ಚೇಸಿಂಗ್ ಮಾಡಿದ ತಂಡ ಗೆದ್ದಿರುವುದು ಕೇವಲ 2 ಪಂದ್ಯ: ವಿಭಿನ್ನವಾಗಿದೆ ಸೆಂಟ್ರಲ್ ಬ್ರೋವರ್ಡ್ ಪಿಚ್
IND vs WI 4th T20I Pitch Report: ಹಿಂದಿನ ಪಿಚ್ಗಳಿಗೆ ಹೋಲಿಸಿದರೆ ಭಾರತ-ವೆಸ್ಟ್ ಇಂಡೀಸ್ 4ನೇ ಟಿ20 ಪಂದ್ಯ ನಡೆಯಲಿರುವ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ವಿಭಿನ್ನವಾಗಿದೆ. ಈ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು ಹೆಚ್ಚು ಪ್ರಾಬಲ್ಯ ಸಾಧಿಸಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಸರಣಿಯ ನಾಲ್ಕನೇ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ (West Indies vs India) ಸಜ್ಜಾಗಿದೆ. ಇಂದು (ಆಗಸ್ಟ್ 12) ಅಮೆರಿಕಾದ ಫ್ಲೋರಿಡಾದಲ್ಲಿರುವ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್ನಲ್ಲಿ ಈ ಮಹತ್ವದ ಪಂದ್ಯ ನಡೆಯಲಿದೆ. ಆರಂಭಿಕ ಪಂದ್ಯಗಳಲ್ಲಿ ಸತತ ಎರಡು ಸೋಲುಗಳನ್ನು ಅನುಭವಿಸಿದ ನಂತರ, ಹಾರ್ದಿಕ್ ಪಾಂಡ್ಯ ಪಡೆ ಮೂರನೇ ಟಿ20 ಯಲ್ಲಿ ಗೆಲುವಿನ ಲಯಕ್ಕೆ ಮರಳಿತು. ಈ ಮೂಲಕ ಸರಣಿಯನ್ನು 2-1 ಅಂತರಕ್ಕೆ ಕಡಿಮೆಗೊಳಿಸಿತು. ಸದ್ಯ ಸರಣಿಯನ್ನು ವಶಪಡಿಸಿಕೊಳ್ಳಲು ಇನ್ನೆರಡು ಗೆಲುವಿನ ಅಗತ್ಯವಿದ್ದು, ಭಾರತ ನಿರ್ಣಾಯಕ ಘಟ್ಟದಲ್ಲಿದೆ.
ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಪಿಚ್ ಹೇಗಿದೆ?:
ಹಿಂದಿನ ಪಿಚ್ಗಳಿಗೆ ಹೋಲಿಸಿದರೆ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ವಿಭಿನ್ನವಾಗಿದೆ. ಈ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು ಹೆಚ್ಚು ಪ್ರಾಬಲ್ಯ ಸಾಧಿಸಿದೆ. ಇಲ್ಲಿ ಆಡಿದ 14 ಟಿ20 ಪಂದ್ಯಗಳ ಪೈಕಿ ಮೊದಲು ಬ್ಯಾಟ್ ಮಾಡಿದ ತಂಡ 11 ಬಾರಿ ಗೆದ್ದಿದೆ. ಚೇಸಿಂಗ್ ಮಾಡಿದ ತಂಡ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯ ಕಂಡಿದೆ. ಬೌಲರ್‌ಗಳಿಗೆ ಹೋಲಿಸಿದರೆ ಬ್ಯಾಟರ್‌ಗಳು ಈ ಪಿಚ್‌ನಿಂದ ಹೆಚ್ಚಿನ ಸಹಾಯವನ್ನು ಪಡೆಯುವ ಸಾಧ್ಯತೆಯಿದೆ. ಆದಾಗ್ಯೂ, ಸ್ಪಿನ್ನರ್‌ಗಳು ಅರ್ಧ ಪಂದ್ಯದ ನಂತರ ಮಿಂಚುವ ನಿರೀಕ್ಷೆಯಿದೆ. ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 165 ಆಗಿದೆ. ಪಂದ್ಯ ಸಾಗಿದಂತೆ ಪಿಚ್ ಹದಗೆಡುತ್ತದೆ.
IND vs WI: ಭಾರತ ಗೆದ್ದರೆ ಟಿ20 ಸರಣಿ ಜೀವಂತ; ಪಂದ್ಯ ಯಾವ ಚಾನೆಲ್‌ನಲ್ಲಿ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ವಿವರ
💬 💬 We will look to bring our ‘A-game’ in the 4⃣th T20I: #TeamIndia Bowling Coach Paras Mhambrey#WIvIND pic.twitter.com/J77aV3OUvC
— BCCI (@BCCI) August 11, 2023
ಮಳೆಯ ಕಾಟ ಇದೆಯೇ?:
ಇಂಡೋ-ವಿಂಡೀಸ್ ನಾಲ್ಕನೇ ಟಿ20 ಪಂದ್ಯಕ್ಕೆ ಮಳೆಯ ಕಾಟ ಕೂಡ ಇದೆ. ಲಾಡರ್‌ಹಿಲ್‌ನಲ್ಲಿ ಹವಾಮಾನವು ಮೋಡದಿಂದ ಕೂಡಿರುತ್ತದೆ ಮತ್ತು ಶೇ. 60 ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪ್ರೇಕ್ಷಕರು ಮತ್ತು ಆಟಗಾರರು ಈ ಗೊಂದಲದ ನಡುವೆ ಪಂದ್ಯವನ್ನು ನಿರೀಕ್ಷಿಸಬಹುದು. ತಾಪಮಾನವು ಸುಮಾರು 33 ಡಿಗ್ರಿ ಸೆಲ್ಸಿಯಸ್‌ನಲ್ಲಿ ಇರಲಿದ್ದು ಗಾಳಿಯು ಗಂಟೆಗೆ 16 ಕಿಮೀ ವೇಗದಲ್ಲಿ ಬೀಸುತ್ತದೆ.
ಪಂದ್ಯ ಎಷ್ಟು ಗಂಟೆಗೆ?:
ಭಾರತ-ವೆಸ್ಟ್ ಇಂಡೀಸ್ ನಡುವಣ ತೃತೀಯ ಟಿ20 ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಶುರುವಾಗಲಿದೆ. ದೂರದರ್ಶನ ಸ್ಪೋರ್ಟ್ಸ್ (ಡಿಡಿ ಸ್ಪೋರ್ಟ್ಸ್) ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ. ಜೊತೆಗೆ ಲೈವ್ ಸ್ಟ್ರೀಮಿಂಗ್ ಫ್ಯಾನ್ ಮತ್ತು ಜಿಯೋ ಸಿನಿಮಾದಲ್ಲಿ ಲಭ್ಯವಿರುತ್ತದೆ.
ಸಂಭಾವ್ಯ ತಂಡ:
ಭಾರತ : ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್ / ಅವೇಶ್ ಖಾನ್.
ವೆಸ್ಟ್ ಇಂಡೀಸ್ : ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೊಮಾರಿಯೋ ಶೆಫರ್ಡ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ