WI vs IND: ಸೋತ ಬೆನ್ನಲ್ಲೇ ವಿಂಡೀಸ್ ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಹೊರಕ್ಕೆ..!

| Updated By: ಝಾಹಿರ್ ಯೂಸುಫ್

Updated on: Jul 23, 2022 | 12:53 PM

WI vs IND: ಟೀಮ್ ಇಂಡಿಯಾ ವಿರುದ್ಧ ಆಡಿದ 25 ಏಕದಿನ ಪಂದ್ಯಗಳಲ್ಲಿ 450 ರನ್ ಗಳಿಸಿ 23 ವಿಕೆಟ್ ಪಡೆದಿದ್ದಾರೆ. ಹೀಗಾಗಿಯೇ ಟೀಮ್ ಇಂಡಿಯಾ ವಿರುದ್ದದ ಸರಣಿಯಲ್ಲಿ ಗೇಮ್ ಚೇಂಜರ್​ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು.

WI vs IND: ಸೋತ ಬೆನ್ನಲ್ಲೇ ವಿಂಡೀಸ್ ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಹೊರಕ್ಕೆ..!
West Indies Team
Follow us on

ಭಾರತ ವಿರುದ್ಧದ (India vs West Indies Odi) ಮೊದಲ ಏಕದಿನ ಪಂದ್ಯದಲ್ಲಿ ಸೋಲು ಕಂಡಿರುವ ವೆಸ್ಟ್ ಇಂಡೀಸ್ ತಂಡ ಮತ್ತೊಂದು ಹಿನ್ನಡೆ ಅನುಭವಿಸಿದೆ. ಕೊರೋನಾ ಸೋಂಕಿತ ತಂಡದ ಸ್ಟಾರ್ ಆಲ್ ರೌಂಡರ್ ಜೇಸನ್ ಹೋಲ್ಡರ್ (Jason Holder) ಸಂಪೂರ್ಣ ಸರಣಿಯಿಂದ ಹೊರಗುಳಿದಿದ್ದಾರೆ. ಈಗಾಗಲೇ ಸರಣಿಯಲ್ಲಿ 0-1 ಹಿನ್ನಡೆಯಲ್ಲಿರುವ ಆತಿಥೇಯ ತಂಡಕ್ಕೆ ಸ್ಟಾರ್ ಆಲ್​ರೌಂಡರ್​ನ ಅಲಭ್ಯತೆಯು ಹೊಸ ಚಿಂತೆಯನ್ನು ಉಂಟು ಮಾಡಿದೆ. ಏಕೆಂದರೆ ಇತ್ತೀಚಿಗೆ ಮುಕ್ತಾಯವಾದ ಬಾಂಗ್ಲಾದೇಶದ ವಿರುದ್ದದ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವು ಕಳಪೆ ಪ್ರದರ್ಶನ ನೀಡಿತ್ತು.

ಈ ಸರಣಿಯಲ್ಲಿ ಜೇಸನ್ ಹೋಲ್ಡರ್​ ಆಡಿರಲಿಲ್ಲ. ಇತ್ತ ಟೀಮ್ ಇಂಡಿಯಾ ಸರಣಿಗೆ ಹೋಲ್ಡರ್ ಆಯ್ಕೆಯಾದರೂ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಹೀಗಾಗಿ ಮೊದಲ ಪಂದ್ಯ ಆಡಿರಲಿಲ್ಲ. ವಿಶೇಷ ಎಂದರೆ ಟೀಮ್ ಇಂಡಿಯಾ ವಿರುದ್ದದ ಮೊದಲ ಪಂದ್ಯದಲ್ಲಿ ಅನುಭವಿ ಆಟಗಾರ ಹೋಲ್ಡರ್ ಅವರ ಅನುಪಸ್ಥಿತಿ ತಂಡವನ್ನು ಕಾಡಿತ್ತು. ಏಕೆಂದರೆ ಮೊದಲ ಪಂದ್ಯದಲ್ಲಿ ಭಾರತ ತಂಡವು ಕೇವಲ 3 ರನ್​ಗಳಿಂದ ರೋಚಕ ಜಯ ಸಾಧಿಸಿತು. ಒಂದು ವೇಳೆ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಹೋಲ್ಡರ್ ಇದ್ದಿದ್ರೆ ವೆಸ್ಟ್ ಇಂಡೀಸ್​ಗೆ ಗೆಲ್ಲುವ ಅವಕಾಶವಿತ್ತು.

ಇದೀಗ ಹೋಲ್ಡರ್ ಸಂಪೂರ್ಣ ಸರಣಿಯಿಂದ ನಿರ್ಗಮಿಸಿರುವುದು ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಹೋಲ್ಡರ್ ತನ್ನ ತಂಡದಲ್ಲಿ ಮಾತ್ರವಲ್ಲದೆ, ವಿಶ್ವದ ಅತ್ಯಂತ ಸ್ಫೋಟಕ ಆಲ್‌ರೌಂಡರ್‌ಗಳಲ್ಲಿ ಒಬ್ಬರು. ಭಾರತದ ವಿರುದ್ಧ ಅವರ ದಾಖಲೆ ಅದ್ಭುತವಾಗಿದೆ. ಟೀಮ್ ಇಂಡಿಯಾ ವಿರುದ್ಧ ಆಡಿದ 25 ಏಕದಿನ ಪಂದ್ಯಗಳಲ್ಲಿ 450 ರನ್ ಗಳಿಸಿ 23 ವಿಕೆಟ್ ಪಡೆದಿದ್ದಾರೆ. ಹೀಗಾಗಿಯೇ ಟೀಮ್ ಇಂಡಿಯಾ ವಿರುದ್ದದ ಸರಣಿಯಲ್ಲಿ ಜೇಸನ್ ಹೋಲ್ಡರ್ ಗೇಮ್ ಚೇಂಜರ್​ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ಕೊರೋನಾ ಸೋಂಕಿಗೆ ಒಳಗಾಗಿರುವ ಜೇಸನ್ ಹೋಲ್ಡರ್ ಸಂಪೂರ್ಣ ಏಕದಿನ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ವೆಸ್ಟ್ ಇಂಡೀಸ್ ಏಕದಿನ ತಂಡ ಹೀಗಿದೆ: ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮ್ರಾ ಬ್ರೂಕ್ಸ್, ಕೆಸಿ ಕಾರ್ಟಿ, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರೆಂಡನ್ ಕಿಂಗ್, ಕೈಲ್ ಮೈಯರ್ಸ್, ಗುಡಕೇಶ್ ಮೋತಿ, ಕೀಮೋ ಪಾಲ್, ರೋವ್‌ಮನ್ ಪೊವೆಲ್ ಮತ್ತು ಜೇಡನ್ ಸೀಲ್ಸ್, ಜೇಸನ್ ಹೋಲ್ಡರ್.

ಮೀಸಲು ಆಟಗಾರರು: ರೊಮಾರಿಯೊ ಶೆಫರ್ಡ್, ಹೇಡನ್ ವಾಲ್ಷ್ ಜೂನಿಯರ್.

ಭಾರತ-ವೆಸ್ಟ್ ಇಂಡೀಸ್​ ಏಕದಿನ ಸರಣಿಯ ವೇಳಾಪಟ್ಟಿ:

  • ಜುಲೈ 22- ಮೊದಲ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)
  • ಜುಲೈ 24- 2ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)
  • ಜುಲೈ 27- 3ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)