IND vs WI: ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್- ಕೊಹ್ಲಿ ಆಡದಿರಲು ಕಾರಣವೇನು?

IND vs WI: ಅನುಭವಿಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿದ ಆಡಳಿತ ಮಂಡಳಿಗೆ ಈ ಇಬ್ಬರ ಉಪಸ್ಥಿತಿ ಎಷ್ಟು ಮುಖ್ಯ ಎಂಬುದು ಚೆನ್ನಾಗಿ ಅರ್ಥವಾದಂತ್ತಿದೆ.

IND vs WI: ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್- ಕೊಹ್ಲಿ ಆಡದಿರಲು ಕಾರಣವೇನು?
ರೋಹಿತ್- ಕೊಹ್ಲಿ
Follow us
ಪೃಥ್ವಿಶಂಕರ
|

Updated on:Jul 30, 2023 | 7:15 AM

ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾದ (India vs West Indies) ಅಜೇಯ ಓಟಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಕಂಡ ಹಾರ್ದಿಕ್ (Hardik Pandya) ಪಡೆ, ಏಕದಿನ ಸರಣಿಯನ್ನು ಕಳೆದುಕೊಳ್ಳುವ ಅತಂಕದಲ್ಲಿದೆ. ಮೊದಲ ಏಕದಿನ ಪಂದ್ಯದಲ್ಲಿ ಕಡಿಮೆ ಗುರಿಯ ಮುಂದೆಯೂ ಗೆಲುವಿಗಾಗಿ ಹೆಣಗಾಡಿದ ಟೀಂ ಇಂಡಿಯಾದ (Team India) ಬ್ಯಾಟಿಂಗ್ ವಿಭಾಗ ಎರಡನೇ ಟೆಸ್ಟ್ ಪಂದ್ಯದಲ್ಲೂ ಮಂಕಾಯಿತು. ಇನ್ನು ಈ ಪಂದ್ಯದಲ್ಲಿ ಅನುಭವಿಗಳಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿಗೆ (Virat Kohli) ವಿಶ್ರಾಂತಿ ನೀಡಿದ ಆಡಳಿತ ಮಂಡಳಿಗೆ ಈ ಇಬ್ಬರ ಉಪಸ್ಥಿತಿ ಎಷ್ಟು ಮುಖ್ಯ ಎಂಬುದು ಚೆನ್ನಾಗಿ ಅರ್ಥವಾದಂತ್ತಿದೆ.

ರೋಹಿತ್ ಹಾಗೂ ಕೊಹ್ಲಿಗೆ ಬ್ರೇಕ್

ಮೊದಲ ಪಂದ್ಯದಲ್ಲಿ ಈ ಇಬ್ಬರು ತಂಡದಲ್ಲಿದ್ದರೂ ಟಾಪ್ ಆರ್ಡರ್​ನಲ್ಲಿ ಬ್ಯಾಟಿಂಗ್​ ಮಾಡಿರಲಿಲ್ಲ. ಅಂತಿಮವಾಗಿ ರೋಹಿತ್ ಮೈದಾನಕ್ಕಿಳಿದು ತಂಡಕ್ಕೆ ಗೆಲುವಿನ ಹಾದಿ ತೋರಿಸಿದ್ದರು. ಆದರೆ ಕೊಹ್ಲಿಗೆ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್​ ಮಾಡುವ ಅವಕಾಶ ಸಿಕ್ಕಿರಲಿಲ್ಲ. ಇದಕ್ಕೆ ಕಾರಣ ನೀಡಿದ್ದ ರೋಹಿತ್, ಏಕದಿನ ಮಾದರಿಗೆ ಹೊಸದಾಗಿ ಬಂದಿರುವ ಆಟಗಾರರಿಗೆ ಹೆಚ್ಚು ಅವಕಾಶ ನೀಡುವುದು ನಮ್ಮ ಉದ್ದೇಶ. ಹೀಗಾಗಿ ಈ ಸರಣಿಯಲ್ಲಿ ಇಂತಹ ಹೊಸ ಪ್ರಯೋಗಗಳನ್ನು ಟೀಂ ಇಂಡಿಯಾ ಮಾಡಲಿದೆ ಎಂದಿದ್ದರು. ಅದರ ಪ್ರಕಾರ ಎರಡನೇ ಏಕದಿನ ಪಂದ್ಯದಲ್ಲಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿ, ರೋಹಿತ್ ಹಾಗೂ ಕೊಹ್ಲಿಯನ್ನು ಹೊರಗಿಡಲಾಗಿತ್ತು. ಪಂದ್ಯದ ಟಾಸ್ ಬಳಿಕ ಈ ಬಗ್ಗೆ ಮಾತನಾಡಿದ್ದ ನಾಯಕ ಹಾರ್ದಿಕ್ ಪಾಂಡ್ಯ ತಂಡದ ನಿಲುವೇನು ಎಂಬುದನ್ನು ಸ್ಪಷ್ಟ ಪಡಿಸಿದ್ದರು.

IND vs WI: ಕೊಹ್ಲಿ- ರೋಹಿತ್ ಇಲ್ಲದ ಟೀಂ ಇಂಡಿಯಾಕ್ಕೆ ಸೋಲಿನ ಶಾಕ್! ಸರಣಿಯಲ್ಲಿ ಸಮಬಲ ಸಾಧಿಸಿದ ವಿಂಡೀಸ್

ಹಾರ್ದಿಕ್ ಪಾಂಡ್ಯ ನೀಡಿದ ಕಾರಣವೇನು?

ಟಾಸ್ ಮುಗಿದ ಬಳಿಕ ರೋಹಿತ್- ಕೊಹ್ಲಿ ಅಲಭ್ಯತೆಯ ಬಗ್ಗೆ ಮಾತನಾಡಿದ್ದ ಪಾಂಡ್ಯ, ರೋಹಿತ್ ಮತ್ತು ವಿರಾಟ್ ಕೊಹ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರ ಕ್ರಿಕೆಟ್ ಆಡುತ್ತಿರುವುದರಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಏಷ್ಯಾಕಪ್ ಮತ್ತು ವಿಶ್ವಕಪ್‌ನಂತಹ ದೊಡ್ಡ ಪಂದ್ಯಾವಳಿಗಳಿಗೆ ಮುಂಚಿತವಾಗಿ ತಂಡದಲ್ಲಿನ ಇತರ ಆಟಗಾರರನ್ನು ಪರೀಕ್ಷಿಸುವ ಗುರಿಯನ್ನು ಮ್ಯಾನೆಜ್​ಮೆಂಟ್ ಇಟ್ಟುಕೊಂಡಿದೆ. ಹೀಗಾಗಿ ಕೆಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಈ ಪ್ರಯತ್ನ ಮಾಡಲಾಗಿದೆ. ರೋ (ರೋಹಿತ್ ಶರ್ಮಾ) ಮತ್ತು ವಿರಾಟ್ (ಕೊಹ್ಲಿ) ನಿರಂತರ ಕ್ರಿಕೆಟ್ ಆಡುತ್ತಿದ್ದಾರೆ. ಅವರು ಈ ಆಟಕ್ಕೆ ವಿಶ್ರಾಂತಿ ಪಡೆಯಬೇಕು ಮತ್ತು ಮೂರನೇ ಏಕದಿನ ಪಂದ್ಯಕ್ಕೆ ಅವರು ತಾಜಾ ಆಗಿರಬೇಕು ಎಂದು ನಾವು ಭಾವಿಸಿದ್ದೇವೆ. ಆದ್ದರಿಂದ, ಅಷ್ಟೇ, ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹಾರ್ದಿಕ್ ಹೇಳಿದರು.

ಸಂಜು- ಅಕ್ಷರ್ ವಿಫಲ

ಇನ್ನು ಬಾರ್ಬಡೋಸ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಮತ್ತು ಕೊಹ್ಲಿ ಬದಲಿಗೆ ಅವಕಾಶ ಪಡೆದಿದ್ದ ವಿಕೆಟ್‌ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತು ಆಲ್ ರೌಂಡರ್ ಅಕ್ಷರ್ ಪಟೇಲ್ ವಿಶೇಷವಾಗಿ ಏನ್ನನ್ನು ಮಾಡಲಿಲ್ಲ. ಸಂಜು 9 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರೆ, ಅಕ್ಷರ್ ಪಟೇಲ್ 1 ರನ್​ಗಳಿಗೆ ಪೆವಿಲಿಯನ್ ಹಾದಿ ಹಿಡಿದರು. ಇದೀಗ ಮೂರು ಪಂದ್ಯಗಳ ಏಕದಿನ ಸರಣಿ 1-1 ರಿಂದ ಸಮಬಲಗೊಂಡಿದ್ದು, ಟ್ರಿನಿಡಾಡ್​ನ ಪೋರ್ಟ್ ಆಫ್ ಸ್ಪೇನ್, ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ನಡೆಯಲ್ಲಿರುವ ಮೂರನೇ ಏಕದಿನ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸರಣಿ ಕೈಸೇರಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:12 am, Sun, 30 July 23

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ