India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಈಗಾಗಲೇ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಆದರೆ ಟಿ20 ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಸ್ಥಾನ ಪಡೆದಿಲ್ಲ. ಇದರ ಬೆನ್ನಲ್ಲೇ ಇಬ್ಬರು ಹಿರಿಯ ಆಟಗಾರರನ್ನು ತಂಡದಿಂದ ಕೈ ಬಿಡಲು ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಇಬ್ಬರು ದಿಗ್ಗಜರನ್ನು ತಂಡದಿಂದ ಕೈ ಬಿಡಲಾಗಿದ್ದರೂ, ಬಿಸಿಸಿಐ ಆಯ್ಕೆ ಸಮಿತಿ ಯಾವುದೇ ನಿರ್ದಿಷ್ಟ ಕಾರಣವನ್ನು ನೀಡಿಲ್ಲ. ಹೀಗಾಗಿಯೇ ಇದೀಗ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಈ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರನ್ನು ಟಿ20 ತಂಡಕ್ಕೆ ಆಯ್ಕೆ ಮಾಡದಿರುವುದು ಏಕೆ ಎಂಬುದೇ ಅರ್ಥವಾಗುತ್ತಿಲ್ಲ. ಇಬ್ಬರು ಅನುಭವಿ ಆಟಗಾರರು. ಇದಾಗ್ಯೂ ವಿದೇಶಿ ಸರಣಿಯಿಂದ ಇಬ್ಬರನ್ನು ಹೊರಗಿಟ್ಟಿದ್ದಾರೆ ಎಂದು ಗಂಗೂಲಿ ಅಸಮಾಧಾನ ಹೊರಹಾಕಿದ್ದಾರೆ.
ಅದರಲ್ಲೂ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅಂದರೆ ಅವರು ಅದ್ಭುತ ಫಾರ್ಮ್ನಲ್ಲಿರುವುದು ಸ್ಪಷ್ಟ. ಇದಾಗ್ಯೂ ಕೊಹ್ಲಿಯನ್ನು ತಂಡದಿಂದ ಕೈ ಬಿಟ್ಟಿರುವುದೇಕೆ ಎಂದು ದಾದಾ ಪ್ರಶ್ನಿಸಿದ್ದಾರೆ.
ನನ್ನ ಪ್ರಕಾರ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ…ಇಬ್ಬರು ತಂಡದಲ್ಲಿರಬೇಕಿತ್ತು. ಆದರೆ ಆಯ್ಕೆ ಸಮಿತಿ ಯಾಕಾಗಿ ಇವರಿಬ್ಬರನ್ನು ಟೀಮ್ನಿಂದ ಹೊರಗಿಟ್ಟಿದ್ದಾರೆ ಎಂದು ತಿಳಿಯುತ್ತಿಲ್ಲ ಎಂದು ಗಂಗೂಲಿ ತಿಳಿಸಿದ್ದಾರೆ.
ಇದೇ ವೇಳೆ ಟಿ20 ತಂಡಕ್ಕೆ ರಿಂಕು ಸಿಂಗ್, ಜಿತೇಶ್ ಶರ್ಮಾ ಹಾಗೂ ರುತುರಾಜ್ ಗಾಯಕ್ವಾಡ್ ಆಯ್ಕೆಯಾಗದಿರುವ ಬಗ್ಗೆ ಮಾತನಾಡಿರುವ ಗಂಗೂಲಿ, ಅವರು ಈಗಷ್ಟೇ ಅತ್ಯುತ್ತಮ ಪ್ರದರ್ಶನ ನೀಡಲು ಆರಂಭಿಸಿದ್ದಾರೆ. ಅದನ್ನು ಮುಂದುವರೆಸಿದರೆ ಖಂಡಿತವಾಗಿಯೂ ಶೀಘ್ರದಲ್ಲೇ ತಂಡದಲ್ಲಿ ಅವಕಾಶ ಸಿಗಲಿದೆ ಎಂದಿದ್ದಾರೆ.
ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!
ಭಾರತ ಟಿ20 ತಂಡ: ಹಾರ್ದಿಕ್ ಪಾಂಡ್ಯ ( ನಾಯಕ), ಸೂರ್ಯ ಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.