WI vs ENG: ಆಂಗ್ಲರಿಗೆ ಮತ್ತೊಂದು ಮುಖಭಂಗ; 25 ವರ್ಷಗಳ ಬರ ನೀಗಿಸಿಕೊಂಡ ವೆಸ್ಟ್ ಇಂಡೀಸ್

WI vs ENG: ತವರಿನಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಡಕ್ವರ್ತ್​ ಲೂಯಿಸ್ ನಿಯಮದಡಿಯಲ್ಲಿ 4 ವಿಕೆಟ್​ಗಳಿಂದ ಮಣಿಸಿಸುವಲ್ಲಿ ವೆಸ್ಟ್ ಇಂಡೀಸ್ ತಂಡ ಯಶಸ್ವಿಯಾಗಿದೆ. ಇದರೊಂದಿಗೆ ಆತಿಥೇಯ ತಂಡ 2-1 ಅಂತರದಿಂದ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ.

WI vs ENG: ಆಂಗ್ಲರಿಗೆ ಮತ್ತೊಂದು ಮುಖಭಂಗ; 25 ವರ್ಷಗಳ ಬರ ನೀಗಿಸಿಕೊಂಡ ವೆಸ್ಟ್ ಇಂಡೀಸ್
ವೆಸ್ಟ್ ಇಂಡೀಸ್- ಇಂಗ್ಲೆಂಡ್
Follow us
ಪೃಥ್ವಿಶಂಕರ
|

Updated on:Dec 10, 2023 | 9:30 AM

ತವರಿನಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಡಕ್ವರ್ತ್​ ಲೂಯಿಸ್ ನಿಯಮದಡಿಯಲ್ಲಿ 4 ವಿಕೆಟ್​ಗಳಿಂದ ಮಣಿಸಿಸುವಲ್ಲಿ ವೆಸ್ಟ್ ಇಂಡೀಸ್ ತಂಡ (England vs West Indies) ಯಶಸ್ವಿಯಾಗಿದೆ. ಇದರೊಂದಿಗೆ ಆತಿಥೇಯ ತಂಡ 2-1 ಅಂತರದಿಂದ ಏಕದಿನ ಸರಣಿಯನ್ನು (ODI Series) ವಶಪಡಿಸಿಕೊಂಡಿದೆ. ಈ ಮೂಲಕ 25 ವರ್ಷಗಳ ಸುದೀರ್ಘ ಅಂತರದ ನಂತರ ವೆಸ್ಟ್ ಇಂಡೀಸ್ ತನ್ನ ನೆಲದಲ್ಲಿ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ಕೊನೆಯ ಬಾರಿಗೆ 1998ರಲ್ಲಿ ಇಂತಹ ಸಾಧನೆ ಮಾಡಿತ್ತು.

ವಾಸ್ತವವಾಗಿ ಭಾರತದಲ್ಲಿ ನಡೆದ 2023 ರ ಏಕದಿನ ವಿಶ್ವಕಪ್‌ಗೆ ವೆಸ್ಟ್ ಇಂಡೀಸ್ ತಂಡ ಅರ್ಹತೆ ಪಡೆದಿರಲಿಲ್ಲ. ಅಲ್ಲದೆ ಏಕದಿನ ವಿಶ್ವಕಪ್ ಇತಿಹಾಸದಲ್ಲಿ 2 ಬಾರಿಯ ಚಾಂಪಿಯನ್​ಗಳು ಈ ಟೂರ್ನಿಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದ್ದು, ಇದೇ ಮೊದಲು. ಹೀಗಾಗಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಗೆಲ್ಲುವುದು ವಿಂಡೀಸ್ ತಂಡಕ್ಕೆ ಬಹಳ ಅವಶ್ಯಕವಾಗಿತ್ತು.

ಆಂಗ್ಲರ ಹೀನಾಯ ಪ್ರದರ್ಶನ

ಈಗ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಗೆಲ್ಲುವ ಮೂಲಕ ಈ ತಂಡವು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೊಡ್ಡ ತಂಡಗಳನ್ನು ಸೋಲಿಸುವ ಶಕ್ತಿ ಇನ್ನೂ ಇದೆ ಎಂದು ತೋರಿಸಿದೆ. ಅದೇ ವೇಳೆ ಜೋಸ್ ಬಟ್ಲರ್ ನಾಯಕತ್ವದಲ್ಲಿ ಇಂಗ್ಲೆಂಡ್ ನಿರಾಶಾದಾಯಕ ಪ್ರದರ್ಶನ ಮುಂದುವರಿಸಿದೆ. 2023ರ ಏಕದಿನ ವಿಶ್ವಕಪ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಇಂಗ್ಲೆಂಡ್​ಗೆ, ಇದೀಗ ವೆಸ್ಟ್ ಇಂಡೀಸ್ ಎದುರು ಏಕದಿನ ಸರಣಿ ಸೋತಿರುವುದು ಮರೆಯಲಾಗದ ಆಘಾತವನ್ನುಂಟು ಮಾಡಿದೆ.

ಇಂಗ್ಲೆಂಡ್​ಗೆ ಕಳಪೆ ಆರಂಭ

ಇನ್ನು ಮೂರನೇ ಏಕದಿನ ಪಂದ್ಯದ ಕುರಿತು ಮಾತನಾಡುವುದಾದರೆ, ಬಾರ್ಬಡೋಸ್‌ನಲ್ಲಿ ನಡೆದ ಮೂರನೇ ಏಕದಿನ ಪಂದ್ಯವು ಮಳೆ ಪೀಡಿತವಾಗಿತ್ತು. ಹೀಗಾಗಿ ಪಂದ್ಯವನ್ನು 40 ಓವರ್​ಗಳಿಗೆ ಸೀಮಿತಗೊಳಿಸಲಾಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೊತ್ತ ಕೇವಲ 49 ರನ್‌ಗಳಿರುವ ಅರ್ಧದಷ್ಟು ತಂಡ ಪೆವಿಲಿಯನ್‌ ಸೇರಿತ್ತು. ಆದರೆ ನಂತರ ಬೆನ್ ಡಕೆಟ್ ಮತ್ತು ಲಿಯಾಮ್ ಲಿವಿಂಗ್ಸ್ಟೋನ್ ಅದ್ಭುತ ಜೊತೆಯಾಟ ನಡೆಸಿ ತಂಡವನ್ನು ಆಲೌಟ್ ಆಗದಂತೆ ಕಾಪಾಡಿದರು.

ಅಂತಿಮವಾಗಿ ಇಂಗ್ಲೆಂಡ್ ತಂಡ 40 ಓವರ್‌ಗಳಲ್ಲಿ 206 ರನ್ ಕಲೆ ಹಾಕಿತು. ತಂಡದ ಪರ ಬೆನ್ ಡಕೆಟ್ 71 ರನ್‌ಗಳ ಅತ್ಯಧಿಕ ಇನ್ನಿಂಗ್ಸ್‌ ಆಡಿದರೆ, ಲಿವಿಂಗ್‌ಸ್ಟೋನ್ ಕೂಡ 45 ರನ್​ಗಳ ಕೊಡುಗೆ ನೀಡಿದರು. ಇವರಿಬ್ಬರನ್ನು ಬಿಟ್ಟರೆ ಇಂಗ್ಲೆಂಡ್‌ನ ಯಾವುದೇ ಬ್ಯಾಟ್ಸ್‌ಮನ್ 20 ರನ್ ಗಡಿ ದಾಟಲು ಸಾಧ್ಯವಾಗಲಿಲ್ಲ. ಇನ್ನು ವೆಸ್ಟ್ ಇಂಡೀಸ್ ಪರ ಅಲ್ಜಾರಿ ಜೋಸೆಫ್ ಮತ್ತು ಮ್ಯಾಥ್ಯೂ ಫೋರ್ಡ್ ತಲಾ 3 ವಿಕೆಟ್ ಪಡೆದರು.

ವಿಂಡೀಸ್​ಗೆ ಸುಲಭ ಜಯ

ಮಳೆಯ ಅಡೆಚಣೆಯಿಂದಾಗಿ ಇಂಗ್ಲೆಂಡ್ ನೀಡಿದ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡಕ್ಕೆ ಡಿಎಲ್‌ಎಸ್‌ ನಿಯಮದಡಿಯಲ್ಲಿ 34 ಓವರ್‌ಗಳಲ್ಲಿ 188 ರನ್‌ಗಳ ಗುರಿಯನ್ನು ನೀಡಲಾಯಿತು. ಈ ಗುರಿ ಬೆನ್ನತ್ತಿದ ಆತಿಥೇಯ ತಂಡ 31.4 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು ಗೆಲುವಿನ ದಡ ಸೇರಿತು. ಇದರೊಂದಿಗೆ ಏಕದಿನ ಸರಣಿಯನ್ನೂ ವಶಪಡಿಸಿಕೊಂಡಿತು. ಆತಿಥೇಯ ತಂಡದ ಪರ ಕೇಸಿ ಕಾರ್ಟಿ ಅರ್ಧಶತಕ ಗಳಿಸಿದರೆ, ಆರಂಭಿಕ ಬ್ಯಾಟ್ಸ್‌ಮನ್ ಅಲೆಕ್ ಅತಾನಾಜೆ 45 ರನ್‌ಗಳ ಇನಿಂಗ್ಸ್ ಆಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ನೀಡಿದರು.

ಟಿ20 ಸರಣಿಯಲ್ಲಿ ಮುಖಾಮುಖಿ

ಅಂತಿಮವಾಗಿ ರೊಮಾರಿಯೊ ಶೆಫರ್ಡ್ 28 ಎಸೆತಗಳಲ್ಲಿ 3 ಬೌಂಡರಿ ಹಾಗೂ ಸಿಕ್ಸರ್‌ಗಳ ನೆರವಿನಿಂದ ಅಜೇಯ 41 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಇದೀಗ ಏಕದಿನ ಸರಣಿ ಗೆದ್ದಿರುವ ವೆಸ್ಟ್ ಇಂಡೀಸ್, ಇದೇ ಆಂಗ್ಲರ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಉಭಯ ತಂಡಗಳ ನಡುವಿನ 5 ಪಂದ್ಯಗಳ ಟಿ20 ಸರಣಿ ಡಿಸೆಂಬರ್ 12 ರಿಂದ ಆರಂಭವಾಗಲಿದೆ.

Published On - 9:24 am, Sun, 10 December 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್