Asia Cup 2022: ಥಾಯ್ಲೆಂಡ್ ವಿರುದ್ಧ 6 ಓವರ್​ಗಳಲ್ಲಿ ಪಂದ್ಯ ಮುಗಿಸಿದ ಟೀಮ್ ಇಂಡಿಯಾ

India vs Thailand: ವಿಶೇಷ ಎಂದರೆ ಈ ಬಾರಿ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ಧ ಸೋಲನುಭವಿಸಿತು. ಅದೇ ಪಾಕಿಸ್ತಾನ್ ತಂಡವು ಥಾಯ್ಲೆಂಡ್ ವಿರುದ್ಧ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿತ್ತು.

Asia Cup 2022: ಥಾಯ್ಲೆಂಡ್ ವಿರುದ್ಧ 6 ಓವರ್​ಗಳಲ್ಲಿ ಪಂದ್ಯ ಮುಗಿಸಿದ ಟೀಮ್ ಇಂಡಿಯಾ
Team India Womens
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 10, 2022 | 3:38 PM

ಮಹಿಳಾ ಏಷ್ಯಾಕಪ್​ನ 19ನೇ ಪಂದ್ಯದಲ್ಲಿ ಥಾಯ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಸೆಮಿಫೈನಲ್​ಗೇರುವುರನ್ನು ಭಾರತೀಯ ವನಿತೆಯರು ಖಚಿತಪಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಹಂಗಾಮಿ ನಾಯಕಿ ಸ್ಮೃತಿ ಮಂಧನಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಥಾಯ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಮೂರನೇ ಓವರ್​ನಲ್ಲಿ 6 ರನ್​ಗಳಿಸಿದ್ದ ಸ್ಟಾರ್ ಆಟಗಾರ್ತಿ ನತ್ತಕಾನ್ ಚಂತಮ್ ಅವರ ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾ ಬೌಲರ್ ದೀಪ್ತಿ ಶರ್ಮಾ ಶುಭಾರಂಭ ಮಾಡಿದ್ದರು.

ಇದರ ಬೆನ್ನಲ್ಲೇ ನಾಯಕಿ ಚೈವಾಯಿ (3) ರನೌಟ್ ಆದರು. ಈ ಹಂತದಲ್ಲಿ ದಾಳಿಗಿಳಿದ ಸ್ನೇಹಾ ರಾಣಾ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು. ಪರಿಣಾಮ 24 ರನ್​ಗಳಿಸುವಷ್ಟರಲ್ಲಿ ಥಾಯ್ಲೆಂಡ್ ತಂಡವು ಪ್ರಮುಖ 6 ವಿಕೆಟ್ ಕಳೆದುಕೊಂಡಿತು. ಆ ಬಳಿಕ ರಾಜೇಶ್ವರಿ ಗಾಯಕ್ವಾಡ್ 2 ವಿಕೆಟ್ ಕಬಳಿಸಿದರೆ, ಮೇಘನಾ ಸಿಂಗ್ 1 ವಿಕೆಟ್ ಪಡೆದರು.

ಇದನ್ನೂ ಓದಿ
Image
Anna Rajan: ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಅಂತಿಮವಾಗಿ ಥಾಯ್ಲೆಂಡ್ ತಂಡವು 15.1 ಓವರ್​ಗಳಲ್ಲಿ ಕೇವಲ 37 ರನ್​ಗಳಿಗೆ ಸರ್ವಪತನ ಕಂಡಿತು. ಟೀಮ್ ಇಂಡಿಯಾ ಪರ ಸ್ನೇಹಾ ರಾಣಾ 4 ಓವರ್​ಗಳಲ್ಲಿ 9 ರನ್​ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದರು.

38 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ 3ನೇ ಓವರ್​ನಲ್ಲಿ ಸ್ಪೋಟಕ ಆಟಗಾರ್ತಿ ಶಫಾಲಿ ವರ್ಯಾ (8) ಕಳೆದುಕೊಂಡಿತು. ಇದಾಗ್ಯೂ ಪವರ್​ಪ್ಲೇನಲ್ಲಿ 40 ರನ್​ ಬಾರಿಸುವ ಮೂಲಕ ಭಾರತ ವನಿತೆಯರು 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ವಿಶೇಷ ಎಂದರೆ ಈ ಬಾರಿ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ಧ ಸೋಲನುಭವಿಸಿತು. ಅದೇ ಪಾಕಿಸ್ತಾನ್ ತಂಡವು ಥಾಯ್ಲೆಂಡ್ ವಿರುದ್ಧ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಇದೀಗ ಪಾಕ್ ತಂಡವನ್ನು ಮಣಿಸಿದ ಥಾಯ್ಲೆಂಡ್​ ಅನ್ನು ಸುಲಭವಾಗಿ ಸೋಲಿಸಿ ಟೀಮ್ ಇಂಡಿಯಾ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಈ ಗೆಲುವಿನೊಂದಿಗೆ ಏಷ್ಯಾಕಪ್​ ಸೆಮಿಫೈನಲ್ ಆಡುವುದನ್ನು ಖಚಿತಪಡಿಸಿಕೊಂಡಿದೆ.

ಭಾರತ ಪ್ಲೇಯಿಂಗ್ ಇಲೆವೆನ್: ಶಫಾಲಿ ವರ್ಮಾ , ಸ್ಮೃತಿ ಮಂಧನಾ (ನಾಯಕಿ) , ಸಬ್ಬಿನೇನಿ ಮೇಘನಾ , ಜೆಮಿಮಾ ರೊಡ್ರಿಗಸ್ , ರಿಚಾ ಘೋಷ್ ( ವಿಕೆಟ್ ಕೀಪರ್ ) , ಕಿರಣ್ ನವಗಿರೆ , ದೀಪ್ತಿ ಶರ್ಮಾ , ಪೂಜಾ ವಸ್ತ್ರಾಕರ್ , ಸ್ನೇಹ ರಾಣಾ , ಮೇಘನಾ ಸಿಂಗ್ , ರಾಜೇಶ್ವರಿ ಗಾಯಕ್ವಾಡ್

ಥಾಯ್ಲೆಂಡ್ ಪ್ಲೇಯಿಂಗ್ ಇಲೆವೆನ್: ನನ್ನಪತ್ ಕೊಂಚರೊಯೆಂಕೈ, ನತ್ತಕನ್ ಚಂತಮ್ , ನರುಯೆಮೊಲ್ ಚೈವಾಯಿ (ನಾಯಕಿ) , ಸೊರ್ನರಿನ್ ಟಿಪ್ಪೊಚ್ , ಚನಿಡಾ ಸುತ್ತಿರುಯಾಂಗ್ , ರೋಸೆನನ್ ಕಾನೊಹ್ , ಫನ್ನಿತಾ ಮಾಯಾ , ನಟ್ಟಾಯ ಬೂಚತಮ್ , ಒನ್ನಿಚಾ ಕಮ್ಚೊಂಫು , ತಿಪಟಚಾ ನನ್ತಿ ಬೂತವಾಂಗ್ಸ್

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ