AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs GT Viral Video: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಚಿತ್ರ ಘಟನೆ: ಪೊಲೀಸ್ ಅಧಿಕಾರಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ

IPL 2023 Final, CSK vs GT: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಭಿಮಾನಿಗಳು ಚೆನ್ನೈ-ಗುಜರಾತ್ ನಡುವಣ ಐಪಿಎಲ್ 2023 ರ ಫೈನಲ್‌ ಆರಂಭ ಆಗಬಹುದು ಎಂದು ಕಾಯುತ್ತಿರುವಾಗ, ಮಹಿಳೆಯೊಬ್ಬರು ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮಾಡಿದ್ದಾರೆ.

CSK vs GT Viral Video: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಚಿತ್ರ ಘಟನೆ: ಪೊಲೀಸ್ ಅಧಿಕಾರಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ
Women and Police CSK vs GT Fina
Vinay Bhat
|

Updated on: May 29, 2023 | 11:52 AM

Share

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2023) ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಫೈನಲ್ ಪಂದ್ಯ ನಡೆಯಬೇಕಿತ್ತು. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯವನ್ನು ಆಯೋಜಿಸಲಾಗಿತ್ತು. ಆದರೆ, ಎಡೆಬಿಡದೆ ಸುರಿದ ಮಳೆಗೆ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗಿದೆ. ಇಂದು ಸಿಎಸ್​ಕೆ- ಜಿಟಿ (CSK vs GT) ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ. ಭಾನುವಾರ ಈ ರೋಚಕ ಕಾದಾಟ ವೀಕ್ಷಿಸಲು 1,32,000 ಪ್ರೇಕ್ಷಕರು ಬಂದಿದ್ದರು. ಆದರೆ, ಎಲ್ಲರೂ ನಿರಾಸೆ ಅನುಭವಿಸಿದರು. ಇದರ ನಡುವೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ವಿಚಿತ್ರ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರು ಪೊಲೀಸ್ ಅಧಿಕಾರಿಗೆ ಥಳಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಭಿಮಾನಿಗಳು ಐಪಿಎಲ್ 2023 ರ ಫೈನಲ್‌ ಆರಂಭ ಆಗಬಹುದು ಎಂದು ಕಾಯುತ್ತಿರುವಾಗ, ಮಹಿಳೆಯೊಬ್ಬರು ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮಾಡಿದ್ದಾರೆ. ಯಾವ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಆದರೆ, ಪುರುಷ ಪೊಲೀಸ್ ಅಧಿಕಾರಿಯನ್ನು ಮಹಿಳಾ ಅಭಿಮಾನಿಯೊಬ್ಬರು ಅವಮಾನಿಸಿದ್ದಾರೆ. ಮಹಿಳೆ ಎಲ್ಲಾ ಪ್ರೇಕ್ಷಕರ ಎದುರೇ ಹಲವಾರು ಬಾರಿ ಅಧಿಕಾರಿಗೆ ಥಳಿಸಿ ಕೆಳಕ್ಕೆ ತಳ್ಳಿ ಬೀಳಿಸಿದ್ದಾರೆ. ಆದರೆ ಅಧಿಕಾರಿ ಅಲ್ಲಿಂದ ಹೆಚ್ಚೇನೂ ಮಾತನಾಡದೇ ತೆರಳಿದ್ದು ಜನರೂ ಸುಮ್ಮನೇ ನೋಡುತ್ತಾ ನಿಂತಿದ್ದರು.

ಇದನ್ನೂ ಓದಿ
Image
WTC Final 2023: ಐಪಿಎಲ್ ಮೀಸಲು ದಿನದಿಂದ ಟೀಮ್ ಇಂಡಿಯಾಕ್ಕೆ ಹೊಡೆತ: ಗಿಲ್, ಶಮಿ, ಜಡೇಜಾ ಭಾರತದಲ್ಲೇ ಬಾಕಿ
Image
CSK vs GT Head to Head: ಚೆನ್ನೈ-ಗುಜರಾತ್ ಪೈಕಿ ಯಾರು ಬಲಿಷ್ಠ?: ಇಂದು ಯಾರಿಗೆ ಗೆಲುವು?
Image
IPL Final Reserve Day: ಇಂದು ಮೀಸಲು ದಿನ ಕೂಡ ಮಳೆ ಬಂದರೆ ಏನಾಗಲಿದೆ ಫೈನಲ್?: ಚಾಂಪಿಯನ್ ಯಾರು?, ಇಲ್ಲಿದೆ ಮಾಹಿತಿ
Image
CSK vs GT, IPL 2023 Rain: ರಣಭೀಕರ ಮಳೆಗೆ ತತ್ತರಿಸಿದ ನರೇಂದ್ರ ಮೋದಿ ಸ್ಟೇಡಿಯಂ: ಇಂದುಕೂಡ ಫೈನಲ್ ಅನುಮಾನ

ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಅನೇಕರು ಕಮೆಂಟ್ ಮಾಡಿದ್ದಾರೆ. ಪೊಲೀಸ್ ಅಧಿಕಾರಿ ಮದ್ಯ ಸೇವನೆ ಮಾಡಿರಬಹುದು. ಈ ಕಾರಣಕ್ಕೆ ಮಹಿಳೆ ಥಳಿಸಿದ್ದಾರೆ ಎಂದು ಕೆಲವು ಹೇಳಿದ್ದಾರೆ. ಅಲ್ಲದೇ ಘಟನೆ ಸಂಬಂಧ ಹೆಚ್ಚಿನ ತನಿಖೆಯಾಗಬೇಕೆಂದು ಅನೇಕರು ಒತ್ತಾಯಿಸುತ್ತಿದ್ದಾರೆ.

IPL 2023 Final: ಐಪಿಎಲ್ ಫೈನಲ್ ಫಿಕ್ಸ್? CSK ರನ್ನರ್ ಅಪ್..?

ಇಂದು ನಡೆಯಲಿದೆ ಫೈನಲ್ ಪಂದ್ಯ:

ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಐಪಿಎಲ್ 2023 ಫೈನಲ್ ಪಂದ್ಯ ಮಳೆಗೆ ಕೊಚ್ಚಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ರಣಭೀಕರ ಮಳೆಗೆ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ. ಹೀಗಾಗಿ ಮೀಸಲು ದಿನವಾದ ಇಂದು ಅಂತಿಮ ಕಾದಾಟ ನಡೆಯಲಿದೆ. ವಿಶೇಷ ಎಂದರೆ 16 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಫೈನಲ್ ಪಂದ್ಯ ಮೀಸಲು ದಿನದಂದು ನಡೆಯುತ್ತಿರುವುದು ಇದೇ ಪ್ರಥಮ ಬಾರಿ.

ಇದರ ನಡುವೆ ಬೇಸರದ ಸಂಗತಿ ಎಂದರೆ ಮೀಸಲು ದಿನವಾದ ಇಂದುಕೂಡ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಮವಾರ ಸಂಜೆ ವೇಳೆಗೆ ಮಳೆ ಸುರಿಯಲಿದೆಯಂತೆ. ದಿನಪೂರ್ತಿ ಮೋಡ ಕವಿದ ವಾತಾವರಣ ಇರುತ್ತದೆ ಎಂದು ವರದಿ ಹೇಳಿದೆ. ದೇಶದ ಪ್ರಸ್ತುತ ಹವಾಮಾನ ವರದಿ ಗಮನಿಸಿದರೆ, ಯಾವುದೇ ಸಮಯದಲ್ಲಿ ಮಳೆಯಾಗಬಹುದು. ಒಂದು ವೇಳೆ ಇಂದಿನ ಪಂದ್ಯ ಕೂಡ ಮಳೆಯಿಂದ ಕೊಚ್ಚಿ ಹೋದರೆ ಲೀಗ್ ಹಂತದ ಪಾಯಿಂಟ್ಸ್ ಟೇಬಲ್​ ಮೂಲಕ ಚಾಂಪಿಯನ್ ತಂಡವನ್ನು ನಿರ್ಧರಿಸಲಾಗುತ್ತದೆ. ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿರುವ ಗುಜರಾತ್ ತಂಡ ಚಾಂಪಿಯನ್ ಪಟ್ಟಕ್ಕೇರಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ