AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಸ್ಟಾರ್ ಸ್ಪೋರ್ಟ್ಸ್, ಹಾಟ್​ ಸ್ಟಾರ್​ನಲ್ಲಿ ಮಾತ್ರವಲ್ಲ: ಭಾರತ-ಆಸ್ಟ್ರೇಲಿಯಾ WTC ಫೈನಲ್ ಯಾವುದರಲ್ಲಿ ವೀಕ್ಷಿಸಬಹುದು?

WTC Final 2023 Free Live Streaming: ಸಾಕಷ್ಟು ರೋಚಕತೆ ಸೃಷ್ಟಿಸಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ 2023 ಫೈನಲ್ ಪಂದ್ಯ ಯಾವುದರಲ್ಲಿ ನೇರ ಪ್ರಸಾರ ಕಾಣಲಿದೆ?, ಎಷ್ಟು ಗಂಟೆಗೆ ಶುರುವಾಗಲಿದೆ ಎಂಬುದನ್ನು ನೋಡೋಣ.

WTC Final 2023: ಸ್ಟಾರ್ ಸ್ಪೋರ್ಟ್ಸ್, ಹಾಟ್​ ಸ್ಟಾರ್​ನಲ್ಲಿ ಮಾತ್ರವಲ್ಲ: ಭಾರತ-ಆಸ್ಟ್ರೇಲಿಯಾ WTC ಫೈನಲ್ ಯಾವುದರಲ್ಲಿ ವೀಕ್ಷಿಸಬಹುದು?
IND vs AUS WTC Final 2023
Vinay Bhat
|

Updated on: Jun 07, 2023 | 11:23 AM

Share

ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಬಹುನಿರೀಕ್ಷಿತ ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final 2023) ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಜೂನ್ 7 ರಿಂದ 11 ರ ವರೆಗೆ ಈ ಮಹತ್ವದ ಪಂದ್ಯ ನಡೆಯಲಿದ್ದು, ಈಗಾಗಲೇ ಉಭಯ ತಂಡಗಳು ಲಂಡನ್​ನ (London) ಪ್ರತಿಷ್ಠಿತ ಕೆನ್ನಿಂಗ್ಟನ್ ಓವಲ್ ಮೈದಾನಕ್ಕೆ ತಲುಪಿದ್ದಾರೆ. 143 ವರ್ಷಗಳ ಇತಿಹಾಸ ಹೊಂದಿರುವ ಓವಲ್‌ ಗ್ರೌಂಡ್‌ನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ನಡೆಯುತ್ತಿದೆ. ಹೀಗೆ ಸಾಕಷ್ಟು ರೋಚಕತೆ ಸೃಷ್ಟಿಸಿರುವ ಡಬ್ಲ್ಯೂಟಿಸಿ 2023 ಫೈನಲ್ ಪಂದ್ಯ ಯಾವುದರಲ್ಲಿ ನೇರ ಪ್ರಸಾರ ಕಾಣಲಿದೆ ಎಂಬುದನ್ನು ನೋಡೋಣ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಎಷ್ಟು ಗಂಟೆಗೆ?

ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ. 2:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ
Image
India Plying XI vs AUS Final: ಒಂದು ಸ್ಥಾನಕ್ಕೆ ಇಬ್ಬರ ಪೈಪೋಟಿ: ರೋಚಕತೆ ಸೃಷ್ಟಿಸಿದ ಭಾರತದ ಪ್ಲೇಯಿಂಗ್ ಇಲೆವೆನ್
Image
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆರಂಭಕ್ಕೆ ಕ್ಷಣಗಣನೆ: ರೋಹಿತ್ ಪಡೆಯಿಂದ ಭರ್ಜರಿ ಅಭ್ಯಾಸ
Image
WTC Final, IND vs AUS: ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯಕ್ಕೆ ಹೈ ಅಲರ್ಟ್, ದಿಢೀರ್ ಬ್ಯಾಕಪ್ ಪಿಚ್ ರೆಡಿ ಮಾಡಿದ ಐಸಿಸಿ: ಯಾಕೆ ಗೊತ್ತೇ?
Image
WTC 2023 Final, IND vs AUS: ಇಂದಿನಿಂದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್: ಭಾರತ-ಆಸ್ಟ್ರೇಲಿಯಾ ನಡುವೆ ರೋಚಕ ಕಾದಾಟ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಯಾವುದರಲ್ಲಿ ವೀಕ್ಷಿಸಬಹುದು?

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್‌ ಪಂದ್ಯ ಸ್ಟಾರ್‌ ಸ್ಪೋರ್ಟ್ಸ್‌ ಟೆಲಿವಿಷನ್‌ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದೆ. ಲೈವ್‌ ಸ್ಟ್ರೀಮಿಂಗ್‌ ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌ ಮೊಬೈಲ್‌ ಅಪ್ಲಿಕೇಷನ್‌ನಲ್ಲಿ ನೋಡಬಹುದು. ಸ್ಟಾರ್‌ ಸ್ಪೋರ್ಟ್ಸ್‌ ನೆಟ್​ವರ್ಕ್​ನ ಕನ್ನಡ, ತಮಿಳು, ತೆಲುಗು ಸೇರಿದಂತೆ ಎಲ್ಲ ಭಾಷೆಗಳಲ್ಲಿ ಲೈವ್ ಕಾಣಲಿದೆ. ಇದರ ಜೊತೆಗೆ ಭಾರತ ಸರ್ಕಾರದ ಡಿಡಿ ಸ್ಪೋರ್ಟ್ಸ್ ಚಾನೆಲ್​ನಲ್ಲೂ ನೇರಪ್ರಸಾರವಾಗಲಿದೆ.

WTC Final 2023: ಭಾರತಕ್ಕೆ ಸೋಲುಣಿಸಿ ಕಪ್ ಗೆಲ್ಲುತ್ತೇವೆ: ಸ್ಟೀವ್ ಸ್ಮಿತ್

ದಾಖಲೆ ಬರೆಯುತ್ತಾ ಟೀಮ್ ಇಂಡಿಯಾ?:

ವಿಶೇಷ ಎಂದರೆ ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ ಟ್ರೋಫಿ ಗೆಲ್ಲುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾದರೆ ಇದುವರೆಗಿನ ಕ್ರಿಕೆಟ್ ಇತಿಹಾಸದಲ್ಲಿ ಯಾವ ತಂಡವೂ ಮಾಡಲಾಗದ ಅಪರೂಪದ ದಾಖಲೆಯೊಂದನ್ನು ಬರೆಯಲಿದೆ. ಆಸೀಸ್ ವಿರುದ್ಧ ಭಾರತ ಟೆಸ್ಟ್ ಚಾಂಪಿಯನ್​ಶಿಪ್ ಗೆದ್ದರೆ, ಏಕದಿನ, ಟಿ20 ಮತ್ತು ಟೆಸ್ಟ್ ಮೂರು ಮಾದರಿಗಳಲ್ಲಿ ವಿಶ್ವಕಪ್ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಜೊತೆಗೆ ಭಾರತ ತಂಡ 2013ರ ಬಳಿಕ ಒಂದೇ ಒಂದು ಐಸಿಸಿ ಟ್ರೋಫಿ ಗೆಲ್ಲದ ಬರವನ್ನು ನೀಗಿಸಿಕೊಳ್ಳಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಟೀವ್ ಸ್ಮಿತ್ (ಉಪ ನಾಯಕ), ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್, ಮೈಕೆಲ್ ನೆಸರ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ