AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಏಷ್ಯಾಕಪ್​ನಲ್ಲಿ ಆಡುವುದಿಲ್ಲ ವಿರಾಟ್ ಕೊಹ್ಲಿ- ರೋಹಿತ್ ಶರ್ಮಾ

Asia Cup 2025: 2025 ರ ಏಷ್ಯಾ ಕಪ್ ಟಿ20 ಸ್ವರೂಪದಲ್ಲಿ ನಡೆಯಲಿದ್ದು, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ನಿವೃತ್ತರಾಗಿರುವುದರಿಂದ ಈ ಪಂದ್ಯಾವಳಿಯಲ್ಲಿ ಆಡುವುದಿಲ್ಲ. ಜುಲೈ 26 ರಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಟೂರ್ನಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿರುವುದು ಗಮನಾರ್ಹ.

Asia Cup 2025: ಏಷ್ಯಾಕಪ್​ನಲ್ಲಿ ಆಡುವುದಿಲ್ಲ ವಿರಾಟ್ ಕೊಹ್ಲಿ- ರೋಹಿತ್ ಶರ್ಮಾ
Asia Cup 2025
ಪೃಥ್ವಿಶಂಕರ
|

Updated on: Jul 28, 2025 | 11:02 PM

Share

ಭಾರತ ಕ್ರಿಕೆಟ್ ತಂಡ ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿದೆ. ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪ್ರಸ್ತುತ  4 ಪಂದ್ಯಗಳು ನಡೆದಿದ್ದು ಭಾರತ ತಂಡ 1-2 ಅಂತರದಲ್ಲಿ ಹಿನ್ನಡೆಯಲ್ಲಿದೆ. ಉಭಯ ತಂಡಗಳ ನಡುವಿನ ಐದನೇ ಮತ್ತು ಅಂತಿಮ ಪಂದ್ಯ ಜುಲೈ 31 ರಿಂದ ನಡೆಯಲಿದೆ. ಅದರ ನಂತರ, ಟೀಂ ಇಂಡಿಯಾ ಬಾಂಗ್ಲಾದೇಶದಲ್ಲಿ ಟಿ20 ಮತ್ತು ಏಕದಿನ ಸರಣಿಯನ್ನು ಆಡಬೇಕಿತ್ತು. ಈ ಪ್ರವಾಸದಲ್ಲಿ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಏಕದಿನ ಸರಣಿಯಲ್ಲಿ ಆಡುವುದು ಖಚಿತವಾಗಿತ್ತು. ಆದರೆ ಈ ಪ್ರವಾಸವನ್ನು ಮುಂದೂಡಲಾಗಿದೆ. ಇದೀಗ ಸೆಪ್ಟೆಂಬರ್​ನಲ್ಲಿ ಏಷ್ಯಾಕಪ್ (Asia Cup 2025) ನಡೆಯಲಿದ್ದು, ಈ ಪಂದ್ಯಾವಳಿಯಲ್ಲೂ ಇವರಿಬ್ಬರು ಆಡಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಇವರಿಬ್ಬರನ್ನು ಮೈದಾನದಲ್ಲಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಇನ್ನೂ ಕೆಲವು ತಿಂಗಳು ಕಾಯಬೇಕಾಗುತ್ತದೆ.

ಏಷ್ಯಾಕಪ್​ನಲ್ಲಿ ಕೊಹ್ಲಿ- ರೋಹಿತ್ ಆಡಲ್ಲ

ವಾಸ್ತವವಾಗಿ 2023 ರ ಏಷ್ಯಾಕಪ್ ಅನ್ನು ಏಕದಿನ ಸ್ವರೂಪದಲ್ಲಿ ಆಡಲಾಯಿತು. ಇದಕ್ಕೆ ಕಾರಣ ಏಷ್ಯಾಕಪ್ ನಂತರ ಏಕದಿನ ವಿಶ್ವಕಪ್ ನಡೆಯಲಿತ್ತು. ಹೀಗಾಗಿ ಐಸಿಸಿ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಎಸಿಸಿ ಏಷ್ಯಾಕಪ್ ಸ್ವರೂಪವನ್ನು ನಿರ್ಧರಿಸುತ್ತದೆ. ಅದರಂತೆ ಏಕದಿನ ಸ್ವರೂಪದಲ್ಲಿ ನಡೆದಿದ್ದ ಏಷ್ಯಾಕಪ್ ಅನ್ನು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಗೆದ್ದುಕೊಂಡಿತು. ಈ ವರ್ಷ, ಮುಂಬರುವ 2026 ರ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಏಷ್ಯಾಕಪ್ ಅನ್ನು ಟಿ20 ಸ್ವರೂಪದಲ್ಲಿ ಆಡಲಾಗುವುದು. 2024 ರಲ್ಲಿ ಟಿ20 ವಿಶ್ವಕಪ್ ಗೆಲುವಿನ ನಂತರ ವಿರಾಟ್ ಮತ್ತು ರೋಹಿತ್ ಇಬ್ಬರೂ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಹೀಗಾಗಿ ಟಿ20 ಸ್ವರೂಪದಲ್ಲಿ ನಡೆಯಲಿರುವ ಏಷ್ಯಾಕಪ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಆಡಲು ಸಾಧ್ಯವಾಗುವುದಿಲ್ಲ.

ಜುಲೈ 26 ರಂದು ವೇಳಾಪಟ್ಟಿ ಪ್ರಕಟ

ವಾಸ್ತವವಾಗಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಜುಲೈ 26 ರ ಶನಿವಾರದಂದು ಬಹುನಿರೀಕ್ಷಿತ ಏಷ್ಯಾಕಪ್ ಪಂದ್ಯಾವಳಿಯ ವೇಳಾಪಟ್ಟಿಯನ್ನು ಪ್ರಕಟಿಸಿತು. ಎಸಿಸಿ ನೀಡಿದ ಮಾಹಿತಿಯ ಪ್ರಕಾರ, ಪಂದ್ಯಾವಳಿಯು ಸೆಪ್ಟೆಂಬರ್ 9 ರಿಂದ 28 ರವರೆಗೆ ಒಟ್ಟು 8 ತಂಡಗಳೊಂದಿಗೆ ನಡೆಯಲಿದೆ. ಈ ಪಂದ್ಯಾವಳಿಯಲ್ಲಿರುವ 8 ತಂಡಗಳನ್ನು ತಲಾ 4ತಂಡಗಳ 2 ಗುಂಪುಗಳಾಗಿ ವಿಂಗಡಿಸಲಾಗಿದೆ.

RCB: 2019 ರಲ್ಲಿಯೇ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಲು ತೀರ್ಮಾನಿಸಿತ್ತು ಆರ್​ಸಿಬಿ..!

ಪಹಲ್ಗಾಮ್ ದಾಳಿಯ ನಂತರ, ಭಾರತ ತಂಡ ಪಾಕಿಸ್ತಾನದ ವಿರುದ್ಧ ಆಡುವುದಿಲ್ಲ ಎಂದು ಹೇಳಲಾಗಿತ್ತು. ಆದಾಗ್ಯೂ, ಈ ಎರಡೂ ತಂಡಗಳನ್ನು ಒಂದೇ ಗುಂಪಿನಲ್ಲಿ ಇರಿಸಲಾಗಿದೆ. ಆದ್ದರಿಂದ ಈ ಎರಡು ತಂಡಗಳು ಪಂದ್ಯಾವಳಿಯಲ್ಲಿ ಕನಿಷ್ಠ ಎರಡು ಬಾರಿ ಮುಖಾಮುಖಿಯಾಗಲಿವೆ. ಎ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಯುಎಇ ಮತ್ತು ಓಮನ್ ತಂಡಗಳಿದ್ದರೆ, ಹಾಂಗ್ ಕಾಂಗ್, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಬಿ ಗುಂಪು ನಲ್ಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು