Women’s Asia Cup 2024: ಹರ್ಮನ್- ರಿಚಾ ಸಿಡಿಲಬ್ಬರ; ಇತಿಹಾಸ ಸೃಷ್ಟಿಸಿದ ಭಾರತ ವನಿತಾ ಪಡೆ
Women' Asia Cup 2024: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹರ್ಮನ್‌ಪ್ರೀತ್ ಕೌರ್ ಪಡೆ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ದಾಖಲೆಯ 201 ರನ್ ಕಲೆಹಾಕಿತು. ಇದು ಮಹಿಳಾ ಅಂತರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಟೀಂ ಇಂಡಿಯಾ ಕಲೆಹಾಕಿದ ಅತಿ ದೊಡ್ಡ ಮೊತ್ತವಾಗಿದೆ. ಅಲ್ಲದೆ ಮಹಿಳಾ ಏಷ್ಯಾಕಪ್‌ನಲ್ಲೂ ಮೊದಲ ಬಾರಿಗೆ ದ್ವಿಶತಕದ ಗಡಿ ದಾಟಿದ ದಾಖಲೆಯನ್ನು ಟೀಂ ಇಂಡಿಯಾ ಸೃಷ್ಟಿಸಿದೆ.
ಶ್ರೀಲಂಕಾದಲ್ಲಿ ನಡೆಯುತ್ತಿರುವ ಮಹಿಳೆಯರ ಟಿ20 ಏಷ್ಯಾಕಪ್‌ನಲ್ಲಿ ಭಾರತ ವನಿತಾ ಪಡೆ ಇಂದು ತನ್ನ ಎರಡನೇ ಪಂದ್ಯವನ್ನು ಆಡುತ್ತಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 7 ವಿಕೆಟ್ಗಳಿಂದ ಮಣಿಸಿದ್ದ ಟೀಂ ಇಂಡಿಯಾ, ಇದೀಗ ಎರಡನೇ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹರ್ಮನ್‌ಪ್ರೀತ್ ಕೌರ್ ಪಡೆ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ದಾಖಲೆಯ 201 ರನ್ ಕಲೆಹಾಕಿತು. ಇದು ಮಹಿಳಾ ಅಂತರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಟೀಂ ಇಂಡಿಯಾ ಕಲೆಹಾಕಿದ ಅತಿ ದೊಡ್ಡ ಮೊತ್ತವಾಗಿದೆ. ಅಲ್ಲದೆ ಮಹಿಳಾ ಏಷ್ಯಾಕಪ್‌ನಲ್ಲೂ ಮೊದಲ ಬಾರಿಗೆ ದ್ವಿಶತಕದ ಗಡಿ ದಾಟಿದ ದಾಖಲೆಯನ್ನು ಟೀಂ ಇಂಡಿಯಾ ಸೃಷ್ಟಿಸಿದೆ.
ಬೃಹತ್ ಮೊತ್ತ ಕಲೆಹಾಕಿದ ಭಾರತ
ಈ ಪಂದ್ಯಕ್ಕೂ ಮುನ್ನ ಅಂತರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಟೀಂ ಇಂಡಿಯಾದ ಅತ್ಯಧಿಕ ಮೊತ್ತ 4 ವಿಕೆಟ್ಗಳಿಗೆ 198 ರನ್ ಆಗಿತ್ತು. ಈ ಮೊತ್ತವನ್ನು ಭಾರತ, ಇಂಗ್ಲೆಂಡ್ ವಿರುದ್ಧ 2018 ರಲ್ಲಿ ಕಲೆಹಾಕಿತ್ತು. ಇದೀಗ ದ್ವಿಶತಕ ಬಾರಿಸಿರುವ ಭಾರತ ತನ್ನ ಹಳೆಯ ದಾಖಲೆಯನ್ನು ಪುಡಿಗಟ್ಟಿದೆ. ಇವೆರಡರ ಹೊರತಾಗಿ, ಆಸ್ಟ್ರೇಲಿಯಾ ವಿರುದ್ಧ 2018 ರಲ್ಲಿ 5 ವಿಕೆಟ್ ಕಳೆದುಕೊಂಡು 194 ರನ್ ಕಲೆಹಾಕಿದ್ದು, ಭಾರತದ ಮೂರನೇ ಅತಿದೊಡ್ಡ ಮೊತ್ತವಾಗಿದೆ.
A historic total 🔥
India crossed the 200-run mark for the first time in Women's T20Is during their outing against UAE in the Asia Cup 👏#INDvUAE pic.twitter.com/51TVoL7V4q
— ICC (@ICC) July 21, 2024
ಭಾರತಕ್ಕೆ ಸ್ಫೋಟಕ ಆರಂಭ
ಇನ್ನು ಇಂದಿನ ಪಂದ್ಯದ ಬಗ್ಗೆ ಹೇಳುವುದಾದರೆ.. ಈ ಪಂದ್ಯದಲ್ಲಿ ಯುಎಇ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಕ್ಕೆ ಸ್ಫೋಟಕ ಆರಂಭ ಸಿಕ್ಕಿತು. ತಂಡ ಪವರ್ ಪ್ಲೇನಲ್ಲೇ ಮೊದಲ 3 ವಿಕೆಟ್ ಕಳೆದುಕೊಂಡು 52 ರನ್ ಗಳಿಸಿತ್ತು. ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ 13, ಶಫಾಲಿ ವರ್ಮಾ 37 ಮತ್ತು ಹೇಮಲತಾ 2 ರನ್ ಗಳಿಸಿ ಔಟಾದರು. ಹೀಗಾಗಿ ಟೀಂ ಇಂಡಿಯಾ 5.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 52 ರನ್ ಕಲೆಹಾಕಿತು. ಆ ಬಳಿಕ ಜೊತೆಯಾದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಜೆಮಿಮಾ ರಾಡ್ರಿಗಸ್ ನಾಲ್ಕನೇ ವಿಕೆಟ್‌ಗೆ 54 ರನ್‌ಗಳ ಜೊತೆಯಾಟ ನೀಡಿದರು. ನಂತರ ಜೆಮಿಮಾ 13 ಎಸೆತಗಳಲ್ಲಿ 14 ರನ್ ಗಳಿಸಿ ಔಟಾದರು.
Innings Break!
Fifties from Captain @ImHarmanpreet & @13richaghosh power #TeamIndia to 201/5 in 20 overs
Over to our bowlers 💪
Scorecard ▶️ https://t.co/fnyeHavziq#WomensAsiaCup2024 | #ACC | #INDvUAE pic.twitter.com/mRVUMxa91j
— BCCI Women (@BCCIWomen) July 21, 2024
ಹರ್ಮನ್- ರಿಚಾ ಅರ್ಧಶತಕ
ಇದಾದ ಬಳಿಕ ಹರ್ಮನ್‌ಪ್ರೀತ್ ಮತ್ತು ರಿಚಾ ಘೋಷ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಇಬ್ಬರೂ ಅರ್ಧಶತಕ ಬಾರಿಸಿದರು. ಆದರೆ ಹರ್ಮನ್‌ಪ್ರೀತ್ 20ನೇ ಓವರ್‌ನ ಮೊದಲ ಎಸೆತದಲ್ಲಿ ರನೌಟ್ ಆದರು. ಅಂತಿಮವಾಗಿ ಹರ್ಮನ್‌ಪ್ರೀತ್ 47 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 66 ರನ್ ಬಾರಿಸಿದರೆ, ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ರಿಚಾ ಘೋಷ್ 29 ಎಸೆತಗಳಲ್ಲಿ 12 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅಜೇಯ 64 ರನ್ ಸಿಡಿಸಿದರು. ಈ ಇಬ್ಬರ ಆಟದಿಂದಾಗಿ ಟೀಂ ಇಂಡಿಯಾ 200ರ ಗಡಿ ದಾಟಿತು. ಯುಎಇ ಪರ ಕವಿಶ ಎಗೋಡಗೆ 2 ವಿಕೆಟ್ ಪಡೆದರೆ, ಸಮೈರಾ ಧರಣೀಧಾರಿಕಾ ಮತ್ತು ಹೀನಾ ಹೊಚ್ಚಂದನಿ ತಲಾ 1 ವಿಕೆಟ್ ಪಡೆದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:47 pm, Sun, 21 July 24