃತ್ತಿಗೆ ಕೆಲವೇ ಸಮಯವಿದ್ದಾಗಲೂ ರಣಜಿಯಲ್ಲಿ ಆಡಿದ್ದರು. ಆದರೆ ಕೊಹ್ಲಿ ಮಾತ್ರ ಸಚಿನ್​ಗೂ ಮುನ್ನ ಅಂದರೆ 2012 ರಲ್ಲಿ ಕೊನೆಯ ಬಾರಿಗೆ ದೇಶೀಯ ಟೂರ್ನಿ ಆಡಿದ್ದರು. ಮತ್ತೊಂದೆಡೆ, ರೋಹಿತ್ ಶರ್ಮಾ ಕೊನೆಯ ಬಾರಿಗೆ 2016 ರಲ್ಲಿ ದೇಶೀಯ ಕ್ರಿಕೆಟ್‌ನಲ್ಲಿ ಆಡಿದ್ದರು. ಕೊಹ್ಲಿ ದೇಶೀಯ ಕ್ರಿಕೆಟ್‌ನಲ್ಲಿ ಆಡಿ 12 ವರ್ಷಗಳು ಕಳೆದಿದ್ದರೆ, ರೋಹಿತ್ ಕೂಡ 8 ವರ್ಷಗಳಿಂದ ದೇಶೀಯ ಕ್ರಿಕೆಟ್‌ನಲ್ಲಿ ಆಡಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ