AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜೇಯ ತಂಡವಾಗಿ ಏಷ್ಯಾಕಪ್ ಫೈನಲ್​ಗೇರಿದ ಟೀಂ ಇಂಡಿಯಾ

2026ರ ಮಹಿಳಾ ಟಿ20 ಏಷ್ಯಾಕಪ್ ಸೆಮಿಫೈನಲ್‌ನಲ್ಲಿ ಭಾರತ ಮಹಿಳಾ ತಂಡವು ಬಾಂಗ್ಲಾದೇಶವನ್ನು ಸುಲಭವಾಗಿ ಸೋಲಿಸಿ ಅಜೇಯವಾಗಿ ಫೈನಲ್‌ಗೆ ಪ್ರವೇಶಿಸಿದೆ. ದುಬೈನಲ್ಲಿ ನಡೆದ ಪಂದ್ಯದಲ್ಲಿ ಶಫಾಲಿ ವರ್ಮಾ 64 ರನ್ ಗಳಿಸಿ ಮಿಂಚಿದರೆ, ದೀಪ್ತಿ ಶರ್ಮಾ 3 ವಿಕೆಟ್ ಪಡೆದು ಬೌಲಿಂಗ್‌ನಲ್ಲಿ ಪ್ರಬಲ ಪ್ರದರ್ಶನ ನೀಡಿದರು. 149 ರನ್‌ಗಳ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ಭಾರತದ ಬೌಲಿಂಗ್ ಮುಂದೆ ಶರಣಾಯಿತು.

ಅಜೇಯ ತಂಡವಾಗಿ ಏಷ್ಯಾಕಪ್ ಫೈನಲ್​ಗೇರಿದ ಟೀಂ ಇಂಡಿಯಾ
ಭಾರತ ಮಹಿಳಾ ತಂಡ
ಪೃಥ್ವಿಶಂಕರ
|

Updated on:Sep 10, 2026 | 11:12 PM

Share

2026 ರ ಮಹಿಳಾ ಟಿ20 ಏಷ್ಯಾಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಿದ್ದ ಟೀಂ ಇಂಡಿಯಾ ಸುಲಭ ಗೆಲುವು ದಾಖಲಿಸುವ ಮೂಲಕ ಅಜೇಯ ತಂಡವಾಗಿ ಫೈನಲ್​ಗೆ ಪ್ರವೇಶಿಸಿದೆ. ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಮಹಿಳಾ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ಗಳನ್ನು ಕಳೆದುಕೊಂಡು 149 ರನ್ ಕಲೆಹಾಕಿತು. ತಂಡದ ಪರ ಶಫಾಲಿ ವರ್ಮಾ 64 ರನ್​ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದರು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ, ಟೀಂ ಇಂಡಿಯಾದ ಬೌಲಿಂಗ್ ಮುಂದೆ ಸಂಪೂರ್ಣವಾಗಿ ಶರಣಾಗಿ 20 ಓವರ್​ಗಳಲ್ಲಿ 109 ರನ್ ಬಾರಿಸಲಷ್ಟೇ ಶಕ್ತವಾಗಿ 40 ರನ್​ಗಳಿಂದ ಸೋಲೊಪ್ಪಿಕೊಂಡಿತು.

64 ರನ್ ಬಾರಿಸಿದ ಶಫಾಲಿ

ಮೊದಲು ಬ್ಯಾಟಿಂಗ್‌ ಮಾಡಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಸ್ಮೃತಿ ಮಂಧಾನ ಕೇವಲ 2 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಆದರೆ ಬರೋಬ್ಬರಿ 4 ಜೀವದಾನಗಳ ಲಾಭ ಪಡೆದ ಶಫಾಲಿ ವರ್ಮಾ 40 ಎಸೆತಗಳಲ್ಲಿ 64 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿದ್ದವು. 160.00 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ ಶೆಫಾಲಿ ತಂಡವನ್ನು ಶತಕದ ಸನಿಹಕ್ಕೆ ತಂದರು. ಶೆಫಾಲಿ ಜೊತೆ ಪ್ರತಿಕಾ ರಾವಲ್ ಕೂಡ 24 ಎಸೆತಗಳಲ್ಲಿ 20 ರನ್​ಗಳ ಕಾಣಿಕೆ ನೀಡಿದರು. ನಂತರ ರಿಚಾ ಘೋಷ್ 16 ಎಸೆತಗಳಲ್ಲಿ ಎರಡು ಸಿಕ್ಸರ್ ಸೇರಿದಂತೆ 21 ರನ್ ಬಾರಿಸಿದರೆ, ದೀಪ್ತಿ ಶರ್ಮಾ 6 ಎಸೆತಗಳಲ್ಲಿ 13 ರನ್ ಕಲೆಹಾಕಿದರು.

ತಾಳ್ಮೆಯ ಇನ್ನಿಂಗ್ಸ್ ಕಟ್ಟಿದ ನಾಯಕಿ

ನಾಯಕಿ ಹರ್ಮನ್‌ಪ್ರೀತ್ ಕೌರ್ 28 ಎಸೆತಗಳಲ್ಲಿ 2 ಸಿಕ್ಸರ್‌ಗಳೊಂದಿಗೆ 24 ರನ್ ಗಳಿಸಿ ಅಜೇಯರಾಗುಳಿದರು. ಭಾರತಿ ಫುಲ್ಮಾಲಿ ಒಂದೇ ಎಸೆತಕ್ಕೆ ಔಟಾದರು. ಇತ್ತ ಬಾಂಗ್ಲಾದೇಶ ಪರ ಸುಲ್ತಾನಾ ಖಾತುನ್ 3 ಓವರ್‌ಗಳಲ್ಲಿ 30 ರನ್‌ಗಳಿಗೆ ಎರಡು ವಿಕೆಟ್‌ಗಳನ್ನು ಪಡೆದರೆ, ಮರುಫಾ ಅಖ್ತರ್ 4 ಓವರ್‌ಗಳಲ್ಲಿ 40 ರನ್‌ಗಳಿಗೆ ಒಂದು ವಿಕೆಟ್, ನಹಿದಾ ಅಖ್ತರ್ 4 ಓವರ್‌ಗಳಲ್ಲಿ 25 ರನ್‌ಗಳಿಗೆ ಒಂದು ವಿಕೆಟ್ ಮತ್ತು ರಬೇಯಾ ಖಾನ್ 4 ಓವರ್‌ಗಳಲ್ಲಿ 22 ರನ್‌ಗಳಿಗೆ ಒಂದು ವಿಕೆಟ್ ಪಡೆದರು.

3 ವಿಕೆಟ್ ಕಬಳಿಸಿದ ದೀಪ್ತಿ

150 ರನ್​ಗಳ ಗುರಿ ಬೆನ್ನಟ್ಟಿದ ಬಾಂಗ್ಲಾದೇಶಕ್ಕೂ ಉತ್ತಮ ಆರಂಭ ಸಿಗಲಿಲ್ಲ. ಜುವೈರಿಯಾ ಫಿರ್ದೋಸ್ 14 ರನ್​ಗಳಿಗೆ ಸುಸ್ತಾದರೆ, 1 ಜೀವದಾನದ ಹೊರತಾಗಿಯೂ ದಿಲಾರಾ ಅಖ್ತರ್ 21 ರನ್ ಬಾರಿಸಲಷ್ಟೇ ಶಕ್ತರಾದರು. ಸೋಭಾನಾ ಮೊಸ್ತರಿ 18 ರನ್​​ಗೆ ವಿಕೆಟ್ ಒಪ್ಪಿಸಿದರೆ, ನಾಯಕಿ ನಿಗರ್ ಸುಲ್ತಾನಾ ಅವರ ಇನ್ನಿಂಗ್ಸ್ ಕೂಡ 19 ರನ್​ಗಳಿಗೆ ಅಂತ್ಯವಾಯಿತು. ಬಾಂಗ್ಲಾ ತಂಡದ ಅಗ್ರ ಐವರು ಆಟಗಾರ್ತಿಯರು ಎರಡಂಕಿ ಮೊತ್ತ ದಾಟಿದರಾದರೂ ಅದನ್ನು ದೊಡ್ಡ ಮೊತ್ತವನ್ನಾಗಿ ಪರಿವರ್ತಿಸುವಲ್ಲಿ ಎಡವಿದರು. ಇದರ ಪರಿಣಾಮವಾಗಿ ಟೀಂ ಇಂಡಿಯಾಕ್ಕೆ ಗೆಲುವು ಧಕ್ಕಿತು. ಭಾರತದ ಪರ ದೀಪ್ತಿ ಶರ್ಮಾ ಅತ್ಯಧಿಕ 3 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:09 pm, Thu, 10 September 26

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!