ಬವುಮಾ ಪ್ಲ್ಯಾನ್… ಇದೇ ಕಾರಣಕ್ಕೆ ಟೀಮ್ ಇಂಡಿಯಾಗೆ ಫಾಲೋಆನ್ ಹೇರಿಲ್ಲ..!
India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್ಗಳಿಸಿ ಆಲೌಟ್ ಆಗಿದೆ. ಇದೀಗ 288 ರನ್ಗಳ ಮುನ್ನಡೆಯೊಂದಿಗೆ ಸೌತ್ ಆಫ್ರಿಕಾ ತಂಡ ದ್ವಿತೀಯ ಇನಿಂಗ್ಸ್ ಆರಂಭಿಸಿದೆ.

ಗುವಾಹಟಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಮುಗಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಪ್ರಥಮ ಇನಿಂಗ್ಸ್ನಲ್ಲಿ 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್ಗಳಿಸಿ ಆಲೌಟ್ ಆಗಿದೆ.
ಇತ್ತ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 288 ರನ್ಗಳ ಹಿನ್ನಡೆ ಅನುಭವಿಸಿದರೂ ಸೌತ್ ಆಫ್ರಿಕಾ ತಂಡ ಫಾಲೋಆನ್ ಹೇರಿಲ್ಲ. ಸಾಮಾನ್ಯವಾಗಿ 200 ರನ್ಗಳ ಹಿನ್ನಡೆ ಅನುಭವಿಸಿದರೆ ಎದುರಾಳಿ ತಂಡವನ್ನು ಮತ್ತೆ ಬ್ಯಾಟಿಂಗ್ಗೆ ಆಹ್ವಾನಿಸಲಾಗುತ್ತದೆ. ಅದರಂತೆ ಆಲೌಟ್ ಆದ ಬೆನ್ನಲ್ಲೇ ಎದುರಾಳಿ ತಂಡ ದ್ವಿತೀಯ ಇನಿಂಗ್ಸ್ ಆರಂಭಿಸಬೇಕಾಗುತ್ತದೆ.
ಟೀಮ್ ಇಂಡಿಯಾ ಮೇಲೆ ಫಾಲೋಆನ್ ಹೇರುವ ಉತ್ತಮ ಅವಕಾಶ ಹೊಂದಿದ್ದರೂ ಟೆಂಬಾ ಬವುಮಾ ಮತ್ತೆ ಬ್ಯಾಟಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಅದರಂತೆ ಇದೀಗ ಸೌತ್ ಆಫ್ರಿಕಾ ತಂಡವು ದ್ವಿತೀಯ ಇನಿಂಗ್ಸ್ ಆರಂಭಿಸಿದೆ.
ಫಾಲೋಆನ್ ಹೇರಿಲ್ಲ ಏಕೆ?
ಸೌತ್ ಆಫ್ರಿಕಾ ತಂಡವು ಫಾಲೋಆನ್ ಹೇರದೇ ಇರಲು ಮುಖ್ಯ ಕಾರಣ ಸರಣಿಯಲ್ಲಿ ಮುನ್ನಡೆ ಹೊಂದಿರುವುದು. ಅಂದರೆ 2 ಮ್ಯಾಚ್ಗಳ ಸರಣಿಯಲ್ಲಿ ಸೌತ್ ಆಫ್ರಿಕಾ ಒಂದು ಪಂದ್ಯವನ್ನು ಗೆದ್ದುಕೊಂಡಿದೆ. ಇದೀಗ ದ್ವಿತೀಯ ಪಂದ್ಯದಲ್ಲಿ ಡ್ರಾ ಸಾಧಿಸಿದರೂ 1-0 ಅಂತರದಿಂದ ಸರಣಿ ಜಯಿಸಬಹುದು.
ಇದೇ ಪ್ಲ್ಯಾನ್ನೊಂದಿಗೆ ಸೌತ್ ಆಫ್ರಿಕಾ ತಂಡ ದ್ವಿತೀಯ ಇನಿಂಗ್ಸ್ ಆಡಲು ನಿರ್ಧರಿಸಿದೆ. ಅದರಂತೆ ನಾಲ್ಕನೇ ದಿನದಾಟದ ಮೂರನೇ ಸೆಷನ್ವರೆಗೂ ಸೌತ್ ಆಫ್ರಿಕಾ ಬ್ಯಾಟಿಂಗ್ ಮುಂದುವರೆಸುವ ಸಾಧ್ಯತೆಯಿದೆ. ಇದರ ನಡುವೆ ಕನಿಷ್ಠ 250 ರನ್ ಕಲೆಹಾಕಿದರೂ ಸೌತ್ ಆಫ್ರಿಕಾ ತಂಡದ ಒಟ್ಟು ಸ್ಕೋರ್ 538 ರನ್ ಆಗಲಿದೆ.
ಈ ಮೂಲಕ ಟೀಮ್ ಇಂಡಿಯಾಗೆ ಕೊನೆಯ ಇನಿಂಗ್ಸ್ನಲ್ಲಿ ಕನಿಷ್ಠ 539 ರನ್ಗಳ ಗುರಿ ನೀಡಬಹುದು. ಈ ಬೃಹತ್ ಮೊತ್ತವನ್ನು ಚೇಸ್ ಮಾಡಿ ಗೆಲ್ಲೋದು ಅಸಾಧ್ಯ. ಈ ಅಸಾಧ್ಯತೆಯ ನಡುವೆ ಟೀಮ್ ಇಂಡಿಯಾ ಮುಂದಿರುವುದು ಎರಡು ಆಯ್ಕೆಗಳು ಮಾತ್ರ. ಒಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದು ಅಥವಾ ಬೃಹತ್ ಮೊತ್ತವನ್ನು ಬೆನ್ನತ್ತಲು ಪ್ರಯತ್ನಿಸುವುದು.
ಆದರೆ ಬೃಹತ್ ಮೊತ್ತದ ಚೇಸಿಂಗ್ಗೆ ಕೈ ಹಾಕಿದರೆ ಟೀಮ್ ಇಂಡಿಯಾ ಆಲೌಟ್ ಆಗುವ ಸಾಧ್ಯತೆ ಹೆಚ್ಚು. ಏಕೆಂದರೆ ಮೊದಲ ಇನಿಂಗ್ಸ್ನಲ್ಲೇ ಭಾರತ ತಂಡವನ್ನು 201 ರನ್ಗಳಿಗೆ ಕಟ್ಟಿಹಾಕುವಲ್ಲಿ ಸೌತ್ ಆಫ್ರಿಕಾ ಬೌಲರ್ಗಳು ಯಶಸ್ವಿಯಾಗಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಗೆಲ್ಲಬಹುದು. ಇಲ್ಲ ಈ ಮ್ಯಾಚ್ ಡ್ರಾನಲ್ಲಿ ಅಂತ್ಯಗೊಳ್ಳಬಹುದು.
ಇಲ್ಲಿ ಸೌತ್ ಆಫ್ರಿಕಾ ತಂಡ ಗೆದ್ದರೆ 2-0 ಅಂತರದಿಂದ ಸರಣಿ ಜಯಿಸಲಿದೆ. ಇನ್ನು ಟೀಮ್ ಇಂಡಿಯಾ ಪಂದ್ಯವನ್ನು ಡ್ರಾ ಮಾಡಿಕೊಂಡರೆ 1-0 ಅಂತರದಿಂದ ಸೌತ್ ಆಫ್ರಿಕಾ ಸರಣಿಯನ್ನು ಗೆಲ್ಲಲಿದೆ. ಈ ಎಲ್ಲಾ ಲೆಕ್ಕಾಚಾರಗಳೊಂದಿಗೆ ಟೆಂಬಾ ಬವುಮಾ ಟೀಮ್ ಇಂಡಿಯಾ ಮೇಲೆ ಫಾಲೋಆನ್ ಹೇರಿಲ್ಲ.
ಸೌತ್ ಆಫ್ರಿಕಾ ತಂಡದ ಸ್ಕೋರ್ 314:
288 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಸೌತ್ ಆಫ್ರಿಕಾ ತಂಡವು 3ನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 26 ರನ್ ಕಲೆಹಾಕಿದೆ. ಈ ಮೂಲಕ ದ್ವಿತೀಯ ಇನಿಂಗ್ಸ್ನಲ್ಲಿ ಒಟ್ಟು 314 ರನ್ಗಳ ಮುನ್ನಡೆ ಹೊಂದಿದೆ.
ಸೌತ್ ಆಫ್ರಿಕಾ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್, ರಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಟ್ರಿಸ್ಟನ್ ಸ್ಟಬ್ಸ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಸೆನುರಾನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್.
ಇದನ್ನೂ ಓದಿ: ಟ್ರಾವಿಸ್ ಹೆಡ್ ಸಿಡಿಲಬ್ಬರದಿಂದ ಆಸ್ಟ್ರೇಲಿಯಾಗೆ 17 ಕೋಟಿ ರೂ. ನಷ್ಟ!
ಭಾರತ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಧ್ರುವ ಜುರೆಲ್, ರಿಷಭ್ ಪಂತ್ (ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
