AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2025: ಇಂಗ್ಲೆಂಡ್ ಮಣಿಸಿ ಮೊದಲ ಬಾರಿಗೆ ವಿಶ್ವಕಪ್ ಫೈನಲ್​ಗೇರಿದ ದಕ್ಷಿಣ ಆಫ್ರಿಕಾ

South Africa Qualifies for 2025 Women's WC Final: 2025ರ ಮಹಿಳಾ ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಬಲಿಷ್ಠ ಇಂಗ್ಲೆಂಡ್ ತಂಡವನ್ನು 125 ರನ್‌ಗಳಿಂದ ಸೋಲಿಸಿ ಫೈನಲ್‌ಗೆ ಲಗ್ಗೆ ಹಾಕಿದೆ. ನಾಯಕಿ ಲಾರಾ ವೋಲ್ವಾರ್ಡ್ ಅವರ 169 ರನ್‌ಗಳ ಅಮೋಘ ಶತಕ ಮತ್ತು ಮರಿಜಾನ್ನೆ ಕಪ್ ಅವರ 5 ವಿಕೆಟ್‌ಗಳ ಸಾಧನೆ ತಂಡದ ಐತಿಹಾಸಿಕ ಗೆಲುವಿಗೆ ಪ್ರಮುಖ ಕಾರಣವಾಯಿತು. ಬರ್ಸಪರಾ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ತಂಡ 194 ರನ್‌ಗಳಿಗೆ ಆಲೌಟ್ ಆಯಿತು.

World Cup 2025: ಇಂಗ್ಲೆಂಡ್ ಮಣಿಸಿ ಮೊದಲ ಬಾರಿಗೆ ವಿಶ್ವಕಪ್ ಫೈನಲ್​ಗೇರಿದ ದಕ್ಷಿಣ ಆಫ್ರಿಕಾ
South Africa Women
ಪೃಥ್ವಿಶಂಕರ
|

Updated on:Oct 29, 2025 | 10:13 PM

Share

ಬರ್ಸಪರಾ ಕ್ರೀಡಾಂಗಣದಲ್ಲಿ ನಡೆದ 2025 ರ ಮಹಿಳಾ ವಿಶ್ವಕಪ್​ನ ಮೊದಲ ಸೆಮಿಫೈನಲ್‌ (2025 Women’s World Cup semi-final) ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು 125 ರನ್‌ಗಳಿಂದ ಸೋಲಿಸಿದ ದಕ್ಷಿಣ ಆಫ್ರಿಕಾ (South Africa vs England) ಮೊದಲ ತಂಡವಾಗಿ ಮೊದಲ ಬಾರಿಗೆ ವಿಶ್ವಕಪ್ ಪೈನಲ್​ಗೆ ಲಗ್ಗೆ ಇಟ್ಟಿದೆ. ಬುಧವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ನಾಯಕಿ ಲಾರಾ ವೋಲ್ವಾರ್ಡ್ ಅವರ ಶತಕದ ಇನ್ನಿಂಗ್ಸ್‌ನ ಆಧಾರದ ಮೇಲೆ 50 ಓವರ್‌ಗಳಲ್ಲಿ ಏಳು ವಿಕೆಟ್‌ ಕಳೆದುಕೊಂಡು 319 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್, ಆಫ್ರಿಕಾ ಬೌಲರ್​ಗಳ ದಾಳಿಗೆ ತತ್ತರಿಸಿ 42.3 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು ಕೇವಲ 194 ರನ್‌ ಕಲೆಹಾಕಲಷ್ಟೇ ಶಕ್ತವಾಯಿತು. ಆಫ್ರಿಕಾ ಪರ ಬೌಲಿಂಗ್​ನಲ್ಲಿ ಮಿಂಚಿದ ಮರಿಜಾನ್ನೆ ಕಪ್ ಐದು ವಿಕೆಟ್‌ಗಳನ್ನು ಪಡೆದರೆ, ನಾಡಿನ್ ಡಿ ಕ್ಲರ್ಕ್ ಎರಡು ವಿಕೆಟ್‌, ಅಯಬೊಂಗಾ ಖಾಕಾ, ಮ್ಲಾಬಾ ಮತ್ತು ಸುನೆ ಲೂಸ್ ತಲಾ ಒಂದು ವಿಕೆಟ್ ಪಡೆದರು.

ಲಾರಾ ವೋಲ್ವಾರ್ಡ್ ಶತಕ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 319 ರನ್ ಗಳಿಸಿತು. ತಂಡದ ಪರ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದ ನಾಯಕಿ ಲಾರಾ ವೋಲ್ವಾರ್ಡ್ 143 ಎಸೆತಗಳಲ್ಲಿ 20 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ 169 ರನ್ ಚಚ್ಚಿದರು. ಇವರ ಹೊರತಾಗಿ ಟ್ಯಾಡ್ಮಿನ್ ಬ್ರಿಟ್ಸ್ 45 ರನ್ ಮತ್ತು ಅನುಭವಿ ಮರಿಜನ್ನೆ ಕಪ್ 33 ಎಸೆತಗಳಲ್ಲಿ 42 ರನ್ ಗಳಿಸುವ ಮೂಲಕ ತಂಡವನ್ನು ಈ ಸ್ಕೋರ್‌ಗೆ ಕೊಂಡೊಯ್ದರು. ಇಂಗ್ಲೆಂಡ್ ಪರ ಬೌಲಿಂಗ್​ನಲ್ಲಿ ಮಿಂಚಿದ ಸೋಫಿ ಎಕ್ಲೆಸ್ಟೋನ್ ನಾಲ್ಕು ವಿಕೆಟ್ ಪಡೆದರೆ, ಲಾರೆನ್ ಬೆಲ್ ಎರಡು ವಿಕೆಟ್, ನ್ಯಾಟ್ ಸಿವರ್-ಬ್ರಂಟ್ ಒಂದು ವಿಕೆಟ್ ಪಡೆದರು.

ಆರಂಭದಲ್ಲೇ ತತ್ತರಿಸಿದ ಇಂಗ್ಲೆಂಡ್

ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಉತ್ತಮ ಆರಂಭ ಪಡೆಯಲಿಲ್ಲ. ಅಗ್ರ ಮೂವರು ಬ್ಯಾಟರ್​ಗಳು ಖಾತೆ ತೆರೆಯದೆ ಪೆವಿಲಿಯನ್ ಸೇರಿಕೊಂಡರು ಇದು ಆರಂಭದಲ್ಲಿ ಇಂಗ್ಲೆಂಡ್‌ಗೆ ದೊಡ್ಡ ಹೊಡೆತ ನೀಡಿತು. ಅಷ್ಟೇ ಅಲ್ಲ, ವಿಕೆಟ್‌ಗಳನ್ನು ಉಳಿಸಿಕೊಳ್ಳುವ ಹೋರಾಟ ಪ್ರಾರಂಭವಾಯಿತು. ಆಮಿ ಜೋನ್ಸ್, ಟ್ಯಾಮಿ ಬ್ಯೂಮಾಂಟ್ ಮತ್ತು ಹೀದರ್ ನೈಟ್ ತಮ್ಮ ಖಾತೆಗಳನ್ನು ತೆರೆಯಲು ಸಾಧ್ಯವಾಗಲಿಲ್ಲ. ನಂತರ ನಾಯಕಿ ನ್ಯಾಟ್ ಸಿವರ್ ಮತ್ತು ಎಲಿಸ್ ಕ್ಯಾಪ್ಸಿ ಇನ್ನಿಂಗ್ಸ್ ಕಟ್ಟಲು ಪ್ರಯತ್ನಿಸಿದರು. ಇವರಿಬ್ಬರು ನಾಲ್ಕನೇ ವಿಕೆಟ್‌ಗೆ 107 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ನ್ಯಾಟ್ ಸಿವರ್ ಬ್ರಂಟ್ 64 ರನ್‌ಗಳಿಸಿದರೆ, ಎಲಿಸ್ ಕ್ಯಾಪ್ಸಿ 50 ರನ್​ಗಳ ಇನ್ನಿಂಗ್ಸ್ ಆಡಿದರು. ಇವರಿಬ್ಬರನ್ನು ಹೊರತುಪಡಿಸಿ ಉಳಿದವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ. ಹೀಗಾಗಿ ಇಂಗ್ಲೆಂಡ್ ಹೀನಾಯ ಸೋಲಿಗೆ ಕೊರಳೊಡ್ಡಬೇಕಾಯಿತು.

World Cup 2025: ಸೆಮೀಸ್​ನಲ್ಲಿ ಆಫ್ರಿಕಾ ನಾಯಕಿಯ ಸಿಡಿಲಬ್ಬರ; ಹೊಸ ವಿಶ್ವ ದಾಖಲೆ ಸೃಷ್ಟಿ

ಮೊದಲ ಬಾರಿಗೆ ಫೈನಲ್‌ಗೆ ಲಗ್ಗೆ

ಏಕದಿನ ವಿಶ್ವಕಪ್ ಇತಿಹಾಸದಲ್ಲಿ ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಫೈನಲ್‌ಗೆ ಅರ್ಹತೆ ಪಡೆದಿದೆ. ಈಗ ದಕ್ಷಿಣ ಆಫ್ರಿಕಾ ಫೈನಲ್‌ನಲ್ಲಿ ಭಾರತ ಅಥವಾ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್ ಪಂದ್ಯವು ಅಕ್ಟೋಬರ್ 30 ರಂದು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಈ ಪಂದ್ಯವನ್ನು ಗೆದ್ದು ಫೈನಲ್ ತಲುಪಿದರೆ, ಕ್ರಿಕೆಟ್ ಜಗತ್ತಿಗೆ ಹೊಸ ಚಾಂಪಿಯನ್ ಸಿಗುತ್ತದೆ. ಈಗ ಎಲ್ಲರ ಗಮನ ಸೆಮಿಫೈನಲ್‌ನಲ್ಲಿ ಭಾರತ ತಂಡ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದರ ಮೇಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 pm, Wed, 29 October 25

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್