AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಎರಡು ವಿಶ್ರಾಂತಿ… ಕೊನೆಯ ಟೆಸ್ಟ್​ನಲ್ಲಿ ಕಣಕ್ಕಿಳಿಯಲ್ವಾ ಜಸ್​ಪ್ರೀತ್ ಬುಮ್ರಾ

India vs England 5th Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯವು ಜುಲೈ 31 ರಿಂದ ಶುರುವಾಗಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿಯನ್ನು 2-2 ಅಂತರದಿಂದ ಡ್ರಾಗೊಳಿಸಬಹುದು. ಹೀಗಾಗಿ ಈ ಮ್ಯಾಚ್ ಭಾರತ ತಂಡದ ಪಾಲಿಗೆ ನಿರ್ಣಾಯಕ.

IND vs ENG: ಎರಡು ವಿಶ್ರಾಂತಿ... ಕೊನೆಯ ಟೆಸ್ಟ್​ನಲ್ಲಿ ಕಣಕ್ಕಿಳಿಯಲ್ವಾ ಜಸ್​ಪ್ರೀತ್ ಬುಮ್ರಾ
Jasprit Bumrah
ಝಾಹಿರ್ ಯೂಸುಫ್
|

Updated on:Jul 29, 2025 | 11:52 AM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಜುಲೈ 31 ರಿಂದ ಶುರುವಾಗಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯಲಿದ್ದಾರಾ? ಎಂಬುದೇ ಈಗ ಕುತೂಹಲ. ಏಕೆಂದರೆ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಬುಮ್ರಾ ಕೇವಲ 3 ಪಂದ್ಯಗಳನ್ನು ಮಾತ್ರ ಆಡಲಿದ್ದಾರೆ ಎಂದು ಈಗಾಗಲೇ ಬಿಸಿಸಿಐ ತಿಳಿಸಿದೆ.  ಆದರೀಗ ಟೀಮ್ ಇಂಡಿಯಾ ಮುಂದಿರುವುದು ಸರಣಿ ನಿರ್ಣಾಯಕ ಪಂದ್ಯ.

ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಮಾತ್ರ ಸರಣಿಯನ್ನು 2-2 ಅಂತರದಿಂದ ಡ್ರಾನಲ್ಲಿ ಅಂತ್ಯಗೊಳಿಸಬಹುದು. ಹೀಗಾಗಿ ಭಾರತ ತಂಡಕ್ಕೆ ಪ್ರಮುಖ ವೇಗಿಯ ಅವಶ್ಯಕತೆಯಿದೆ. ಆದರೆ ಅತ್ತ ಬುಮ್ರಾಗೆ ವಿಶ್ರಾಂತಿ ನೀಡುವ ಯೋಜನೆಯೊಂದು ಬಿಸಿಸಿಐ ಮುಂದಿದೆ.

ಈ ಯೋಜನೆಯ ಬಗ್ಗೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರನ್ನು ಪ್ರಶ್ನಿಸಿದಾಗ, ಸ್ಪಷ್ಟ ಉತ್ತರ ದೊರಕಿಲ್ಲ. ಅಂದರೆ ಐದನೇ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಕಣಕ್ಕಿಳಿಯುತ್ತಾರಾ ಎಂಬ ಪ್ರಶ್ನೆಗೆ ಗಂಭೀರ್, ಇನ್ನೂ ಸಹ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂಬ ಉತ್ತರ ನೀಡಿದ್ದಾರೆ. ಹೀಗಾಗಿ ಓವಲ್ ಟೆಸ್ಟ್​ನಲ್ಲಿ ಬುಮ್ರಾ ಕಣಕ್ಕಿಳಿಯುವುದು ಇನ್ನೂ ಸಹ ಖಚಿತವಾಗಿಲ್ಲ ಎನ್ನಬಹುದು.

ಬುಮ್ರಾಗೆ ವಿಶ್ರಾಂತಿ ಏಕೆ?

ಜಸ್​ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದ ವೇಳೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದರು. ಈ ಸಮಸ್ಯೆಯ ಕಾರಣ ಅವರು ಚಾಂಪಿಯನ್ಸ್​ ಟ್ರೋಫಿಯಲ್ಲಿ ಕಣಕ್ಕಿಳಿದಿರಲಿಲ್ಲ. ಇತ್ತ ಬುಮ್ರಾ ಅವರ ಅನುಪಸ್ಥಿತಿಯ ನಡುವೆಯೂ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ಇದಾದ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸಂಪೂರ್ಣ ಫಿಟ್ನೆಸ್ನೊಂದಿಗೆ ಕಾಣಿಸಿಕೊಂಡಿದ್ದ ಬುಮ್ರಾ ಅವರನ್ನು ಇಂಗ್ಲೆಂಡ್ ಸರಣಿಗೆ ಆಯ್ಕೆ ಮಾಡಲಾಗಿತ್ತು. ಆದರೆ ಅವರ ಮೇಲಿರುವ ಒತ್ತಡವನ್ನು ಕಡಿಮೆ ಮಾಡುವ ಸಲುವಾಗಿ ಇಂಗ್ಲೆಂಡ್​ ವಿರುದ್ಧದ ಸರಣಿ ನಡುವೆ ಬುಮ್ರಾಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ.

ಇದನ್ನೂ ಓದಿ: ಗೌತಮ್ ಗಂಭೀರ್​ ಬಲಗೈ ಬಂಟರಿಗೆ ಗೇಟ್​ ಪಾಸ್?

ಒಂದು ವೇಳೆ ಬುಮ್ರಾ ಅವರನ್ನು ಎಲ್ಲಾ ಪಂದ್ಯಗಳಲ್ಲಿ ಕಣಕ್ಕಿಳಿಸಿದರೆ ಅವರು ಮತ್ತೆ ನೋವಿನ ಸಮಸ್ಯೆಗೆ ಸಿಲುಕಬಹುದು. ಅದು ಅವರ ಟೆಸ್ಟ್ ವೃತ್ತಿಜೀವನದ ಗಂಭೀರ ಪರಿಣಾಮ ಬೀರಬಹುದು. ಇದನ್ನು ತಪ್ಪಿಸಲು ಇಂಗ್ಲೆಂಡ್ ವಿರುದ್ಧದ ಸರಣಿಯ ನಡುವೆ ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗುತ್ತಿದೆ. ಇದೇ ಕಾರಣದಿಂದಾಗಿ ಅವರು ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯವಾಡಿರಲಿಲ್ಲ. ಆ ಬಳಿಕ ಬ್ಯಾಕ್ ಟು ಬ್ಯಾಕ್ 2 ಮ್ಯಾಚ್​ಗಳನ್ನಾಡಿರುವ ಜಸ್​ಪ್ರೀತ್ ಬುಮ್ರಾಗೆ 5ನೇ ಟೆಸ್ಟ್ ಪಂದ್ಯದಲ್ಲಿ ವಿಶ್ರಾಂತಿ ನೀಡಿದರೂ ಅಚ್ಚರಿಪಡಬೇಕಿಲ್ಲ.

Published On - 10:55 am, Tue, 29 July 25

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ