Asia Cup 2024: 2 ದಿನಗಳಲ್ಲಿ ಏಷ್ಯಾಕಪ್ ಆರಂಭ; ಯಾವ ಚಾನೆಲ್‌ನಲ್ಲಿ ಪಂದ್ಯಾವಳಿಯ ಉಚಿತ ಪ್ರಸಾರ?
Asia Cup 2024: 2012ರಿಂದ ಟಿ20 ಮಾದರಿಯಲ್ಲಿ ನಡೆಯುತ್ತಿರುವ ಈ ಪಂದ್ಯಾವಳಿಯಲ್ಲಿ ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಜುಲೈ 26 ರಂದು ನಡೆಯಲಿರುವ ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ. ಜುಲೈ 28 ರಂದು ಫೈನಲ್ ಪಂದ್ಯ ನಡೆಯಲಿದೆ. ಪಾಕಿಸ್ತಾನ ವಿರುದ್ಧ ಆಡಿದ ನಂತರ ಭಾರತವು ಜುಲೈ 21 ರಂದು ಯುಎಇ ಮತ್ತು ಜುಲೈ 23 ರಂದು ನೇಪಾಳವನ್ನು ಎದುರಿಸಲಿದೆ.
ಜುಲೈ 19ರಿಂದ ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳಾ ಏಷ್ಯಾಕಪ್‌ಗೆ ಭಾರತ ಮಹಿಳಾ ತಂಡ ಸಂಪೂರ್ಣ ಸಜ್ಜಾಗಿದೆ. ಭಾರತ ಈ ಟೂರ್ನಿಯಲ್ಲಿ ಅತ್ಯಂತ ಯಶಸ್ವಿ ತಂಡವಾಗಿದ್ದು, ಏಳು ಬಾರಿ ಪ್ರಶಸ್ತಿ ಗೆದ್ದಿದೆ. ಹಾಲಿ ಚಾಂಪಿಯನ್ ಭಾರತ ತಂಡ ತನ್ನ ಪಾರಮ್ಯವನ್ನು ಕಾಯ್ದುಕೊಳ್ಳುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿದ್ದು, ತನ್ನ ಮೊದಲ ಪಂದ್ಯವನ್ನು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಡಂಬುಲ್ಲಾದಲ್ಲಿ ಆಡಲಿದೆ. ಈ ಟೂರ್ನಿಯಲ್ಲಿ ಎಂಟು ತಂಡಗಳು ಭಾಗವಹಿಸಲಿವೆ. ಕಳೆದ ಬಾರಿಗಿಂತ ಭಿನ್ನವಾಗಿ ಈ ವರ್ಷ ಎಂಟು ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತ, ಪಾಕಿಸ್ತಾನ, ಯುಎಇ ಮತ್ತು ನೇಪಾಳ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದರೆ, ಶ್ರೀಲಂಕಾ, ಬಾಂಗ್ಲಾದೇಶ, ಥಾಯ್ಲೆಂಡ್ ಮತ್ತು ಮಲೇಷ್ಯಾ ಬಿ ಗುಂಪಿನಲ್ಲಿವೆ.
2012ರಿಂದ ಟಿ20 ಮಾದರಿಯಲ್ಲಿ ನಡೆಯುತ್ತಿರುವ ಈ ಪಂದ್ಯಾವಳಿಯಲ್ಲಿ ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಜುಲೈ 26 ರಂದು ನಡೆಯಲಿರುವ ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ. ಜುಲೈ 28 ರಂದು ಫೈನಲ್ ಪಂದ್ಯ ನಡೆಯಲಿದೆ. ಎಂದಿನಂತೆ ಪಂದ್ಯಾವಳಿಯಲ್ಲಿ ಪಂದ್ಯದ ಅಧಿಕಾರಿಗಳಾಗಿ ಮಹಿಳೆಯರು ಕಾಣಿಸಿಕೊಳ್ಳಲಿದ್ದಾರೆ. ಪಾಕಿಸ್ತಾನ ವಿರುದ್ಧ ಆಡಿದ ನಂತರ ಭಾರತವು ಜುಲೈ 21 ರಂದು ಯುಎಇ ಮತ್ತು ಜುಲೈ 23 ರಂದು ನೇಪಾಳವನ್ನು ಎದುರಿಸಲಿದೆ.
ಶ್ರೀಲಂಕಾ ತಲುಪಿದ ಭಾರತ ತಂಡ
ಈ ಟೂರ್ನಿಯಲ್ಲಿ ಭಾಗವಹಿಸಲು ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಮಂಗಳವಾರ ಶ್ರೀಲಂಕಾ ತಲುಪಿದೆ. ಅಕ್ಟೋಬರ್‌ನಲ್ಲಿ ಬಾಂಗ್ಲಾದೇಶದಲ್ಲಿ ನಡೆಯಲಿರುವ ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಈ ಪಂದ್ಯಾವಳಿ ಮಹತ್ವದ್ದಾಗಿದೆ. ಶ್ರೀಲಂಕಾ ಕ್ರಿಕೆಟ್ ಈ ಪಂದ್ಯಾವಳಿಗೆ ಪ್ರೇಕ್ಷಕರಿಗೆ ಕ್ರೀಡಾಂಗಣಕ್ಕೆ ಉಚಿತ ಪ್ರವೇಶ ಕಲ್ಪಿಸಿದೆ. ಎಲ್ಲಾ ಪಂದ್ಯಗಳು ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿವೆ.
ಏಷ್ಯಾಕಪ್‌ಗೆ ಭಾರತ ತಂಡ ಇಂತಿದೆ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಛೆಟ್ರಿ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಾಂಕ ಪಾಟೀಲ್ ಮತ್ತು ಸಜ್ನಾ ಸಜೀವನ್.
ಮೀಸಲು ಆಟಗಾರ್ತಿಯರು: ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್ ಮತ್ತು ಮೇಘನಾ ಸಿಂಗ್.
ನೇರಪ್ರಸಾರದ ವಿವರ ಇಂತಿದೆ
ಪಂದ್ಯವನ್ನು ಯಾವ ಟಿವಿ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ?
ಮಹಿಳೆಯರ ಏಷ್ಯಾಕಪ್ ಪ್ರಸಾರ ಮಾಡುವ ಹಕ್ಕನ್ನು ಸ್ಟಾರ್ ಸ್ಪೋರ್ಟ್ಸ್ ಹೊಂದಿದೆ. ಸ್ಟಾರ್ ಸ್ಪೋರ್ಟ್ಸ್ನ ವಿವಿದ ಚಾನೆಲ್ಗಳಲ್ಲಿ ವೀಕ್ಷಿಸಬಹುದಾಗಿದೆ.
ಫೋನ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ಲೈವ್ ಪಂದ್ಯವನ್ನು ವೀಕ್ಷಿಸುವುದು ಹೇಗೆ?
ಈ ಪಂದ್ಯದ ಲೈವ್-ಸ್ಟ್ರೀಮಿಂಗ್ ಅನ್ನು ಭಾರತದಲ್ಲಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ನೋಡಬಹುದು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ