ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಬಹುನಿರೀಕ್ಷಿತ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ (WTC Final 2023) ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಜೂನ್ 7 ರಿಂದ 11 ರ ವರೆಗೆ ಈ ಮಹತ್ವದ ಪಂದ್ಯ ನಡೆಯಲಿದ್ದು, ಈಗಾಗಲೇ ಉಭಯ ತಂಡಗಳು ಲಂಡನ್ನ (London) ಪ್ರತಿಷ್ಠಿತ ಕೆನ್ನಿಂಗ್ಟನ್ ಓವಲ್ ಮೈದಾನಕ್ಕೆ ತಲುಪಿದ್ದಾರೆ. 143 ವರ್ಷಗಳ ಇತಿಹಾಸ ಹೊಂದಿರುವ ಓವಲ್ ಗ್ರೌಂಡ್‌ನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ನಡೆಯುತ್ತಿದೆ. ಹೀಗೆ ಸಾಕಷ್ಟು ರೋಚಕತೆ ಸೃಷ್ಟಿಸಿರುವ ಡಬ್ಲ್ಯೂಟಿಸಿ 2023 ಫೈನಲ್ ಪಂದ್ಯ ಯಾವುದರಲ್ಲಿ ನೇರ ಪ್ರಸಾರ ಕಾಣಲಿದೆ ಎಂಬುದನ್ನು ನೋಡೋಣ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಎಷ್ಟು ಗಂಟೆಗೆ?
ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ. 2:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಯಾವುದರಲ್ಲಿ ವೀಕ್ಷಿಸಬಹುದು?
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ಟೆಲಿವಿಷನ್ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದೆ. ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಮೊಬೈಲ್ ಅಪ್ಲಿಕೇಷನ್‌ನಲ್ಲಿ ನೋಡಬಹುದು. ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ಕನ್ನಡ, ತಮಿಳು, ತೆಲುಗು ಸೇರಿದಂತೆ ಎಲ್ಲ ಭಾಷೆಗಳಲ್ಲಿ ಲೈವ್ ಕಾಣಲಿದೆ. ಇದರ ಜೊತೆಗೆ ಭಾರತ ಸರ್ಕಾರದ ಡಿಡಿ ಸ್ಪೋರ್ಟ್ಸ್ ಚಾನೆಲ್ನಲ್ಲೂ ನೇರಪ್ರಸಾರವಾಗಲಿದೆ.
WTC Final 2023: ಭಾರತಕ್ಕೆ ಸೋಲುಣಿಸಿ ಕಪ್ ಗೆಲ್ಲುತ್ತೇವೆ: ಸ್ಟೀವ್ ಸ್ಮಿತ್
ವಿಶೇಷ ಎಂದರೆ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಟ್ರೋಫಿ ಗೆಲ್ಲುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾದರೆ ಇದುವರೆಗಿನ ಕ್ರಿಕೆಟ್ ಇತಿಹಾಸದಲ್ಲಿ ಯಾವ ತಂಡವೂ ಮಾಡಲಾಗದ ಅಪರೂಪದ ದಾಖಲೆಯೊಂದನ್ನು ಬರೆಯಲಿದೆ. ಆಸೀಸ್ ವಿರುದ್ಧ ಭಾರತ ಟೆಸ್ಟ್ ಚಾಂಪಿಯನ್ಶಿಪ್ ಗೆದ್ದರೆ, ಏಕದಿನ, ಟಿ20 ಮತ್ತು ಟೆಸ್ಟ್ ಮೂರು ಮಾದರಿಗಳಲ್ಲಿ ವಿಶ್ವಕಪ್ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಜೊತೆಗೆ ಭಾರತ ತಂಡ 2013ರ ಬಳಿಕ ಒಂದೇ ಒಂದು ಐಸಿಸಿ ಟ್ರೋಫಿ ಗೆಲ್ಲದ ಬರವನ್ನು ನೀಗಿಸಿಕೊಳ್ಳಲಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಟೀವ್ ಸ್ಮಿತ್ (ಉಪ ನಾಯಕ), ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್, ಮೈಕೆಲ್ ನೆಸರ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ