WI vs IND: ಭಾರತ-ವಿಂಡೀಸ್ ಪಂದ್ಯ ಯಾವ ಚಾನೆಲ್ನಲ್ಲಿ ನೇರಪ್ರಸಾರ? ಇಲ್ಲಿದೆ ಸಂಪೂರ್ಣ ಮಾಹಿತಿ
WI vs IND Match Timing: ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ದ ಧವನ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ. ಇದಾದ ಬಳಿಕ ಭಾರತ ತಂಡವು 5 ಪಂದ್ಯಗಳ ಟಿ20 ಸರಣಿಯನ್ನು ಕೂಡ ಆಡಲಿದ್ದು, ಈ ಸರಣಿ ವೇಳೆಗೆ ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಆಟಗಾರರು ತಂಡವನ್ನು ಕೂಡಿಕೊಳ್ಳಲಿದ್ದಾರೆ.
ಭಾರತ ಮತ್ತು ವೆಸ್ಟ್ ಇಂಡೀಸ್ (WI vs IND) ನಡುವಣ ಏಕದಿನ ಸರಣಿ ನಾಳೆಯಿಂದ (ಜುಲೈ 22) ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ (Team India) 3 ಪಂದ್ಯಗಳನ್ನು ಆಡಲಿದೆ. ಟ್ರಿನಿಡಾಡ್ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯವು ಯಾರಿಗೆಲ್ಲಾ ಅವಕಾಶ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. ಏಕೆಂದರೆ ಈ ಸರಣಿಯಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಹಿರಿಯ ಆಟಗಾರರು ಹೊರಗುಳಿದಿದ್ದಾರೆ. ಹೀಗಾಗಿ ತಂಡದ ನಾಯಕರಾಗಿ ಶಿಖರ್ ಧವನ್ ಆಯ್ಕೆಯಾಗಿದ್ದಾರೆ.
ಅಂದರೆ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ದ ಧವನ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ. ಇದಾದ ಬಳಿಕ ಭಾರತ ತಂಡವು 5 ಪಂದ್ಯಗಳ ಟಿ20 ಸರಣಿಯನ್ನು ಕೂಡ ಆಡಲಿದ್ದು, ಈ ಸರಣಿ ವೇಳೆಗೆ ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಆಟಗಾರರು ತಂಡವನ್ನು ಕೂಡಿಕೊಳ್ಳಲಿದ್ದಾರೆ. ಹೀಗಾಗಿ ಟಿ20 ಸರಣಿಯಲ್ಲಿ ತಂಡವನ್ನು ಹಿಟ್ಮ್ಯಾನ್ ಮುನ್ನಡೆಸಲಿದ್ದಾರೆ. ಇದಾಗ್ಯೂ ಈ 2 ಸರಣಿಗಳಿಂದ ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬುಮ್ರಾ ಸಂಪೂರ್ಣ ವಿಶ್ರಾಂತಿ ಪಡೆದಿದ್ದಾರೆ.
ಈ ಪಂದ್ಯದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ:-
ಭಾರತ vs ವೆಸ್ಟ್ ಇಂಡೀಸ್ ಮೊದಲ ಪಂದ್ಯ ಯಾವಾಗ? ದಿನಾಂಕ ಮತ್ತು ಸಮಯ: ಶುಕ್ರವಾರ, ಜುಲೈ 22, 2022
ಪಂದ್ಯ ಶುರುವಾಗುವುದು ಎಷ್ಟು ಗಂಟೆಗೆ? ಭಾರತೀಯ ಕಾಲಮಾನ ಸಂಜೆ 7 ಗಂಟೆಯಿಂದ ಪಂದ್ಯ ಶುರುವಾಗಲಿದೆ.
ಯಾವ ಚಾನೆಲ್ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು? ಈ ಪಂದ್ಯಗಳ ನೇರಪ್ರಸಾರ ಡಿಡಿ ನ್ಯಾಷನಲ್ ಚಾನೆಲ್ನಲ್ಲಿ ಇರಲಿದೆ. ಹಾಗೆಯೇ ಸ್ಪೋರ್ಟ್ಸ್ ಮ್ಯಾಕ್ಸ್ (SportsMax) ಚಾನೆಲ್ನಲ್ಲೂ ಲೈವ್ ಇರಲಿದೆ.
ಯಾವ ಆ್ಯಪ್ನಲ್ಲಿ ಲೈವ್ ಸ್ಟೀಮಿಂಗ್ ಇರಲಿದೆ? ಫ್ಯಾನ್‌ಕೋಡ್ ಆ್ಯಪ್ ಮತ್ತು ವೆಬ್ಸೈಟ್ ಮೂಲಕ ಈ ಪಂದ್ಯಗಳ ಲೈವ್ ಸ್ಟೀಮಿಂಗ್ ವೀಕ್ಷಿಸಬಹುದು.
ಉಭಯ ತಂಡಗಳಲ್ಲಿ ಯಾರೆಲ್ಲಾ ಇದ್ದಾರೆ?
ವೆಸ್ಟ್ ಇಂಡೀಸ್ ಏಕದಿನ ತಂಡ ಹೀಗಿದೆ: ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮ್ರಾ ಬ್ರೂಕ್ಸ್, ಕೆಸಿ ಕಾರ್ಟಿ, ಜೇಸನ್ ಹೋಲ್ಡರ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರೆಂಡನ್ ಕಿಂಗ್, ಕೈಲ್ ಮೈಯರ್ಸ್, ಗುಡಕೇಶ್ ಮೋತಿ, ಕೀಮೋ ಪಾಲ್, ರೋವ್‌ಮನ್ ಪೊವೆಲ್ ಮತ್ತು ಜೇಡನ್ ಸೀಲ್ಸ್.
ಮೀಸಲು ಆಟಗಾರರು: ರೊಮಾರಿಯೊ ಶೆಫರ್ಡ್, ಹೇಡನ್ ವಾಲ್ಷ್ ಜೂನಿಯರ್.
ಭಾರತ ಏಕದಿನ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
ಈ ಸರಣಿಯ ಸಂಪೂರ್ಣ ವೇಳಾಪಟ್ಟಿ?
ಏಕದಿನ ಸರಣಿಯ ವೇಳಾಪಟ್ಟಿ
- ಜುಲೈ 22- ಮೊದಲ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್ ಓವಲ್)
- ಜುಲೈ 24- 2ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್ ಓವಲ್)
- ಜುಲೈ 27- 3ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್ ಓವಲ್)
ಟಿ20 ಸರಣಿ ವೇಳಾಪಟ್ಟಿ:
- ಜುಲೈ 29 – ಮೊದಲ ಟಿ20 ಪಂದ್ಯ (ಲಾರಾ ಕ್ರಿಕೆಟ್ ಸ್ಟೇಡಿಯಂ)
- ಆಗಸ್ಟ್ 1- 2ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್ ಸ್ಟೇಡಿಯಂ)
- ಆಗಸ್ಟ್ 2- 3ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್)
- ಆಗಸ್ಟ್ 6- 4ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)
- ಆಗಸ್ಟ್ 7- 5ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)
Published On - 1:10 pm, Thu, 21 July 22