WI vs IND: ಭಾರತದ ವಿರುದ್ಧದ 2ನೇ ಟೆಸ್ಟ್ಗೆ ವೆಸ್ಟ್ ಇಂಡೀಸ್ ತಂಡ ಪ್ರಕಟ
India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ 2ನೇ ಟೆಸ್ಟ್ ಪಂದ್ಯವು ಜುಲೈ 20 ರಿಂದ ಶುರುವಾಗಲಿದೆ. ಪೋರ್ಟ್ ಆಫ್ ಸ್ಪೇನ್ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಅಥವಾ ಡ್ರಾ ಮಾಡಿಕೊಂಡರೆ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ.
India vs West Indies 2nd Test: ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕಾಗಿ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. 13 ಸದಸ್ಯರ ಈ ತಂಡದಲ್ಲಿ 23 ವರ್ಷದ ಯುವ ಸ್ಪಿನ್ನರ್ ಕೆವಿನ್ ಸಿಂಕ್ಲೇರ್ ಸ್ಥಾನ ಪಡೆದಿದ್ದಾರೆ. ಅತ್ತ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಲ್ರೌಂಡರ್ ರೇಮೊನ್ ರೈಫರ್ ತಂಡದಿಂದ ಹೊರಬಿದ್ದಿದ್ದಾರೆ. ಇನ್ನುಳಿದಂತೆ ಮೊದಲ ಪಂದ್ಯಕ್ಕೆ ಆಯ್ಕೆಯಾದ ಆಟಗಾರರನ್ನೇ ದ್ವಿತೀಯ ಟೆಸ್ಟ್ಗೂ ಮುಂದುವರೆಸಲಾಗಿದೆ.
ಭಾರತ-ವೆಸ್ಟ್ ಇಂಡೀಸ್ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ರೋಹಿತ್ ಶರ್ಮಾ ಪಡೆ ಗೆದ್ದುಕೊಂಡಿದೆ. ಡೊಮಿನಿಕಾದಲ್ಲಿ ನಡೆದ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಕಳಪೆ ಪ್ರದರ್ಶನ ನೀಡಿತ್ತು. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ವೆಸ್ಟ್ ಇಂಡೀಸ್ 150 ರನ್ಗಳಿಸಿದರೆ, ದ್ವಿತೀಯ ಇನಿಂಗ್ಸ್ನಲ್ಲಿ 130 ರನ್ಗಳಿಗೆ ಆಲೌಟ್ ಆಗಿತ್ತು. ಇತ್ತ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 5 ವಿಕೆಟ್ ನಷ್ಟಕ್ಕೆ 421 ರನ್ ಕಲೆಹಾಕಿ ಡಿಕ್ಲೇರ್ ಘೋಷಿಸಿತ್ತು. ಅಲ್ಲದೆ ಅಂತಿಮವಾಗಿ ವೆಸ್ಟ್ ಇಂಡೀಸ್ ತಂಡವನ್ನು ಇನಿಂಗ್ಸ್ ಹಾಗೂ 141 ರನ್ಗಳಿಂದ ಸೋಲಿಸಿ ಅಮೋಘ ಗೆಲುವನ್ನು ತನ್ನದಾಗಿಸಿಕೊಂಡಿತು.
ಇದೀಗ 1-0 ಅಂತರದಲ್ಲಿ ಮುನ್ನಡೆ ಹೊಂದಿರುವ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆದ್ದರೆ ಅಥವಾ ಡ್ರಾ ಮಾಡಿಕೊಂಡರೆ ಸರಣಿ ವಶಪಡಿಸಿಕೊಳ್ಳಬಹುದು. ಇದಾಗ್ಯೂ ಕಳೆದ ಪಂದ್ಯದಲ್ಲಿ ಬೆಂಚ್ ಕಾದಿದ್ದ ಭಾರತ ತಂಡದ ಕೆಲ ಆಟಗಾರರಿಗೆ 2ನೇ ಟೆಸ್ಟ್ ಪಂದ್ಯದಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ.
ವೆಸ್ಟ್ ಇಂಡೀಸ್ ಟೆಸ್ಟ್ ತಂಡ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥನಾಝ್, ತೇಜ್ನರೈನ್ ಚಂದ್ರಪಾಲ್, ರಹ್ಕೀಮ್ ಕಾರ್ನ್‌ವಾಲ್, ಜೋಶುಡಾ ಡಾ ಸಿಲ್ವಾ, ಶಾನನ್ ಗೇಬ್ರಿಯಲ್, ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕಿಕರ್ ಮೆಕೆಂಝಿ, ಕೆಮರ್ ರೋಚ್, ಕೆವಿನ್ ಸಿಂಕ್ಲೇರ್, ಜೊಮೆಲ್ ವಾರಿಕನ್ .
ಮೀಸಲು ಆಟಗಾರರು: ಟೆವಿನ್ ಇಮ್ಲಾಚ್, ಅಕೀಮ್ ಜೋರ್ಡಾನ್.
ಇದನ್ನೂ ಓದಿ: India T20 Squad: ಟೀಮ್ ಇಂಡಿಯಾದಲ್ಲಿ ಇಬ್ಬರೇ ಆಲ್ರೌಂಡರ್ಗಳು..!
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ , ರವೀಂದ್ರ ಜಡೇಜಾ , ಮುಖೇಶ್ ಕುಮಾರ್, ಅಕ್ಷರ್ ಪಟೇಲ್, ನವದೀಪ್ ಸೈನಿ , ಮೊಹಮ್ಮದ್ ಸಿರಾಜ್ , ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕತ್.