AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ತಂಡದಲ್ಲಿ ಕೊಹ್ಲಿ-ರೋಹಿತ್ ಯಾಕಿಲ್ಲ?- ಸೌರವ್ ಗಂಗೂಲಿ

Team India: ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರನ್ನು ಟಿ20 ತಂಡಕ್ಕೆ ಆಯ್ಕೆ ಮಾಡದಿರುವುದು ಏಕೆ ಎಂಬುದೇ ಅರ್ಥವಾಗುತ್ತಿಲ್ಲ. ಇಬ್ಬರು ಅನುಭವಿ ಆಟಗಾರರು.

ಟಿ20 ತಂಡದಲ್ಲಿ ಕೊಹ್ಲಿ-ರೋಹಿತ್ ಯಾಕಿಲ್ಲ?- ಸೌರವ್ ಗಂಗೂಲಿ
Rohit Sharma-Virat Kohli-Ganguly
TV9 Web
| Edited By: |

Updated on: Jul 10, 2023 | 6:08 PM

Share

India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಈಗಾಗಲೇ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಆದರೆ ಟಿ20 ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಸ್ಥಾನ ಪಡೆದಿಲ್ಲ. ಇದರ ಬೆನ್ನಲ್ಲೇ ಇಬ್ಬರು ಹಿರಿಯ ಆಟಗಾರರನ್ನು ತಂಡದಿಂದ ಕೈ ಬಿಡಲು ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಇಬ್ಬರು ದಿಗ್ಗಜರನ್ನು ತಂಡದಿಂದ ಕೈ ಬಿಡಲಾಗಿದ್ದರೂ, ಬಿಸಿಸಿಐ ಆಯ್ಕೆ ಸಮಿತಿ ಯಾವುದೇ ನಿರ್ದಿಷ್ಟ ಕಾರಣವನ್ನು ನೀಡಿಲ್ಲ. ಹೀಗಾಗಿಯೇ ಇದೀಗ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಈ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದಾರೆ.

ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರನ್ನು ಟಿ20 ತಂಡಕ್ಕೆ ಆಯ್ಕೆ ಮಾಡದಿರುವುದು ಏಕೆ ಎಂಬುದೇ ಅರ್ಥವಾಗುತ್ತಿಲ್ಲ. ಇಬ್ಬರು ಅನುಭವಿ ಆಟಗಾರರು. ಇದಾಗ್ಯೂ ವಿದೇಶಿ ಸರಣಿಯಿಂದ ಇಬ್ಬರನ್ನು ಹೊರಗಿಟ್ಟಿದ್ದಾರೆ ಎಂದು ಗಂಗೂಲಿ ಅಸಮಾಧಾನ ಹೊರಹಾಕಿದ್ದಾರೆ.

ಅದರಲ್ಲೂ ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅಂದರೆ ಅವರು ಅದ್ಭುತ ಫಾರ್ಮ್​ನಲ್ಲಿರುವುದು ಸ್ಪಷ್ಟ. ಇದಾಗ್ಯೂ ಕೊಹ್ಲಿಯನ್ನು ತಂಡದಿಂದ ಕೈ ಬಿಟ್ಟಿರುವುದೇಕೆ ಎಂದು ದಾದಾ ಪ್ರಶ್ನಿಸಿದ್ದಾರೆ.

ನನ್ನ ಪ್ರಕಾರ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ…ಇಬ್ಬರು ತಂಡದಲ್ಲಿರಬೇಕಿತ್ತು. ಆದರೆ ಆಯ್ಕೆ ಸಮಿತಿ ಯಾಕಾಗಿ ಇವರಿಬ್ಬರನ್ನು ಟೀಮ್​ನಿಂದ ಹೊರಗಿಟ್ಟಿದ್ದಾರೆ ಎಂದು ತಿಳಿಯುತ್ತಿಲ್ಲ ಎಂದು ಗಂಗೂಲಿ ತಿಳಿಸಿದ್ದಾರೆ.

ಇದೇ ವೇಳೆ ಟಿ20 ತಂಡಕ್ಕೆ ರಿಂಕು ಸಿಂಗ್, ಜಿತೇಶ್ ಶರ್ಮಾ ಹಾಗೂ ರುತುರಾಜ್ ಗಾಯಕ್ವಾಡ್ ಆಯ್ಕೆಯಾಗದಿರುವ ಬಗ್ಗೆ ಮಾತನಾಡಿರುವ ಗಂಗೂಲಿ, ಅವರು ಈಗಷ್ಟೇ ಅತ್ಯುತ್ತಮ ಪ್ರದರ್ಶನ ನೀಡಲು ಆರಂಭಿಸಿದ್ದಾರೆ. ಅದನ್ನು ಮುಂದುವರೆಸಿದರೆ ಖಂಡಿತವಾಗಿಯೂ ಶೀಘ್ರದಲ್ಲೇ ತಂಡದಲ್ಲಿ ಅವಕಾಶ ಸಿಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!

ಭಾರತ ಟಿ20 ತಂಡ: ಹಾರ್ದಿಕ್ ಪಾಂಡ್ಯ ( ನಾಯಕ), ಸೂರ್ಯ ಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.

Follow Us
TV9 Web
TV9 Web

TV9 Kannada

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!