IPL 2025: ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 16ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಿದ್ದವು. ಆದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ (Rohit Sharma) ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಪಂದ್ಯದ ನಡುವೆ ಹಿಟ್ಮ್ಯಾನ್ ಮೈದಾನದಲ್ಲಿ ಕಾಣಿಸಿಕೊಂಡಿದ್ದರು.
ಟಾಸ್ ಪ್ರಕ್ರಿಯೆ ವೇಳೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ ಅವರ ಅಲಭ್ಯತೆಯನ್ನು ಖಚಿತಪಡಿಸಿದ್ದರು. ಮೊಣಕಾಲಿನ ಗಾಯದ ಕಾರಣ ಅವರು ಈ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ತಿಳಿಸಿದ್ದರು.
ಆದರೆ ಮುಂಬೈ ಇಂಡಿಯನ್ಸ್ ತಂಡದ ಸ್ಟ್ರಾಟಜಿಕ್ ಟೈಮ್ ಔಟ್ ವೇಳೆ ರೋಹಿತ್ ಶರ್ಮಾ ಮೈದಾನದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಯಾವುದೇ ಸಮಸ್ಯೆ ಇಲ್ಲವೆಂಬಂತೆ ಸಹ ಆಟಗಾರರಿಗೆ ಸಲಹೆ ನೀಡುತ್ತಿರುವುದು ಸಹ ಕಂಡು ಬಂದಿತ್ತು. ಹೀಗಾಗಿಯೇ ರೋಹಿತ್ ಶರ್ಮಾ ನಿಜಕ್ಕೂ ಗಾಯಗೊಂಡಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಈ ಕೆಳಗಿನ ವಿಡಿಯೋ.
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ರೋಹಿತ್ ಶರ್ಮಾ ಗಾಯಗೊಂಡಿರುವುದು ನಿಜ. ಮೊಣಕಾಲಿಗೆ ಗಾಯವಾಗಿದ್ದ ಕಾರಣ ಅವರು ಅರ್ಧದಲ್ಲೇ ಅಭ್ಯಾಸ ನಿಲ್ಲಿಸಿದ್ದರು. ಅಲ್ಲದೆ ಫಿಸಿಯೋ ಜೊತೆ ಡ್ರೆಸ್ಸಿಂಗ್ ರೂಮ್ಗೆ ತೆರಳುತ್ತಿರುವ ವಿಡಿಯೋ ಇದಾಗಿದೆ.
ಇದಾಗ್ಯೂ ಅವರ ಗಾಯವು ಗಂಭೀರವಲ್ಲ. ಆದರೆ ಗಾಯದ ನಡುವೆ ಮತ್ತೆ ಕಣಕ್ಕಿಳಿಸಿ ರಿಸ್ಕ್ ತೆಗೆದುಕೊಳ್ಳಲು ಮುಂಬೈ ಇಂಡಿಯನ್ಸ್ ಮುಂದಾಗಿರಲಿಲ್ಲ. ಹೀಗಾಗಿ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಿದ್ದಾರೆ. ಅಲ್ಲದೆ ಮುಂದಿನ ಪಂದ್ಯದ ವೇಳೆಗೆ ಅವರು ಸಂಪೂರ್ಣ ಫಿಟ್ನೆಸ್ ಹೊಂದಲಿದ್ದು, ಅದರಂತೆ ಏಪ್ರಿಲ್ 7 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಣಕ್ಕಿಳಿಯಲಿದ್ದಾರೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊ0ಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಿಚೆಲ್ ಮಾರ್ಷ್ (60) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಸ್ಪೋಟಕ ಅರ್ಧಶತಕದ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 203 ರನ್ ಕಲೆಹಾಕಿತು.
ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಗೆ ಗಾಯ: ಬಿಗ್ ಅಪ್ಡೇಟ್ ನೀಡಿದ RCB ಕೋಚ್
204 ರನ್ಗ:ಳ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ (67) ಅರ್ಧಶತಕ ಬಾರಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಿರಲಿಲ್ಲ. ಪರಿಣಾಮ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 191 ರನ್ಗಳಿಸಿ 12 ರನ್ಗಳಿಂದ ಸೋಲೊಪ್ಪಿಕೊಂಡಿತು.
Published On - 11:23 am, Sat, 5 April 25