Stuart Broad: 1.84 ಕೋಟಿ ರೂ.ಗೆ ಹರಾಜಾಗಿದ್ದರೂ IPL ಆಡದ ಸ್ಟುವರ್ಟ್​ ಬ್ರಾಡ್..!

Stuart Broad Records: ಇಂಗ್ಲೆಂಡ್ ಪರ 167 ಟೆಸ್ಟ್ ಪಂದ್ಯಗಳನ್ನಾಡಿರುವ ಬ್ರಾಡ್ ಇದುವರೆಗೆ 602 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 121 ಏಕದಿನ ಪಂದ್ಯಗಳಿಂದ 178 ವಿಕೆಟ್ ಹಾಗೂ 56 ಟಿ20 ಪಂದ್ಯಗಳಿಂದ 65 ವಿಕೆಟ್​​ಗಳನ್ನು ಪಡೆದಿದ್ದಾರೆ.

Stuart Broad: 1.84 ಕೋಟಿ ರೂ.ಗೆ ಹರಾಜಾಗಿದ್ದರೂ IPL ಆಡದ ಸ್ಟುವರ್ಟ್​ ಬ್ರಾಡ್..!
Stuart Broad
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 30, 2023 | 5:13 PM

Stuart Broad: ಇಂಗ್ಲೆಂಡ್ ತಂಡದ ವೇಗಿ ಸ್ಟುವರ್ಟ್​ ಬ್ರಾಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್​ಗೆ ವಿದಾಯ ಹೇಳಿದ್ದಾರೆ. ಮ್ಯಾಂಚೆಸ್ಟರ್​ನಲ್ಲಿ ನಡೆದ ಆ್ಯಶಸ್ ಸರಣಿಯ ಅಂತಿಮ ಪಂದ್ಯದ ಮೂಲಕ ಬ್ರಾಡ್ ಕ್ರಿಕೆಟ್​ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಕಳೆದ 17 ವರ್ಷಗಳಿಂದ ಇಂಗ್ಲೆಂಡ್ ತಂಡದ ಭಾಗವಾಗಿರುವ ಬಲಗೈ, ಕೆಲ ಲೀಗ್​ಗಳಲ್ಲಿ ಕಾಣಿಸಿಕೊಂಡರೂ ಐಪಿಎಲ್​ನಿಂದ ಮಾತ್ರ ದೂರವೇ ಉಳಿದಿದ್ದರು.

ಇದಕ್ಕೆ ಒಂದು ಕಾರಣ 2009 ರಲ್ಲಿ ಸ್ಟುವರ್ಟ್ ಬ್ರಾಡ್ ನೀಡಿದ್ದ ಹೇಳಿಕೆ ಎನ್ನಬಹುದು. ಅಂದು ಟೆಸ್ಟ್ ಕ್ರಿಕೆಟ್​ನತ್ತ ಹೆಚ್ಚಿನ ಗಮನ ಹರಿಸಲು ಯಾವುದೇ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಇಚ್ಛಿಸುವುದಿಲ್ಲ ಎಂದು ಬ್ರಾಡ್ ತಿಳಿಸಿದ್ದರು.

ಇದಾಗ್ಯೂ 2011 ರಲ್ಲಿ ಸ್ಟುವರ್ಟ್ ಬ್ರಾಡ್ ಅವರ ಹೆಸರು ಐಪಿಎಲ್ ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿತು. ಅಂದಿನ ಯಂಗ್ ಅ್ಯಂಡ್ ಎನರ್ಜಿಟಿಕ್ ವೇಗಿಯನ್ನು ಪಂಜಾಬ್ ಕಿಂಗ್ಸ್​ ಫ್ರಾಂಚೈಸಿಯು ಬರೋಬ್ಬರಿ 1.84 ಕೋಟಿಗೆ ಖರೀದಿಸಿದ್ದರು.

ಇತ್ತ ಕೋಟಿ ಮೊತ್ತಕ್ಕೆ ಹರಾಜಾದರೂ ಸ್ಟುವರ್ಟ್ ಬ್ರಾಡ್ ಐಪಿಎಲ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಪಾರ್ಶ್ವದ ಒತ್ತಡದ ಸಮಸ್ಯೆಯ ಕಾರಣ ಬ್ರಾಡ್ 2011 ರ ಐಪಿಎಲ್​ನಿಂದ ಹೊರಗುಳಿದಿದ್ದರು. ಇದಾಗ್ಯೂ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಅವರನ್ನು ಐಪಿಎಲ್ 2012 ಕ್ಕಾಗಿ ತಂಡದಲ್ಲೇ ಉಳಿಸಿಕೊಂಡಿತ್ತು.

ಆದರೆ 2012 ರಲ್ಲಿ ಪಕ್ಕೆಲುಬಿನ ಗಾಯದ ಸಮಸ್ಯೆಯ ಕಾರಣ ಸ್ಟುವರ್ಟ್ ಬ್ರಾಡ್ ಐಪಿಎಲ್​ನಲ್ಲಿ ಭಾಗವಹಿಸಲಾಗಲಿಲ್ಲ. ಇದಾದ ಬಳಿಕ ಮತ್ತೆ ಬ್ರಾಡ್ ಐಪಿಎಲ್​ನತ್ತ ಮುಖ ಮಾಡಿಲ್ಲ.

ಈ ಹಿಂದಿನ ತಮ್ಮ ಹೇಳಿಕೆಯಂತೆ ಟೆಸ್ಟ್ ಕ್ರಿಕೆಟ್​ನತ್ತ ಗಮನ ಕೇಂದ್ರೀಕರಿಸಿದರು. ಇದಾಗಿ ವರ್ಷಗಳ ಬಳಿಕ ಅವರು ನಿವೃತ್ತಿ ಘೋಷಿಸುವಾಗ ತಮ್ಮ ಬತ್ತಳಿಕೆಯಲ್ಲಿ 600 ಕ್ಕೂ ಅಧಿಕ ಟೆಸ್ಟ್ ವಿಕೆಟ್​ಗಳಿದ್ದವು. ಈ ಸಾಧನೆ ಮಾಡಿದ ವಿಶ್ವದ 2ನೇ ವೇಗದ ಬೌಲರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು ಎಂಬುದು ವಿಶೇಷ.

ಇದನ್ನೂ ಓದಿ: Stuart Broad: 151 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ಸ್ಟುವರ್ಟ್ ಬ್ರಾಡ್

ಇಂಗ್ಲೆಂಡ್ ಪರ 167 ಟೆಸ್ಟ್ ಪಂದ್ಯಗಳನ್ನಾಡಿರುವ ಬ್ರಾಡ್ ಇದುವರೆಗೆ 602 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 121 ಏಕದಿನ ಪಂದ್ಯಗಳಿಂದ 178 ವಿಕೆಟ್ ಹಾಗೂ 56 ಟಿ20 ಪಂದ್ಯಗಳಿಂದ 65 ವಿಕೆಟ್​​ಗಳನ್ನು ಪಡೆದಿದ್ದಾರೆ.

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್