AB de Villiers: ಮುಂದಿನ ವರ್ಷ ನಾನು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿರುತ್ತೇನೆ, ಆದರೆ…!
AB de Villiers: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ 11 ವರ್ಷಗಳ ಕಾಲ ಆಡಿದ್ದ ಎಬಿಡಿ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಅಲ್ಲದೆ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಒಟ್ಟು 184 ಪಂದ್ಯಗಳಿಂದ ಒಟ್ಟು 5162 ರನ್ ಕಲೆಹಾಕಿದ್ದರು.

RCB ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ (AB De Villiers) 2021 ರಲ್ಲಿ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದರು. ಆರ್‌ಸಿಬಿ ತಂಡದ ಸ್ಟಾರ್ ಆಟಗಾರನಾಗಿದ್ದ ಎಬಿಡಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 156 ಪಂದ್ಯಗಳಾಡಿದ್ದರು. ಈ ವೇಳೆ ಒಟ್ಟು 4,491 ರನ್‌ಗಳನ್ನು ಕಲೆಹಾಕುವ ಮೂಲಕ ಅಬ್ಬರಿಸಿದ್ದರು. ಅಷ್ಟೇ ಅಲ್ಲದೆ ಆರ್‌ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದರು. ಹಾಗೆಯೇ ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಇದಾಗ್ಯೂ ದಿಢೀರಣೆ ನಿವೃತ್ತಿ ಘೋಷಿಸಿ ಎಬಿಡಿ ಎಲ್ಲರಿಗೂ ಶಾಕ್ ನೀಡಿದ್ದರು. ಇದಾಗ್ಯೂ ಎಬಿಡಿ ಕಂಬ್ಯಾಕ್ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿದ್ದವು. ಅದರಲ್ಲೂ ಐಪಿಎಲ್ 2023 ರ ವೇಳೆ ಬೆಂಗಳೂರಿಗೆ ಬರುವುದಾಗಿ ಈ ಹಿಂದೆಯೇ ಡಿವಿಲಿಯರ್ಸ್ ತಿಳಿಸಿದ್ದರು.
ಆದರೀಗ ತಾನು ಬರುತ್ತಿರುವುದು ಆರ್‌ಸಿಬಿ ಪರ ಆಡಲು ಅಲ್ಲ ಎಂಬುದನ್ನು ಖುದ್ದು ಎಬಿಡಿಯೇ ಸ್ಪಷ್ಟಪಡಿಸಿದ್ದಾರೆ. ಮುಂದಿನ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗುತ್ತೇನೆ. ಆದರೆ ಕ್ರಿಕೆಟ್ ಆಡಲು ಅಲ್ಲ. ಇಲ್ಲಿಯವರೆಗೆ ಐಪಿಎಲ್ ಪ್ರಶಸ್ತಿ ಗೆಲ್ಲದಿದ್ದಕ್ಕಾಗಿ ಆರ್‌ಸಿಬಿ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಲಿದ್ದೇನೆ. ಕಳೆದ ಒಂದು ದಶಕದಲ್ಲಿ ಅವರು ನೀಡಿದ ಬೆಂಬಲಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಎಬಿ ಡಿವಿಲಿಯರ್ಸ್ ತಿಳಿಸಿದ್ದಾರೆ.
ಇದೇ ವೇಳೆ ನಾನು ಯಾವುದೇ ತಂಡಕ್ಕೆ ತರಬೇತಿ ನೀಡಲು ಯೋಜಿಸುತ್ತಿಲ್ಲ. ನಾನು ಕಲಿತ ಎಲ್ಲವನ್ನೂ ಹಂಚಿಕೊಳ್ಳಲು ನಾನು ಸಂಪೂರ್ಣವಾಗಿ ಇಷ್ಟಪಡುತ್ತೇನೆ. ಆದರೆ 18 ವರ್ಷಗಳ ಪ್ರಯಾಣದ ನಂತರ ಮನೆಯಲ್ಲಿ ಸ್ವಲ್ಪ ಸಮಯ ಕಳೆಯಲು ನನಗೆ ತುಂಬಾ ಸಂತೋಷವಾಗಿದೆ. ಹೀಗಾಗಿ ಯಾವುದೇ ಕೋಚಿಂಗ್ ಹುದ್ದೆಗಳನ್ನು ಕೂಡ ಹೊಂದುತ್ತಿಲ್ಲ ಎಂಬುದನ್ನು ಎಬಿಡಿ ಸ್ಪಷ್ಟಪಡಿಸಿದ್ದಾರೆ.
ಇದರೊಂದಿಗೆ ಎಬಿ ಡಿವಿಲಿಯರ್ಸ್ ಆರ್‌ಸಿಬಿ ಪರ ಆಟಗಾರನಾಗಿ ಅಥವಾ ತರಬೇತುದಾರನಾಗಿ ಕಂಬ್ಯಾಕ್ ಮಾಡುವುದಿಲ್ಲ ಎಂಬುದು ಖಚಿತವಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೆ ಖುದ್ದು ಸಿಡಿಲಬ್ಬರದ ಸಿಡಿಲಮರಿ ಎಬಿಡಿ ತೆರೆ ಎಳೆದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ 11 ವರ್ಷಗಳ ಕಾಲ ಆಡಿದ್ದ ಎಬಿಡಿ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಅಲ್ಲದೆ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಒಟ್ಟು 184 ಪಂದ್ಯಗಳಿಂದ ಒಟ್ಟು 5162 ರನ್ ಕಲೆಹಾಕಿದ್ದರು. ಈ ವೇಳೆ 3 ಭರ್ಜರಿ ಶತಕಗಳು, 40 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಆರ್‌ಸಿಬಿ ಪರ ಅತೀ ಹೆಚ್ಚು ಪಂದ್ಯವಾಡಿದ ಹಾಗೂ ಅತೀ ಹೆಚ್ಚು ಕಾಲ ಆಡಿದ ವಿದೇಶಿ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ.
Published On - 12:55 pm, Wed, 5 October 22




