Women’s Asia Cup 2024: ಏಷ್ಯಾಕಪ್‌ನಲ್ಲಿ ಮುಂದುವರೆದ ಭಾರತದ ಅಜೇಯ ಓಟ; ಸತತ 2ನೇ ಜಯ
Women' Asia Cup 2024: ಶ್ರೀಲಂಕಾದ ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮಹಿಳೆಯರ ಟಿ20 ಏಷ್ಯಾಕಪ್ನ 5ನೇ ಪಂದ್ಯದಲ್ಲಿ ಯುಎಇ ಮಹಿಳಾ ತಂಡವನ್ನು 78 ರನ್ಗಳಿಂದ ಮಣಿಸಿದ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.
ಶ್ರೀಲಂಕಾದ ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮಹಿಳೆಯರ ಟಿ20 ಏಷ್ಯಾಕಪ್ನ 5ನೇ ಪಂದ್ಯದಲ್ಲಿ ಯುಎಇ ಮಹಿಳಾ ತಂಡವನ್ನು 78 ರನ್ಗಳಿಂದ ಮಣಿಸಿದ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ದಾಖಲೆಯ 201 ರನ್ ಕಲೆಹಾಕಿತು. ಈ ದಾಖಲೆ ಮೊತ್ತದ ಗುರಿ ಬೆನ್ನಟ್ಟಿದ ಯುಎಇ ತಂಡ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಳ್ಳುತ್ತಾ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 123 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಭಾರತದ ಪರ ಬ್ಯಾಟಿಂಗ್ನಲ್ಲಿ ಮಿಂಚಿದ ನಾಯಕಿ ಹರ್ಮನ್‌ಪ್ರೀತ್ ಕೌರ್ ಹಾಗೂ ರಿಚಾ ಘೋಷ್ ತಲಾ ಅರ್ಧಶತಕ ಸಿಡಿಸಿದರೆ, ಬೌಲಿಂಗ್ನಲ್ಲಿ ತಂಡದಿಂದ ಸಾಂಘಿಕ ಪ್ರದರ್ಶನ ಕಂಡು ಬಂತು. ಭಾರತದ ಪರ ಬೌಲಿಂಗ್ ಮಾಡಿದ ಎಲ್ಲಾ ಐವರು ಬೌಲರ್ಗಳು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಯುಎಇಗೆ 78 ರನ್ ಸೋಲು
ಭಾರತ ನೀಡಿದ 202 ರನ್‌ಗಳ ಗುರಿ ಬೆನ್ನಟ್ಟಿದ ಯುಎಇ ತಂಡದ ಯಾವ ಬ್ಯಾಟರ್ಗೂ ಬಿಗ್ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಇಡೀ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 123 ರನ್ ಗಳಿಸಲಷ್ಟೇ ಶಕ್ತವಾಯಿತು. ಕವಿಶ ಆಗೋಡೆಗೆ ತಂಡದ ಪರ ಹೆಚ್ಚಿನ ರನ್ ಗಳಿಸಿದರು. ಅವರು 32 ಎಸೆತಗಳಲ್ಲಿ 40 ರನ್‌ಗಳ ಇನಿಂಗ್ಸ್ ಆಡಿದರು. ಇವರನ್ನು ಹೊರತುಪಡಿಸಿ ನಾಯಕಿ ಇಶಾ ರೋಹಿತ್ ಓಜಾ 36 ಎಸೆತಗಳಲ್ಲಿ 38 ರನ್ ಗಳಿಸಿ ಇನ್ನಿಂಗ್ಸ್ ಆಡಿದರು. ಟೀಂ ಇಂಡಿಯಾ ಪರ ದೀಪ್ತಿ ಶರ್ಮಾ ಅತ್ಯಧಿಕ ಎರಡು ವಿಕೆಟ್ ಪಡೆದರು. ಇವರಲ್ಲದೆ ರೇಣುಕಾ ಠಾಕೂರ್ ಸಿಂಗ್, ತನುಜಾ ಕನ್ವರ್, ಪೂಜಾ ವಸ್ತ್ರಾಕರ್, ರಾಧಾ ಯಾದವ್ ತಲಾ ಒಂದು ವಿಕೆಟ್ ಪಡೆದರು.
2⃣ wins in 2⃣ Matches 🙌
Another clinical performance, another comprehensive victory for #TeamIndia as they beat the United Arab Emirates by 78 runs 👌
Scorecard ▶️ https://t.co/fnyeHav1sS#WomensAsiaCup2024 | #ACC | #INDvUAE
📸 ACC pic.twitter.com/NaKha21O7m
— BCCI Women (@BCCIWomen) July 21, 2024
ಪವರ್ ಪ್ಲೇನಲ್ಲಿ ಸಮಬಲದ ಹೋರಾಟ
ಈ ಪಂದ್ಯದಲ್ಲಿ ಯುಎಇ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಕ್ಕೆ ಸ್ಫೋಟಕ ಆರಂಭ ಸಿಕ್ಕಿತು. ತಂಡ ಪವರ್ ಪ್ಲೇನಲ್ಲೇ ಮೊದಲ 3 ವಿಕೆಟ್ ಕಳೆದುಕೊಂಡು 52 ರನ್ ಗಳಿಸಿತ್ತು. ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ 13, ಶಫಾಲಿ ವರ್ಮಾ 37 ಮತ್ತು ಹೇಮಲತಾ 2 ರನ್ ಗಳಿಸಿ ಔಟಾದರು. ಹೀಗಾಗಿ ಟೀಂ ಇಂಡಿಯಾ 5.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 52 ರನ್ ಕಲೆಹಾಕಿತು. ಆ ಬಳಿಕ ಜೊತೆಯಾದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಜೆಮಿಮಾ ರಾಡ್ರಿಗಸ್ ನಾಲ್ಕನೇ ವಿಕೆಟ್‌ಗೆ 54 ರನ್‌ಗಳ ಜೊತೆಯಾಟ ನೀಡಿದರು. ನಂತರ ಜೆಮಿಮಾ 13 ಎಸೆತಗಳಲ್ಲಿ 14 ರನ್ ಗಳಿಸಿ ಔಟಾದರು.
Innings Break!
Fifties from Captain @ImHarmanpreet & @13richaghosh power #TeamIndia to 201/5 in 20 overs
Over to our bowlers 💪
Scorecard ▶️ https://t.co/fnyeHavziq#WomensAsiaCup2024 | #ACC | #INDvUAE pic.twitter.com/mRVUMxa91j
— BCCI Women (@BCCIWomen) July 21, 2024
ಹರ್ಮನ್- ರಿಚಾ ಅರ್ಧಶತಕ
ಇದಾದ ಬಳಿಕ ಹರ್ಮನ್‌ಪ್ರೀತ್ ಮತ್ತು ರಿಚಾ ಘೋಷ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಇಬ್ಬರೂ ಅರ್ಧಶತಕ ಬಾರಿಸಿದರು. ಆದರೆ ಹರ್ಮನ್‌ಪ್ರೀತ್ 20ನೇ ಓವರ್‌ನ ಮೊದಲ ಎಸೆತದಲ್ಲಿ ರನೌಟ್ ಆದರು. ಅಂತಿಮವಾಗಿ ಹರ್ಮನ್‌ಪ್ರೀತ್ 47 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 66 ರನ್ ಬಾರಿಸಿದರೆ, ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ರಿಚಾ ಘೋಷ್ 29 ಎಸೆತಗಳಲ್ಲಿ 12 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅಜೇಯ 64 ರನ್ ಸಿಡಿಸಿದರು. ಈ ಇಬ್ಬರ ಆಟದಿಂದಾಗಿ ಟೀಂ ಇಂಡಿಯಾ 200ರ ಗಡಿ ದಾಟಿತು. ಯುಎಇ ಪರ ಕವಿಶ ಎಗೋಡಗೆ 2 ವಿಕೆಟ್ ಪಡೆದರೆ, ಸಮೈರಾ ಧರಣೀಧಾರಿಕಾ ಮತ್ತು ಹೀನಾ ಹೊಚ್ಚಂದನಿ ತಲಾ 1 ವಿಕೆಟ್ ಪಡೆದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:18 pm, Sun, 21 July 24