AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಂಡೀಸ್ ವೇಗಿಗಳ ಬೆಂಕಿ ಬೌಲಿಂಗ್: ಮೊದಲ ದಿನವೇ ಆಸ್ಟ್ರೇಲಿಯಾ ಆಲೌಟ್

West Indies vs Australia, 1st Test: ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವು ಬಾರ್ಬಡೋಸ್​ನಲ್ಲಿ ನಡೆಯುತ್ತಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡವು ಕೇವಲ 180 ರನ್​ಗಳಿಗೆ ಆಲೌಟ್ ಆಗಿದೆ.

ವಿಂಡೀಸ್ ವೇಗಿಗಳ ಬೆಂಕಿ ಬೌಲಿಂಗ್: ಮೊದಲ ದಿನವೇ ಆಸ್ಟ್ರೇಲಿಯಾ ಆಲೌಟ್
Wi Vs Aus
ಝಾಹಿರ್ ಯೂಸುಫ್
|

Updated on: Jun 26, 2025 | 7:55 AM

Share

ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡವು ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ವಿಂಡೀಸ್ ವೇಗಿಗಳು ಯಶಸ್ವಿಯಾಗಿದ್ದರು.

ಆರಂಭಿಕನಾಗಿ ಕಣಕ್ಕಿಳಿದ ಸ್ಯಾಮ್ ಕೊನ್​ಸ್ಟಾಸ್ (3) ಗೆ ಶಮರ್ ಜೋಸೆಫ್ 4ನೇ ಓವರ್ ನಲ್ಲಿ ಪೆವಿಲಿಯನ್ ಹಾದಿ ತೋರಿಸಿದರು. ಇದರ ಬೆನ್ನಲ್ಲೇ ಕ್ಯಾಮರೋನ್ ಗ್ರೀನ್ (3) ಕೂಡ ವಿಕೆಟ್ ಒಪ್ಪಿಸಿದರು.

ಇನ್ನು ಜೇಡನ್ ಸೀಲ್ಸ್ ಎಸೆತದಲ್ಲಿ ಜೋಶ್ ಇಂಗ್ಲಿಸ್ (5) ಔಟಾದರೆ, ಉಸ್ಮಾನ್ ಖ್ವಾಜಾ (47) ವಿಕೆಟ್ ಪಡೆಯುವಲ್ಲಿ ಶಮರ್ ಜೋಸೆಫ್ ಯಶಸ್ವಿಯಾದರು. ಆ ಬಳಿಕ ಬಂದ ಬ್ಯೂ ವೆಬ್​ಸ್ಟರ್ (11) ಶಮರ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರೆ, ಅಲೆಕ್ಸ್ ಕ್ಯಾರಿ (8), ಪ್ಯಾಟ್ ಕಮಿನ್ಸ್ (28) ಹಾಗೂ ಮಿಚೆಲ್ ಸ್ಟಾರ್ಕ್ (0) ಗೆ ಜೇಡನ್ ಸೀಲ್ಸ್ ಪೆವಿಲಿಯನ್ ಹಾದಿ ತೋರಿಸಿದರು.

ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ಆಡಿದ ಟ್ರಾವಿಸ್ ಹೆಡ್ 78 ಎಸೆತಗಳಲ್ಲಿ 9 ಫೋರ್ ಗಳೊಂದಿಗೆ 59 ರನ್ ಕಲೆಹಾಕಿದರು. ಈ ಹಂತದಲ್ಲಿ ದಾಳಿಗಿಳಿದ ಜಸ್ಟಿನ್ ಗ್ರೀವ್ಸ್, ಹೆಡ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಇದರ ಬೆನ್ನಲ್ಲೇ ಜೋಶ್ ಹೇಝಲ್ ವುಡ್ (4) ವಿಕೆಟ್ ಕಬಳಿಸಿ ಜೇಡನ್ ಸೀಲ್ಸ್ ಆಸ್ಟ್ರೇಲಿಯಾ ತಂಡವನ್ನು ಕೇವಲ 180 ರನ್ ಗಳಿಗೆ ಆಲೌಟ್ ಮಾಡಿದರು. ವಿಂಡೀಸ್ ಪರ ಜೇಡನ್ ಸೀಲ್ಸ್ 60 ರನ್ ನೀಡಿ 5 ವಿಕೆಟ್ ಪಡೆದರೆ, ಶಮರ್ ಜೋಸೆಫ್ 46 ರನ್ ಗೆ 4 ವಿಕೆಟ್ ಕಬಳಿಸಿ ಮಿಂಚಿದರು.

ವಿಂಡೀಸ್​ಗೂ ಆರಂಭಿಕ ಆಘಾತ:

ಆಸ್ಟ್ರೇಲಿಯಾ ತಂಡವನ್ನು ಅಲ್ಪ ಮೊತ್ತಕ್ಕೆ ಆಲೌಟ್ ಮಾಡಿದ ಮೊದಲ ಇನಿಂಗ್ಸ್ ಶುರು ಮಾಡಿದ ವೆಸ್ಟ್ ಇಂಡೀಸ್ ತಂಡವು ಕೇವಲ 57 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡಿದೆ. ಆರಂಭಿಕರಾದ ಕ್ರೇಗ್ ಬ್ರಾಥ್​ವೈಟ್ (4) ಹಾಗೂ ಜಾನ್ ಕ್ಯಾಂಪ್‌ಬೆಲ್ (7) ಗೆ ಮಿಚೆಲ್ ಸ್ಟಾರ್ಕ್​ ಪೆವಿಲಿಯನ್ ಹಾದಿ ತೋರಿಸಿದ್ದಾರೆ. ಇನ್ನು ಕೀಸಿ ಕಾರ್ಟಿ (20) ಪ್ಯಾಟ್ ಕಮಿನ್ಸ್ ಎಸೆತದಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದಾರೆ.

ಆ ಬಳಿಕ ಬಂದ ಜೋಮೆಲ್ ವಾರಿಕನ್ (0) ಅವರನ್ನು ಕ್ಲೀನ್ ಬೌಲ್ಡ್ ಮಾಡುವಲ್ಲಿ ಜೋಶ್ ಹೇಝಲ್​ವುಡ್ ಯಶಸ್ವಿಯಾಗಿದ್ದಾರೆ. ಅದರಂತೆ ಮೊದಲ ದಿನದಾಟದ ಅಂತ್ಯಕ್ಕೆ ವೆಸ್ಟ್ ಇಂಡೀಸ್ ತಂಡವು 4 ವಿಕೆಟ್ ಕಳೆದುಕೊಂಡು ಕೇವಲ 57 ರನ್​ ಕಲೆಹಾಕಿದೆ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕ್ರೇಗ್ ಬ್ರಾಥ್‌ವೈಟ್ , ಜಾನ್ ಕ್ಯಾಂಪ್‌ಬೆಲ್ , ಕೀಸಿ ಕಾರ್ಟಿ , ಬ್ರಾಂಡನ್ ಕಿಂಗ್ , ರೋಸ್ಟನ್ ಚೇಸ್ (ನಾಯಕ) , ಶೈ ಹೋಪ್ (ವಿಕೆಟ್ ಕೀಪರ್) , ಜಸ್ಟಿನ್ ಗ್ರೀವ್ಸ್ , ಜೋಮೆಲ್ ವಾರಿಕನ್ , ಅಲ್ಜಾರಿ ಜೋಸೆಫ್ , ಶಮರ್ ಜೋಸೆಫ್ , ಜೇಡನ್ ಸೀಲ್ಸ್.

ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಕೀರನ್ ಪೊಲಾರ್ಡ್

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ , ಸ್ಯಾಮ್ ಕೊನ್​ಸ್ಟಾಸ್ , ಕ್ಯಾಮರೋನ್ ಗ್ರೀನ್ , ಜೋಶ್ ಇಂಗ್ಲಿಸ್ , ಟ್ರಾವಿಸ್ ಹೆಡ್ , ಬ್ಯೂ ವೆಬ್‌ಸ್ಟರ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಜೋಶ್ ಹೇಝಲ್​ವುಡ್.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ