AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ 2ನೇ ಪಂದ್ಯ; ಎದುರಾಳಿ ಯಾರು? ಪಂದ್ಯ ಎಷ್ಟು ಗಂಟೆಗೆ ಆರಂಭ?

Women's T20 World Cup 2026: 2026ರ ಮಹಿಳಾ T20 ವಿಶ್ವಕಪ್‌ನಲ್ಲಿ ಭಾರತ ಹಾಗೂ ನೆದರ್ಲ್ಯಾಂಡ್ಸ್ ಮಹಿಳಾ ತಂಡಗಳು ಜೂನ್ 17ರಂದು ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ಮುಖಾಮುಖಿಯಾಗುತ್ತಿವೆ. ಭಾರತ ಪಾಕಿಸ್ತಾನದ ವಿರುದ್ಧ ಗೆದ್ದು ಶುಭಾರಂಭ ಮಾಡಿದ್ದರೆ, ನೆದರ್ಲ್ಯಾಂಡ್ಸ್ ಬಾಂಗ್ಲಾದೇಶದ ವಿರುದ್ಧ ಸೋತು ಗೆಲುವಿನ ನಿರೀಕ್ಷೆಯಲ್ಲಿದೆ. ಈ ನಿರ್ಣಾಯಕ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಉಭಯ ತಂಡಗಳ ಬಲಾಬಲ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ 2ನೇ ಪಂದ್ಯ; ಎದುರಾಳಿ ಯಾರು? ಪಂದ್ಯ ಎಷ್ಟು ಗಂಟೆಗೆ ಆರಂಭ?
India Women
ಪೃಥ್ವಿಶಂಕರ
|

Updated on:Jun 16, 2026 | 9:36 PM

Share

2026 ರ ಮಹಿಳಾ ಟಿ20 ವಿಶ್ವಕಪ್‌ನ (Women’s T20 World Cup 2026) 10ನೇ ಪಂದ್ಯದಲ್ಲಿ ಭಾರತ ಹಾಗೂ ನೆದರ್ಲ್ಯಾಂಡ್ಸ್ (India vs Netherlands) ಮಹಿಳಾ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಲೀಗ್​ನಲ್ಲಿ ಎರಡು ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ಭಾರತ ತಂಡ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಿತ್ತು. ಹೀಗಾಗಿ ಹರ್ಮನ್‌ಪ್ರೀತ್ ಪಡೆ ಭಾರತ ತನ್ನ ಗೆಲುವಿನ ಓಟವನ್ನು ಮುಂದುವರಿಸಲು ಎದುರು ನೋಡುತ್ತಿದೆ. ಏತನ್ಮಧ್ಯೆ, ಬಾಂಗ್ಲಾದೇಶ ವಿರುದ್ಧದ ಸೋಲಿನಿಂದ ಹೊರಬಂದಿರುವ ನೆದರ್ಲ್ಯಾಂಡ್ಸ್, ತನ್ನ ಗೆಲುವಿನ ಖಾತೆಯನ್ನು ತೆರೆಯುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿದೆ.

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ?

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಜೂನ್ 17 ರ ಬುಧವಾರದಂದು ನಡೆಯಲಿದೆ.

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ?

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆಯಲಿದೆ.

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 6:30ಕ್ಕೆ ನಡೆಯಲಿದೆ.

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯವನ್ನು ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.

IND vs PAK: ವಿಶ್ವಕಪ್​ ಅಂಗಳದಲ್ಲೂ ಕೈಕುಲುಕದ ಉಭಯ ನಾಯಕಿಯರು

ಉಭಯ ತಂಡಗಳು

ನೆದರ್ಲ್ಯಾಂಡ್ಸ್ ಮಹಿಳಾ ತಂಡ: ಬಾಬೆಟ್ ಡಿ ಲೀಡೆ (ನಾಯಕ), ಕ್ಯಾರೊಲಿನ್ ಡಿ ಲ್ಯಾಂಗೆ, ಫ್ರೆಡೆರಿಕ್ ಓವರ್‌ಡಿಜ್ಕ್, ಹನ್ನಾ ಲ್ಯಾಂಡ್‌ಹೀರ್, ಹೀದರ್ ಸೆಗರ್ಸ್, ಐರಿಸ್ ಜ್ವಿಲ್ಲಿಂಗ್, ಇಸಾಬೆಲ್ಲೆ ವ್ಯಾನ್ ಡೆರ್ ವೊನಿಂಗ್, ಲಾರಾ ಲೀಮ್‌ಹುಯಿಸ್, ಮಿರ್ತೆ ವ್ಯಾನ್ ಡೆನ್ ರಾಡ್, ಫೆಬೆ ಮೊಲ್ಕೆನ್‌ಬೋರ್, ರಾಬಿನ್ ರಿಜ್ಕೆರ್ಯಾ, ರೊಸಾಲಿ ಕ್ವೆರೆನಾ, ರೊಸಾಲೀ ಕ್ವೆರ್ರೆನಾ ಕಾಲಿಸ್.

ಭಾರತೀಯ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್, ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ, ನಂದನಿ ಶರ್ಮಾ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್, ಕ್ರಾಂತಿ ಗೌಡ್, ಶ್ರೇಯಾಂಕ ಪಾಟೀಲ್, ರಾಧಾ ಯಾದವ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:36 pm, Tue, 16 June 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ
ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ