IPL 2022: ಯುವ ನಾಯಕನ ಮೇಲೆ ಕಣ್ಣಿಟ್ಟಿರುವ CSK

MS Dhoni: ಸಿಎಸ್​ಕೆ ತಂಡದ ಪ್ರಸ್ತುತ ನಾಯಕ ಮಹೇಂದ್ರ ಸಿಂಗ್ ಧೋನಿ ಈ ಬಾರಿಯ ಐಪಿಎಲ್​ ಮೂಲಕ ವಿದಾಯ ಹೇಳುವ ಸಾಧ್ಯತೆ ಹೆಚ್ಚಿದೆ. ಅದರಲ್ಲೂ ಚೆನ್ನೈನಲ್ಲಿ ನಡೆಯಲಿರುವ ಪಂದ್ಯದ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್​ ಬೈ ಹೇಳಲು ಧೋನಿ ಬಯಸಿದ್ದಾರೆ ಎಂದು ಹೇಳಲಾಗಿದೆ.

IPL 2022: ಯುವ ನಾಯಕನ ಮೇಲೆ ಕಣ್ಣಿಟ್ಟಿರುವ CSK
IPL 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 09, 2021 | 5:56 PM

ಇಂಡಿಯನ್ ಪ್ರೀಮಿಯರ್ ಲೀಗ್​ 2022ರ (IPL 2022) ಸಿದ್ದತೆಗಳು ಶುರುವಾದ ಬೆನ್ನಲ್ಲೇ ಇದೀಗ ಮೆಗಾ ಹರಾಜಿನ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಅದರಲ್ಲೂ ಕೆಲ ತಂಡಗಳಿಂದ ಪ್ರಮುಖ ಆಟಗಾರರು ಹೊರಬರಲಿದ್ದು, ಆ ಮೂಲಕ ಹರಾಜಿನಲ್ಲಿ ಅದೃಷ್ಟ ಪರೀಕ್ಷೆ ನಡೆಸಲು ಮುಂದಾಗಲಿದ್ದಾರೆ. ಈ ಪಟ್ಟಿಯಲ್ಲಿ ಕೆಎಲ್ ರಾಹುಲ್ (KL Rahul),  ಶ್ರೇಯಸ್ ಅಯ್ಯರ್ (Shreyas Iyer) ಹಾಗೂ ಡೇವಿಡ್ ವಾರ್ನರ್ (David Warner) ಹೆಸರು ಮುಂಚೂಣಿಯಲ್ಲಿದೆ. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಸಂಜು ಸ್ಯಾಮ್ಸನ್ (Sanju Samson). ರಾಜಸ್ಥಾನ್ ರಾಯಲ್ಸ್​ ತಂಡದ ನಾಯಕರಾಗಿರುವ ಸ್ಯಾಮ್ಸನ್ ಮುಂಬರುವ ಸೀಸನ್​ನಲ್ಲಿ ಹರಾಜಿನಲ್ಲಿ ಕಾಣಿಸಿಕೊಳ್ಳಲು ಬಯಸಿದ್ದಾರೆ ಎಂದು ವರದಿಯಾಗಿದೆ.

ಕಳೆದ ಬಾರಿ ರಾಜಸ್ಥಾನ್ ರಾಯಲ್ಸ್ ಪರ 14 ಪಂದ್ಯಗಳನ್ನಾಡಿದ್ದ ಸ್ಯಾಮ್ಸನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅಷ್ಟೇ ಅಲ್ಲದೆ 484 ರನ್​ಗಳ ಕಲೆಹಾಕುವ ಮೂಲಕ ಟಾಪ್ ರನ್ ಸ್ಕೋರರ್ ಎನಿಸಿಕೊಂಡಿದ್ದರು. ಇದಾಗ್ಯೂ ಅವರ ನಾಯಕತ್ವದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಅಂಕ ಪಟ್ಟಿಯಲ್ಲಿ 7ನೇ ಸ್ಥಾನ ಅಲಂಕರಿಸುವ ಮೂಲಕ ನಿರಾಸೆ ಮೂಡಿಸಿತು.

ಇದೀಗ ಹೊಸ ಎರಡು ತಂಡಗಳು ಸೇರ್ಪಡೆಯೊಂದಿಗೆ ಸಂಜು ಸ್ಯಾಮ್ಸನ್ ಕೂಡ ರಾಜಸ್ಥಾನ್ ರಾಯಲ್ಸ್ ತಂಡದಿಂದ ಹೊರಬರಲು ನಿರ್ಧರಿಸಿದ್ದಾರೆ. ಈ ಮೂಲಕ ಬೇರೆ ತಂಡದ ಪರ ಕಣಕ್ಕಿಳಿಯಲು ಬಯಸಿದ್ದಾರೆ. ಈ ಪಟ್ಟಿಯಲ್ಲಿ ಸಿಎಸ್​ಕೆ ತಂಡದ ಹೆಸರು ಮುಂಚೂಣಿಯಲ್ಲಿದೆ. ಕೆಲ ವರದಿಗಳ ಪ್ರಕಾರ, ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಸಿಎಸ್​ಕೆ ಪ್ಲ್ಯಾನ್ ರೂಪಿಸಿದೆ.

ಇತ್ತ ಸಂಜು ಸ್ಯಾಮ್ಸನ್ ಕೂಡ ಸೋಷಿಯಲ್ ಮೀಡಿಯಾ ಮೂಲಕ ಅದರ ಸಣ್ಣ ಸುಳಿವನ್ನು ನೀಡಿದ್ದಾರೆ. ಕೆಲ ದಿನಗಳಿಂದ ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ಅಧಿಕೃತ ಖಾತೆಯನ್ನು ಫಾಲೋ ಮಾಡುವುದನ್ನು ನಿಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಸಿಎಸ್​ಕೆ ತಂಡ ಅಧಿಕೃತ ಖಾತೆಯನ್ನು ಫಾಲೋ ಮಾಡಲಾರಂಭಿಸಿದ್ದಾರೆ. ಹೀಗಾಗಿ ಸ್ಯಾಮ್ಸನ್ ಅವರು ಮುಂಬರುವ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಲಿದ್ದಾರಾ ಎಂಬ ಅನುಮಾನವೊಂದು ಹುಟ್ಟಿಕೊಂಡಿದೆ.

ಏಕೆಂದರೆ ಸಿಎಸ್​ಕೆ ತಂಡದ ಪ್ರಸ್ತುತ ನಾಯಕ ಮಹೇಂದ್ರ ಸಿಂಗ್ ಧೋನಿ ಈ ಬಾರಿಯ ಐಪಿಎಲ್​ ಮೂಲಕ ವಿದಾಯ ಹೇಳುವ ಸಾಧ್ಯತೆ ಹೆಚ್ಚಿದೆ. ಅದರಲ್ಲೂ ಚೆನ್ನೈನಲ್ಲಿ ನಡೆಯಲಿರುವ ಪಂದ್ಯದ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಗುಡ್​ ಬೈ ಹೇಳಲು ಧೋನಿ ಬಯಸಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಅವರ ಸ್ಥಾನದಲ್ಲಿ ಸಂಜು ಸ್ಯಾಮ್ಸನ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆ ಮಾಡಲು ಸಿಎಸ್​ಕೆ ಬಯಸಿದೆ ಎನ್ನಲಾಗಿದೆ.

ಅಷ್ಟೇ ಅಲ್ಲದೆ ಸ್ಯಾಮ್ಸನ್ ವಿಕೆಟ್ ಕೀಪರ್-ಬ್ಯಾಟರ್ ಜೊತೆಗೆ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದ ಅನುಭವ ಹೊಂದಿದ್ದಾರೆ. ಹೀಗಾಗಿ ಶಾಂತ ಸ್ವಭಾವದ ಸ್ಯಾಮ್ಸನ್ ಅವರನ್ನು ಖರೀದಿಸಿ ಸಿಎಸ್​ಕೆ ತಂಡವು ನಾಯಕತ್ವದ ಜವಾಬ್ದಾರಿವಹಿಸಲು ಯೋಜನೆ ರೂಪಿಸಿದೆ ಎಂದು ಹೇಳಲಾಗಿದೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸಂಜು ಸ್ಯಾಮ್ಸನ್ ಅವರನ್ನು ಹರಾಜಿನಲ್ಲಿ ಟಾರ್ಗೆಟ್ ಮಾಡಲಿದ್ದು, ಅವರು ಸಿಕ್ಕರೆ ಮುಂದಿನ ದಿನಗಳಲ್ಲಿ ಸಿಎಸ್​ಕೆ ತಂಡವನ್ನು ಸ್ಯಾಮ್ಸನ್ ಮುನ್ನಡೆಸುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ: Virat Kohli: ಟೀಮ್ ಇಂಡಿಯಾ ಮುಂದಿನ ನಾಯಕ ಯಾರು? ಸುಳಿವು ನೀಡಿದ ವಿರಾಟ್ ಕೊಹ್ಲಿ

(Will RR Skipper Sanju Samson Play For CSK In IPL 2022?)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ