‘ನನಗೆ 35 ವರ್ಷ, 75 ಅಲ್ಲ…’: ಭಾರತ ತಂಡಕ್ಕೆ ಆಯ್ಕೆ ಮಾಡದಿರುವ ಬಗ್ಗೆ ಆಕ್ರೋಶ..!

ಶೆಲ್ಡನ್ ಜಾಕ್ಸನ್ 2006 ರಲ್ಲಿ ಲಿಸ್ಟ್-ಎ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದರು. ಇದುವರೆಗೆ 67 ಪಂದ್ಯಗಳಲ್ಲಿ 8 ಶತಕ ಮತ್ತು 12 ಅರ್ಧ ಶತಕಗಳ ನೆರವಿನಿಂದ ಒಟ್ಟು 2346 ರನ್ ಗಳಿಸಿದ್ದಾರೆ.

'ನನಗೆ 35 ವರ್ಷ, 75 ಅಲ್ಲ...': ಭಾರತ ತಂಡಕ್ಕೆ ಆಯ್ಕೆ ಮಾಡದಿರುವ ಬಗ್ಗೆ ಆಕ್ರೋಶ..!
Sheldon Jackson
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 25, 2022 | 10:36 AM

ನ್ಯೂಜಿಲೆಂಡ್ ಎ ವಿರುದ್ದ ನಡೆಯಲಿರುವ ಸರಣಿಗಾಗಿ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಈ ತಂಡದಲ್ಲಿ ಶೆಲ್ಡನ್ ಜಾಕ್ಸನ್​ಗೆ ಅವಕಾಶ ನೀಡಲಾಗಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಾಕ್ಸನ್, ನನಗೆ 35 ವರ್ಷ, 75 ವರ್ಷವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಸೌರಾಷ್ಟ್ರ ತಂಡವನ್ನು ಪ್ರತಿನಿಧಿಸುತ್ತಿರುವ ವಿಕೆಟ್ ಕೀಪರ್ ಬ್ಯಾಟ್ಸ್​​ಮನ್ ಶೆಲ್ಡನ್ ಜಾಕ್ಸನ್​ ಅವರನ್ನು ಈ ಬಾರಿ ಕೂಡ ಭಾರತ ಎ ತಂಡಕ್ಕೆ ಆಯ್ಕೆ ಮಾಡಿಲ್ಲ. ಇತ್ತ ದೇಶೀಯ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ ತಂಡದಲ್ಲಿ ಅವಕಾಶ ನೀಡದಿರುವ ಬಗ್ಗೆ ಜಾಕ್ಸನ್ ಅಸಮಾಧಾನ ಹೊರಹಾಕಿದ್ದಾರೆ.

ಇನ್ನು ಭಾರತ ಎ ತಂಡದ ನಾಯಕತ್ವವನ್ನು ಪ್ರಿಯಾಂಕ್ ಪಾಂಚಾಲ್ ಅವರಿಗೆ ಹಸ್ತಾಂತರಿಸಲಾಗಿದೆ. ಯುವ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್, ಚೀನಾಮನ್ ಸ್ಪಿನ್ನರ್ ಕುಲದೀಪ್ ಯಾದವ್, ವೇಗಿ ಪ್ರಸಿದ್ಧ್ ಕೃಷ್ಣ ಮತ್ತು ಉಮ್ರಾನ್ ಮಲಿಕ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತೀಚಿನ ದಿನಗಳಲ್ಲಿ, ಅನೇಕ ಯುವ ಕ್ರಿಕೆಟಿಗರಿಗೆ ಭಾರತ ತಂಡವನ್ನು ಪ್ರತಿನಿಧಿಸಲು ಅವಕಾಶ ಸಿಕ್ಕಿದೆ. ಇದಾಗ್ಯೂ ಆಯ್ಕೆ ಸಮಿತಿ ತನ್ನನ್ನು ಕಡೆಗಣಿಸುತ್ತಿದ್ದಾರೆ ಎಂದು ಶೆಲ್ಡನ್ ಜಾಕ್ಸನ್ ನೋವನ್ನು ತೋಡಿಕೊಂಡಿದ್ದಾರೆ.

ಟೀಮ್ ಇಂಡಿಯಾ ಎ ತಂಡ ಪ್ರಕಟಗೊಂಡ ಬೆನ್ನಲ್ಲೇ ಟ್ವಿಟರ್​ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿರುವ ಜಾಕ್ಸನ್, ನಾನು ಸತತ 3 ಸೀಸನ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೆ, ಬಹುಶಃ ನನ್ನ ಪ್ರದರ್ಶನದ ಆಧಾರದ ಮೇಲೆ ನನ್ನನ್ನು ಆಯ್ಕೆ ಮಾಡುತ್ತಿದ್ದರು. ನನ್ನ ವಯಸ್ಸನ್ನು ನೋಡುತ್ತಿರಲಿಲ್ಲ. ಕನಸು ಕಾಣುವ ಹಕ್ಕು ನನಗೂ ಇದೆ. ನೀನು ಉತ್ತಮ ಆಟಗಾರ ಮತ್ತು ಉತ್ತಮ ಪ್ರದರ್ಶನ ನೀಡುತ್ತೀಯಾ, ಆದರೆ ನಿನಗೆ ವಯಸ್ಸಾಗಿದೆ ಎಂಬುದನ್ನು ಕೇಳಲು ಬೇಸರವಾಗುತ್ತದೆ. ಅಂದಹಾಗೆ ನನ್ನ ವಯಸ್ಸು 35, 75 ಅಲ್ಲ…ಎಂದು ಜಾಕ್ಸನ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಈ ಮೂಲಕ ದೇಶೀಯ ಅಂಗಳದಲ್ಲಿ ಕಳೆದ 3 ಸೀಸನ್​ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ ವಯಸ್ಸಿನ ಕಾರಣ ತನನ್ನು ತಂಡಕ್ಕೆ ಆಯ್ಕೆ ಮಾಡದಿರುವ ಬಗ್ಗೆ ಶೆಲ್ಡನ್ ಜಾಕ್ಸನ್ ಅಸಮಾಧಾನ ಹೊರಹಾಕಿದ್ದಾರೆ.

ಶೆಲ್ಡನ್ ಜಾಕ್ಸನ್ 2006 ರಲ್ಲಿ ಲಿಸ್ಟ್-ಎ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದರು. ಇದುವರೆಗೆ 67 ಪಂದ್ಯಗಳಲ್ಲಿ 8 ಶತಕ ಮತ್ತು 12 ಅರ್ಧ ಶತಕಗಳ ನೆರವಿನಿಂದ ಒಟ್ಟು 2346 ರನ್ ಗಳಿಸಿದ್ದಾರೆ. 2011ರಲ್ಲಿ ಪ್ರಥಮ ದರ್ಜೆಗೆ ಪದಾರ್ಪಣೆ ಮಾಡಿದ ಅವರು ಇಲ್ಲಿಯವರೆಗೆ ಒಟ್ಟು 5947 ರನ್ ಗಳಿಸಿದ್ದು, ಈ ವೇಳೆ 19 ಶತಕ, 31 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಇನ್ನು ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಭಾರತ A ತಂಡ: ಪ್ರಿಯಾಂಕ್ ಪಾಂಚಾಲ್ (ನಾಯಕ), ಅಭಿಮನ್ಯು ಈಶ್ವರನ್, ರುತುರಾಜ್ ಗಾಯಕ್ವಾಡ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ತಿಲಕ್ ವರ್ಮಾ, ಕೆಎಸ್ ಭರತ್, ಉಪೇಂದ್ರ ಯಾದವ್, ಕುಲದೀಪ್ ಯಾದವ್, ಸೌರಭ್ ಕುಮಾರ್, ರಾಹುಲ್ ಚಾಹರ್, ಪ್ರಸಿದ್ಧ್ ಕೃಷ್ಣ, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಯಶ್ ದಯಾಳ್, ಅರ್ಜನ್ ನಾಗವಾಸ್ವಾಲಾ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ