
2026 ರ ಮಹಿಳಾ ಟಿ20 ವಿಶ್ವಕಪ್‌ನ (Women’s T20 World Cup 2026) 10ನೇ ಪಂದ್ಯದಲ್ಲಿ ಭಾರತ ಹಾಗೂ ನೆದರ್ಲ್ಯಾಂಡ್ಸ್ (India vs Netherlands) ಮಹಿಳಾ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಲೀಗ್ನಲ್ಲಿ ಎರಡು ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ಭಾರತ ತಂಡ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಿತ್ತು. ಹೀಗಾಗಿ ಹರ್ಮನ್‌ಪ್ರೀತ್ ಪಡೆ ಭಾರತ ತನ್ನ ಗೆಲುವಿನ ಓಟವನ್ನು ಮುಂದುವರಿಸಲು ಎದುರು ನೋಡುತ್ತಿದೆ. ಏತನ್ಮಧ್ಯೆ, ಬಾಂಗ್ಲಾದೇಶ ವಿರುದ್ಧದ ಸೋಲಿನಿಂದ ಹೊರಬಂದಿರುವ ನೆದರ್ಲ್ಯಾಂಡ್ಸ್, ತನ್ನ ಗೆಲುವಿನ ಖಾತೆಯನ್ನು ತೆರೆಯುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿದೆ.
ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಜೂನ್ 17 ರ ಬುಧವಾರದಂದು ನಡೆಯಲಿದೆ.
ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆಯಲಿದೆ.
ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 6:30ಕ್ಕೆ ನಡೆಯಲಿದೆ.
ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯವನ್ನು ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.
IND vs PAK: ವಿಶ್ವಕಪ್ ಅಂಗಳದಲ್ಲೂ ಕೈಕುಲುಕದ ಉಭಯ ನಾಯಕಿಯರು
ನೆದರ್ಲ್ಯಾಂಡ್ಸ್ ಮಹಿಳಾ ತಂಡ: ಬಾಬೆಟ್ ಡಿ ಲೀಡೆ (ನಾಯಕ), ಕ್ಯಾರೊಲಿನ್ ಡಿ ಲ್ಯಾಂಗೆ, ಫ್ರೆಡೆರಿಕ್ ಓವರ್‌ಡಿಜ್ಕ್, ಹನ್ನಾ ಲ್ಯಾಂಡ್‌ಹೀರ್, ಹೀದರ್ ಸೆಗರ್ಸ್, ಐರಿಸ್ ಜ್ವಿಲ್ಲಿಂಗ್, ಇಸಾಬೆಲ್ಲೆ ವ್ಯಾನ್ ಡೆರ್ ವೊನಿಂಗ್, ಲಾರಾ ಲೀಮ್‌ಹುಯಿಸ್, ಮಿರ್ತೆ ವ್ಯಾನ್ ಡೆನ್ ರಾಡ್, ಫೆಬೆ ಮೊಲ್ಕೆನ್‌ಬೋರ್, ರಾಬಿನ್ ರಿಜ್ಕೆರ್ಯಾ, ರೊಸಾಲಿ ಕ್ವೆರೆನಾ, ರೊಸಾಲೀ ಕ್ವೆರ್ರೆನಾ ಕಾಲಿಸ್.
ಭಾರತೀಯ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್, ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ, ನಂದನಿ ಶರ್ಮಾ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್, ಕ್ರಾಂತಿ ಗೌಡ್, ಶ್ರೇಯಾಂಕ ಪಾಟೀಲ್, ರಾಧಾ ಯಾದವ್.
Published On - 9:36 pm, Tue, 16 June 26