AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND W vs SA W: ಮಹಿಳಾ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾಕ್ಕೆ ಮೊದಲ ಸೋಲು

Women's T20 World Cup 2026: 2026ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ ಓಲ್ಡ್ ಟ್ರಾಫರ್ಡ್‌ನಲ್ಲಿ ತನ್ನ ಮೊದಲ ಸೋಲನುಭವಿಸಿತು. ಉತ್ತಮ ಆರಂಭ ಪಡೆದರೂ, ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಮಾಡಿದ ತಪ್ಪುಗಳಿಂದ ಟೀಂ ಇಂಡಿಯಾ ಸೋಲಿಗೆ ಶರಣಾಯಿತು. ನಿರ್ಣಾಯಕ ಮರಿಜಾನ್ನೆ ಕಪ್ ಕ್ಯಾಚ್ ಕೈಚೆಲ್ಲಿದ್ದು ಸೋಲಿಗೆ ಪ್ರಮುಖ ಕಾರಣವಾಯಿತು. ಇದು ಭಾರತಕ್ಕೆ ಈ ಟೂರ್ನಿಯಲ್ಲಿ ಮೊದಲ ಹಿನ್ನಡೆಯಾಗಿದ್ದು, ಆಫ್ರಿಕಾಕ್ಕೆ ಸತತ ಎರಡನೇ ಗೆಲುವು ತಂದಿದೆ.

IND W vs SA W: ಮಹಿಳಾ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾಕ್ಕೆ ಮೊದಲ ಸೋಲು
Ind W Vs Sa W
ಪೃಥ್ವಿಶಂಕರ
|

Updated on:Jun 21, 2026 | 10:55 PM

Share

ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್​ನ (Women’s T20 World Cup 2026) 18ನೇ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್‌ ಹಾಗೂ ಬೌಲಿಂಗ್​ನಲ್ಲಿ ಉತ್ತಮ ಆರಂಭ ಪಡೆಯಿತ್ತಾದರೂ ಆ ಬಳಿಕ ತಾನು ಮಾಡಿದ ತಪ್ಪುಗಳಿಂದಲೇ ಸೋಲಿಗೆ ಶರಣಾಯಿತು. ಮೊದಲಿಗೆ ಬ್ಯಾಟಿಂಗ್​ನಲ್ಲಿ ಸಿಕ್ಕ ಉತ್ತಮ ಆರಂಭವನ್ನು ಬಳಸಿಕೊಳ್ಳುವಲ್ಲಿ ಎಡವಿದ ಭಾರತ, ಆ ಬಳಿಕ ಬೌಲಿಂಗ್​ನಲ್ಲೂ ಸಿಕ್ಕ ಆರಂಭವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಎಡವಿತು. ಅದರಲ್ಲೂ ದಕ್ಷಿಣ ಆಫ್ರಿಕಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಮರಿಜಾನ್ನೆ ಕಪ್ ಅವರ ಸುಲಭ ಕ್ಯಾಚ್ ಕೈಚೆಲ್ಲುವ ಮೂಲಕ ಟೀಂ ಇಂಡಿಯಾ ಸೋಲಿಗೆ ನೇರ ಆಹ್ವಾನ ನೀಡಿತು. ಇದು ಈ ಪಂದ್ಯಾವಳಿಯಲ್ಲಿ ಭಾರತದ ಮೊದಲ ಸೋಲಾಗಿದ್ದು, ಇತ್ತ ಆಫ್ರಿಕಾ ತಂಡಕ್ಕೆ ಸತತ ಎರಡನೇ ಗೆಲುವಾಗಿದೆ.

ಎಡವಿದ ಬ್ಯಾಟಿಂಗ್ ವಿಭಾಗ

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾಕ್ಕೆ ಉತ್ತಮ ಆರಂಭವೇ ಸಿಕ್ಕಿತು. ಸ್ಮೃತಿ ಹಾಗೂ ಶಫಾಲಿ ಮೊದಲ 3 ಓವರ್​ಗಳಲ್ಲಿ 30 ರನ್ ಕಲೆಹಾಕಿದರು. ಆದರೆ 3ನೇ ಓವರ್​ನ ಕೊನೆಯ ಎಸೆತದಲ್ಲಿ ಬೇಡದ ಶಾಟ್ ಆಡುವ ಯತ್ನದಲ್ಲಿ ಸ್ಮೃತಿ ವಿಕೆಟ್ ಕೈಚೆಲ್ಲಿದರು. ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿರುವ ಮೂರನೇ ಕ್ರಮಾಂಕದಲ್ಲಿ ಬಂದ ಯಾಸ್ತಿಕಾ ಭಾಟಿಯಾ ಅವರ ಆಟ ಕೂಡ ಅಷ್ಟಕಷ್ಟೆ. ಇತ್ತ ಎಂದಿನಂತೆ ಹೊಡಿಬಡಿ ಆಟ ಮುಂದುವರೆಸಿದ ಶಫಾಲಿ ಕೂಡ 31 ರನ್ ಬಾರಿಸಿ ಬೇಡದ ಶಾಟ್ ಆಡಿ ವಿಕೆಟ್‌ ಉಡುಗೊರೆ ನೀಡಿದರು.

ಆರಂಭಿಕರ ವಿಕೆಟ್ ಪತನದ ಎಂದಿನಂತೆ ತಂಡದ ಬ್ಯಾಟಿಂಗ್‌ ವಿಭಾಗ ಪೆವಿಲಿಯನ್ ಪರೇಡ್ ಶುರು ಮಾಡಿತು. ಈ ಪಂದ್ಯಾವಳಿಯಲ್ಲಿ ಇದುವರೆಗೆ ಲಯಕಂಡುಕೊಳ್ಳದ ಜೆಮಿಮಾ ಕೇವಲ 12 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಐತಿಹಾಸಿಕ 200ನೇ ಟಿ20 ಪಂದ್ಯವನ್ನಾಡಿದ ನಾಯಕಿ ಹರ್ಮನ್‌ಪ್ರೀತ್ ಅವರ ಇನ್ನಿಂಗ್ಸ್ ಕೂಡ 24 ರನ್​ಗಳಿಗೆ ಅಂತ್ಯವಾಯಿತು. ಕೊಂಚ ಹೋರಾಟ ತೋರಿದ ದೀಪ್ತ 29 ರನ್​ಗಳಿಗೆ ಸುಸ್ತಾದರೆ, ರಿಚಾ ಘೋಷ್ 15 ರನ್​ಗಳಿಗೆ ಪೆವಿಲಿಯನ್ ದಾರಿ ಹಿಡಿದರು. ಬ್ಯಾಟಿಂಗ್‌ ವಿಭಾಗದಲ್ಲಿ ಎಲ್ಲರೂ ಉತ್ತಮ ಆರಂಭ ಪಡೆದರಾದರೂ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಬದಲಿಸುವುಲ್ಲಿ ಎಡವಿದರು. ಹೀಗಾಗಿ ಟೀಂ ಇಂಡಿಯಾ ಕೇವಲ 158 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಆರಂಭದಲ್ಲಿ ಭಾರತಕ್ಕೆ ಮೇಲುಗೈ

ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವನ್ನು ಪವರ್​ಪ್ಲೇನಲ್ಲೇ ಟೀಂ ಇಂಡಿಯಾದ ಸ್ಪಿನ್ನರ್​ಗಳು ಸಂಪೂರ್ಣವಾಗಿ ಕಟ್ಟಿಹಾಕಿದರು. ತಂಡದ ಮೊದಲೆರಡು ವಿಕೆಟ್​ಗಳು ಕೇವಲ 25 ರನ್​ಗಳಿಗೆ ಉರುಳಿದವು. ಹೀಗಾಗಿ ಆಫ್ರಿಕಾ ತಂಡ ಮೊದಲ 6 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 26 ರನ್. ಆದರೆ ಅಲ್ಲಿಂದ ಜೊತೆಯಾದ ಕಪ್ ಹಾಗೂ ಬ್ರಿಟ್ಸ್ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದರು. ಆರಂಭದಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿದ ಟೀಂ ಇಂಡಿಯಾದ ಬೌಲಿಂಗ್ ವಿಭಾಗ ಆ ನಂತರ ಹಳಿ ತಪ್ಪಿತು. ಅದರಲ್ಲೂ ತಂಡದ ಅನುಭವಿ ಸ್ಪಿನ್ನರ್ ದೀಪ್ತಿ ಶರ್ಮಾ ಸರಾಗವಾಗಿ ರನ್ ನೀಡಿದ್ದು, ಆಫ್ರಿಕಾದ ಒತ್ತಡವನ್ನು ಕಡಿಮೆ ಮಾಡಿತು.

ಟಿ20 ವಿಶ್ವಕಪ್​ನಿಂದ ಹೊರಬಿದ್ದ ಕನ್ನಡತಿ ಶ್ರೇಯಾಂಕ ಪಾಟೀಲ್..!

ಕ್ಯಾಚ್ ಬಿಟ್ಟು ಮ್ಯಾಚ್ ಸೋತ ಭಾರತ

ಇದೇ ಹಂತದಲ್ಲಿ ರಾಧಾ ಯಾದವ್, ಕಪ್ ನೀಡಿದ ಸುಲಭ ಕ್ಯಾಚ್ ಅನ್ನು ಕೈಚೆಲ್ಲಿದರು. ಆ ಸಮಯದಲ್ಲಿ ಕಪ್ ಅರ್ಧಶತಕವನ್ನು ಬಾರಿಸಿರಲಿಲ್ಲ. ಆದರೆ ಆ ಜೀವದಾನದ ಲಾಭ ಪಡೆದ ಕಪ್ ಕೊನೆಯವರೆಗೂ ಅಜೇಯರಾಗಿ ಉಳಿದು ತಂಡಕ್ಕೆ ಗೆಲುವು ತಂದುಕೊಟ್ಟರು. ಹಾಗೆಯೇ ತಂಡದ ಸೋಲಿನಲ್ಲಿ ನಾಯಕಿ ಹರ್ಮನ್‌ಪ್ರೀತ್ ತೆಗೆದುಕೊಂಡ ನಿರ್ಧಾರಗಳು ಕಾರಣವಾದವು. ಈ ಪಂದ್ಯದಲ್ಲಿ ದೀಪ್ತಿ ದುಬಾರಿಯಾಗಿದ್ದರೂ ಅವರಿಂದ 19ನೇ ಓವರ್ ಬೌಲ್ ಮಾಡಿಸಿದರು. ಈ ಓವರ್​ನಲ್ಲಿ 2 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಕಪ್ ತಂಡದ ಗೆಲುವು ಖಚಿತ ಪಡಿಸಿದರು. ಹಾಗೆಯೇ ಶ್ರೇಯಾಂಕ ಬದಲಿಗೆ ಬಂದ ಪ್ರೇಮಾ ದುಬಾರಿಯಾಗಿದ್ದು ಕೂಡ ತಂಡದ ಸೋಲಿಗೆ ಕಾರಣವಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:34 pm, Sun, 21 June 26

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ