AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಪ್ ಆರ್ಡರ್ 6 ರನ್​: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ

West Indies vs Australia: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​ನಲ್ಲಿ 225 ರನ್ ಕಲೆಹಾಕಿದರೆ, ವೆಸ್ಟ್ ಇಂಡೀಸ್ ತಂಡವು 143 ರನ್​ಗಳಿಸಿ ಆಲೌಟ್ ಆಯಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 121 ರನ್​ಗಳಿಗೆ ಆಲೌಟ್ ಆಗಿದ್ದರು. ಅದರಂತೆ ಕೊನೆಯ ಇನಿಂಗ್ಸ್​ನಲ್ಲಿ 204 ರನ್​ಗಳ ಗುರಿ ಪಡೆದ ವೆಸ್ಟ್ ಇಂಡೀಸ್ ಕೇವಲ 27 ರನ್​ಗಳಿಗೆ ಆಲೌಟ್ ಆಗಿದೆ.

ಟಾಪ್ ಆರ್ಡರ್ 6 ರನ್​: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ
Wi Vs Aus
ಝಾಹಿರ್ ಯೂಸುಫ್
|

Updated on: Jul 15, 2025 | 12:58 PM

Share

ಟೆಸ್ಟ್ ಇನಿಂಗ್ಸ್​ನ ಅಗ್ರ ಕ್ರಮಾಂಕದ 6 ಬ್ಯಾಟರ್​ಗಳು ಕಲೆಹಾಕಿರುವುದು ಕೇವಲ 6 ರನ್​ಗಳು ಮಾತ್ರ. ಈ ಆರು ರನ್​ಗಳೊಂದಿಗೆ ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ಆರಂಭ ಪಡೆದ ಅನಪೇಕ್ಷಿತ ದಾಖಲೆಯೊಂದು ವೆಸ್ಟ್ ಇಂಡೀಸ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ಕೆಟ್ಟ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತು.

ಜಮೈಕಾದ ಸಬೀನಾ ಪಾರ್ಕ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದ ನಾಲ್ಕನೇ ಇನಿಂಗ್ಸ್​ನಲ್ಲಿ ವೆಸ್ಟ್ ಇಂಡೀಸ್ ತಂಡವು 204 ರನ್​ಗಳ ಗುರಿ ಪಡೆದಿತ್ತು. ಈ ಗುರಿಯನ್ನು ಬೆನ್ನತ್ತಲು ಆಗಮಿಸಿದ ವಿಂಡೀಸ್ ಆರಂಭಿಕ ದಾಂಡಿಗ ಜಾನ್ ಕ್ಯಾಂಪ್ಬೆಲ್ ಶೂನ್ಯಕ್ಕೆ ಔಟಾದರು. ಇದರ ಬೆನ್ನಲ್ಲೇ ಕ್ಲೆವಾನ್ ಅ್ಯಂಡರ್ಸನ್ (0) ಕೂಡ ಸೊನ್ನೆ ಸುತ್ತಿದರು. ಇನ್ನು ಮೈಕೆಲ್ ಲೂಯಿಸ್ 4 ರನ್​ ಕಲೆಹಾಕಿ ವಿಕೆಟ್ ಒಪ್ಪಿಸಿದರೆ, ಬ್ರಾಂಡನ್ ಕಿಂಗ್ಸ್ (0) ಹಾಗೂ ರೋಸ್ಟನ್ ಚೇಸ್ (0) ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಇನ್ನು ಶಾಯ್ ಹೋಪ್ 2 ರನ್​ಗಳಿಸಿ ಔಟಾದರು.

ಈ ಮೂಲಕ ವೆಸ್ಟ್ ಇಂಡೀಸ್ ತಂಡದ ಅಗ್ರ ಕ್ರಮಾಂಕದ ಆರು ಬ್ಯಾಟರ್​ಗಳು ಜೊತೆಗೂಡಿ ಕಲೆಹಾಕಿದ್ದು ಕೇವಲ 6 ರನ್​ಗಳು ಮಾತ್ರ. ಇದು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಟಾಪ್-6 ಬ್ಯಾಟರ್​ಗಳು ಜೊತೆಗೂಡಿ ಕಲೆಹಾಕಿದ ಅತ್ಯಂತ ಕಡಿಮೆ ಮೊತ್ತ. ಈ ಮೂಲಕ ವೆಸ್ಟ್ ಇಂಡೀಸ್ ದಾಂಡಿಗರು ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತ ಕಳಪೆ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ಟಾಪ್-6 ಬ್ಯಾಟರ್​ಗಳು 12 ರನ್​ಗಳಿಸಿದ್ದು ಅತ್ಯಂತ ಹೀನಾಯ ಪ್ರದರ್ಶನವಾಗಿತ್ತು. 1888 ರಲ್ಲಿ ಸಿಡ್ನಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾದ ಅಗ್ರ ಕ್ರಮಾಂಕದ 6 ಬ್ಯಾಟರ್​ಗಳು 12 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇದೀಗ ಇದಕ್ಕಿಂತಲೂ ಕೆಟ್ಟ ಪ್ರದರ್ಶನ ನೀಡಿ ವೆಸ್ಟ್ ಇಂಡೀಸ್ ಭಾರೀ ಮುಖಭಂಗ ಅನುಭವಿಸಿದೆ.

ಇದನ್ನೂ ಓದಿ: ಟೀಮ್ ಇಂಡಿಯಾ ಸೋಲಿಗೆ ರವೀಂದ್ರ ಜಡೇಜಾ ಕಾರಣ..!

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​ನಲ್ಲಿ 225 ರನ್ ಕಲೆಹಾಕಿದರೆ, ವೆಸ್ಟ್ ಇಂಡೀಸ್ ತಂಡವು 143 ರನ್​ಗಳಿಸಿ ಆಲೌಟ್ ಆಯಿತು.  ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 121 ರನ್​ಗಳಿಗೆ ಆಲೌಟ್ ಆಗಿದ್ದರು. ಅದರಂತೆ ಕೊನೆಯ ಇನಿಂಗ್ಸ್​ನಲ್ಲಿ 204 ರನ್​ಗಳ ಗುರಿ ಪಡೆದ ವೆಸ್ಟ್ ಇಂಡೀಸ್ ಕೇವಲ 27 ರನ್​ಗಳಿಗೆ ಆಲೌಟ್ ಆಗುವ ಮೂಲಕ ಟೆಸ್ಟ್ ಇತಿಹಾಸದಲ್ಲೇ ಅತೀ ರನ್ ಗಳಿಸಿದ 2ನೇ ತಂಡ ಎನಿಸಿಕೊಂಡಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ