AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ 36 ರನ್​ಗಳ ದಾಖಲೆ ಉಡೀಸ್: ಕೇವಲ ಎರಡಂಕಿ ಮೊತ್ತಕ್ಕೆ ವೆಸ್ಟ್ ಇಂಡೀಸ್ ಆಲೌಟ್

WI vs AUS: ಕಳೆದ 50 ವರ್ಷಗಳಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಂತ ಕಡಿಮೆ ಮೊತ್ತಕ್ಕೆ ಆಲೌಟ್ ಆದ ತಂಡವೆಂಬ ಅಪಖ್ಯಾತಿಯೊಂದಿಗೆ ಟೀಮ್ ಇಂಡಿಯಾದ ಹೆಸರಿನಲ್ಲಿತ್ತು. 2020 ರಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 36 ರನ್​ಗಳಿಗೆ ಆಲೌಟ್ ಆಗಿದ್ದರು. ಇದೀಗ ಇದಕ್ಕಿಂತ ಕಡಿಮೆ ಮೊತ್ತಕ್ಕೆ ಇನಿಂಗ್ಸ್ ಅಂತ್ಯಗೊಳಿಸಿ ಟೀಮ್ ಇಂಡಿಯಾದ ಹೆಸರಿನಲ್ಲಿದ್ದ ಅನಗತ್ಯ ದಾಖಲೆಯನ್ನು ವೆಸ್ಟ್ ಇಂಡೀಸ್ ತನ್ನದಾಗಿಸಿಕೊಂಡಿದೆ.

ಭಾರತದ 36 ರನ್​ಗಳ ದಾಖಲೆ ಉಡೀಸ್: ಕೇವಲ ಎರಡಂಕಿ ಮೊತ್ತಕ್ಕೆ ವೆಸ್ಟ್ ಇಂಡೀಸ್ ಆಲೌಟ್
Wi Vs Aus
ಝಾಹಿರ್ ಯೂಸುಫ್
|

Updated on: Jul 15, 2025 | 8:04 AM

Share

ಜಮೈಕಾದ ಸಬೀನಾ ಪಾರ್ಕ್​ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಅದು ಕೂಡ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 27 ರನ್​ಗಳಿಗೆ ಆಲೌಟ್ ಆಗುವ ಮೂಲಕ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 225 ರನ್ ಕಲೆಹಾಕಿದ್ದರು.

ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆಡಿದ ವೆಸ್ಟ್ ಇಂಡೀಸ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 143 ರನ್​ಗಳಿಸಿ ಆಲೌಟ್ ಆಯಿತು. 82 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವನ್ನು ಕೇವಲ 121 ರನ್​ಗಳಿಗೆ ಆಲೌಟ್ ಮಾಡುವಲ್ಲಿ ವೆಸ್ಟ್ ಇಂಡೀಸ್ ವೇಗಿಗಳು ಯಶಸ್ವಿಯಾದರು.

ಅದರಂತೆ ದ್ವಿತೀಯ ಇನಿಂಗ್ಸ್​ನಲ್ಲಿ 204 ರನ್​ಗಳ ಸುಲಭ ಗುರಿ ಪಡೆದ ವೆಸ್ಟ್ ಇಂಡೀಸ್ ತಂಡವನ್ನು 14.3 ಓವರ್​ಗಳಲ್ಲಿ ಆಲೌಟ್ ಮಾಡಿ ಆಸ್ಟ್ರೇಲಿಯಾ ಬೌಲರ್​ಗಳು ಪರಾಕ್ರಮ ಮರೆದರು. ಅದು ಕೂಡ ಕೇವಲ 27 ರನ್​ಗಳಿಗೆ ಎಂಬುದೇ ವಿಶೇಷ.

ಅಂದರೆ ದ್ವಿತೀಯ ಇನಿಂಗ್ಸ್​ನಲ್ಲಿ ವೆಸ್ಟ್ ಇಂಡೀಸ್ ತಂಡದ 7 ಮಂದಿಯನ್ನು ಆಸ್ಟ್ರೇಲಿಯಾ ಬೌಲರ್​ಗಳು ಶೂನ್ಯಕ್ಕೆ ಔಟ್ ಮಾಡಿದ್ದರು. ಇನ್ನು ಜಸ್ಟಿನ್ ಗ್ರೀವ್ಸ್ 11 ರನ್ ಬಾರಿಸಿದ್ದು ತಂಡದ ಪರ ಗರಿಷ್ಠ ಸ್ಕೋರ್. ಅಲ್ಲದೆ ಆಸ್ಟ್ರೇಲಿಯಾ ಬೌಲರ್​ಗಳು ಹೆಚ್ಚುವರಿಯಾಗಿ 6 ರನ್​ಗಳು ನೀಡಿದ್ದರು. ಅಂದರೆ ಈ ಇನಿಂಗ್ಸ್​ನಲ್ಲಿ ವಿಂಡೀಸ್ ಬ್ಯಾಟರ್​ಗಳು ಕಲೆಹಾಕಿರುವುದು ಕೇವಲ 21 ರನ್​ಗಳು ಮಾತ್ರ.

ಈ ಮೂಲಕ ಆತಿಥೇಯರನ್ನು ಕೇವಲ 27 ರನ್​ಗಳಿಗೆ ಆಲೌಟ್ ಮಾಡಿ ಆಸ್ಟ್ರೇಲಿಯಾ ತಂಡವು ಬರೋಬ್ಬರಿ 176 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳೆಂದರೆ ಮಿಚೆಲ್ ಸ್ಟಾರ್ಕ್​​, ಸ್ಕಾಟ್ ಬೋಲ್ಯಾಂಡ್. ದ್ವಿತೀಯ ಇನಿಂಗ್ಸ್​ನಲ್ಲಿ 7.3 ಓವರ್​ಗಳನ್ನು ಎಸೆದ ಸ್ಟಾರ್ಕ್​ ಕೇವಲ 9 ರನ್ ನೀಡಿ 6 ವಿಕೆಟ್ ಕಬಳಿಸಿದರು. ಇನ್ನು ಬೋಲ್ಯಾಂಡ್ 2 ಓವರ್​ಗಳಲ್ಲಿ 2 ರನ್ ನೀಡಿ 3 ವಿಕೆಟ್ ಉರುಳಿಸಿದರು.

ಅತ್ಯಂತ ಹೀನಾಯ ದಾಖಲೆ:

27 ರನ್​ಗಳ ಆಲೌಟ್​​ನೊಂದಿಗೆ ಕಳೆದ 70 ವರ್ಷಗಳಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಕಡಿಮೆ ರನ್​ಗಳಿಸಿ ಆಲೌಟ್ ತಂಡವೆಂಬ ಅಪಖ್ಯಾತಿ ವೆಸ್ಟ್ ಇಂಡೀಸ್ ಪಾಲಾಗಿದೆ. ಅಲ್ಲದೆ ಟೆಸ್ಟ್ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಇನಿಂಗ್ಸ್ ಅಂತ್ಯಗೊಳಿಸಿದ ವಿಶ್ವದ 2ನೇ ತಂಡ ಎನಿಸಿಕೊಂಡಿದೆ.

ಈ ಪಟ್ಟಿಯಲ್ಲಿ ಈಗಲೂ ಅಗ್ರಸ್ಥಾನದಲ್ಲಿರುವುದು ನ್ಯೂಝಿಲೆಂಡ್. 1955 ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವು ಕೇವಲ 26 ರನ್​ಗಳಿಸಿ ಆಲೌಟ್ ಆಗಿದ್ದರು. ಇದು ಟೆಸ್ಟ್ ಇತಿಹಾಸದ ಅತ್ಯಂತ ಕನಿಷ್ಠ ಸ್ಕೋರ್. ಇದೀಗ 27 ರನ್​ಗಳಿಗೆ ಸರ್ವಪತನ ಕಾಣುವ ಮೂಲಕ ವೆಸ್ಟ್ ಇಂಡೀಸ್ ತಂಡವು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದೆ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಮಿಕೈಲ್ ಲೂಯಿಸ್ , ಜಾನ್ ಕ್ಯಾಂಪ್‌ಬೆಲ್ , ಕೆವ್ಲಾನ್ ಆಂಡರ್ಸನ್ , ಬ್ರಾಂಡನ್ ಕಿಂಗ್ , ರೋಸ್ಟನ್ ಚೇಸ್ (ನಾಯಕ) , ಶಾಯ್ ಹೋಪ್ (ವಿಕೆಟ್ ಕೀಪರ್) , ಜಸ್ಟಿನ್ ಗ್ರೀವ್ಸ್ , ಜೋಮೆಲ್ ವಾರಿಕನ್ , ಅಲ್ಜಾರಿ ಜೋಸೆಫ್ , ಶಮರ್ ಜೋಸೆಫ್ , ಜೇಡನ್ ಸೀಲ್ಸ್.

ಇದನ್ನೂ ಓದಿ: ವಿಶ್ವ ದಾಖಲೆ… ಮುಂಬೈ ಇಂಡಿಯನ್ಸ್​ ಮುಡಿಗೆ 13ನೇ ಟ್ರೋಫಿ

ಆಸ್ಟ್ರೇಲಿಯಾ ಪ್ಲೇಯಿಂಗ್ 11:  ಸ್ಯಾಮ್ ಕೊನ್​ಸ್ಟಾಸ್ , ಉಸ್ಮಾನ್ ಖ್ವಾಜಾ , ಕ್ಯಾಮರೋನ್ ಗ್ರೀನ್ , ಸ್ಟೀವ್ ಸ್ಮಿತ್ , ಟ್ರಾವಿಸ್ ಹೆಡ್ , ಬ್ಯೂ ವೆಬ್‌ಸ್ಟರ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ಜೋಶ್ ಹ್ಯಾಜಲ್‌ವುಡ್ , ಸ್ಕಾಟ್ ಬೋಲ್ಯಾಂಡ್.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ