Women’s Asia Cup 2024: ಏಷ್ಯಾಕಪ್​ಗೆ ಟೀಂ ಇಂಡಿಯಾ ಪ್ರಕಟ; ಈ ದಿನದಂದು ಪಾಕ್ ವಿರುದ್ಧ ಫೈಟ್

Women's Asia Cup 2024: ಜುಲೈ 19 ರಿಂದ ಆರಂಭವಾಗಲಿರುವ ಮಹಿಳೆಯರ ಏಷ್ಯಾಕಪ್​ಗೆ 15 ಸದಸ್ಯರ ಭಾರತ ವನಿತಾ ಪಡೆಯನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಈ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಈ ಗುಂಪಿನಲ್ಲಿ ನೇಪಾಳ ಮತ್ತು ಯುಎಇ ತಂಡಗಳು ಸ್ಥಾನ ಪಡೆದಿವೆ. ಜುಲೈ 19 ರಂದು ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.

Women's Asia Cup 2024: ಏಷ್ಯಾಕಪ್​ಗೆ ಟೀಂ ಇಂಡಿಯಾ ಪ್ರಕಟ; ಈ ದಿನದಂದು ಪಾಕ್ ವಿರುದ್ಧ ಫೈಟ್
ಭಾರತ ವನಿತಾ ಪಡೆ
Follow us
ಪೃಥ್ವಿಶಂಕರ
|

Updated on:Jul 06, 2024 | 10:24 PM

ಜುಲೈ 19 ರಿಂದ ಆರಂಭವಾಗಲಿರುವ ಮಹಿಳೆಯರ ಏಷ್ಯಾಕಪ್​ಗೆ 15 ಸದಸ್ಯರ ಭಾರತ ವನಿತಾ ಪಡೆಯನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಪ್ರಸ್ತುತ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯನ್ನು ಆಡುತ್ತಿದ್ದು ಈ ಸರಣಿ ಮುಗಿದ ಬಳಿಕ ಹರ್ಮನ್​ಪ್ರೀತ್​ ಪಡೆ ಏಷ್ಯಾಕಪ್ ಅಖಾಡಕ್ಕೆ ಇಳಿಯಲಿದೆ. ಜುಲೈ 19 ರಿಂದ ಆರಂಭವಾಗಲಿರುವ ಮಹಿಳೆಯರ ಏಷ್ಯಾಕಪ್ ಜುಲೈ 28ರವರೆಗೆ ನಡೆಯಲ್ಲಿದೆ. 8 ತಂಡಗಳ ನಡುವೆ ನಡೆಯಲ್ಲಿರುವ ಟಿ20 ಏಷ್ಯಾಕಪ್ ಪಂದ್ಯಾವಳಿಗೆ ಶ್ರೀಲಂಕಾದ ದಂಬುಲ್ಲಾ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಈ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಈ ಗುಂಪಿನಲ್ಲಿ ನೇಪಾಳ ಮತ್ತು ಯುಎಇ ತಂಡಗಳು ಸ್ಥಾನ ಪಡೆದಿವೆ. ಜುಲೈ 19 ರಂದು ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.

ಏಷ್ಯಾಕಪ್​ಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಛೆಟ್ರಿ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್, ದಯಾಲನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಾಂಕ ಪಾಟೀಲ್ ಮತ್ತು ಸಂಜನಾ ಸಂಜೀವನ್.

ಮೀಸಲು ಆಟಗಾರ್ತಿಯರು: ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್ ಮತ್ತು ಮೇಘನಾ ಸಿಂಗ್.

ಭಾರತ- ಪಾಕ್ ಮುಖಾಮುಖಿ ವರದಿ

ಮೇಲೆ ಹೇಳಿದಂತೆ ಜುಲೈ 19 ರಂದು ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಇನ್ನು  ಮಹಿಳಾ ಟಿ20 ಯಲ್ಲಿ ಉಭಯ ತಂಡಗಳ ಮುಖಾಮುಖಿ ವರದಿಯನ್ನು ನೋಡುವುದಾದರೆ.. ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 14 ಪಂದ್ಯಗಳು ನಡೆದಿವೆ . ಇದರಲ್ಲಿ ಭಾರತ ತಂಡ 11 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ತಂಡ ಕೇವಲ 3 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಏಷ್ಯಾಕಪ್ ಟಿ20ಯಲ್ಲಿ 3 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 2 ಪಂದ್ಯಗಳನ್ನು ಗೆದ್ದಿದೆ.

ಏಷ್ಯಾಕಪ್ 2024 ರ ಮೊದಲ ಪಂದ್ಯ ಯುಎಇ ಮತ್ತು ನೇಪಾಳ ನಡುವೆ ನಡೆಯಲಿದೆ. ಎ ಗುಂಪಿನಲ್ಲಿರುವ ಭಾರತ ಜುಲೈ 21 ರಂದು ಯುಎಇ ಮತ್ತು ನಂತರ ಜುಲೈ 23 ರಂದು ನೇಪಾಳವನ್ನು ಎದುರಿಸಲಿದೆ. ಶ್ರೀಲಂಕಾ, ಬಾಂಗ್ಲಾದೇಶ, ಥಾಯ್ಲೆಂಡ್ ಮತ್ತು ಮಲೇಷ್ಯಾ ಬಿ ಗುಂಪಿನಲ್ಲಿದೆ.

ಕಳೆದ ಬಾರಿ ಪ್ರಶಸ್ತಿ ಗೆದ್ದಿದ್ದ ಭಾರತ

2022 ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಕೊನೆಯ ಏಷ್ಯಾಕಪ್‌ನಲ್ಲಿ ಶ್ರೀಲಂಕಾವನ್ನು ಏಳು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತ ತನ್ನ ಏಳನೇ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಟೂರ್ನಮೆಂಟ್‌ನಲ್ಲಿ ಎಂಟು ತಂಡಗಳು ಭಾಗವಹಿಸಲಿವೆ. ಭಾರತ, ಪಾಕಿಸ್ತಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶದ ಹೊರತಾಗಿ, ಮಹಿಳೆಯರ ಪ್ರೀಮಿಯರ್ ಕಪ್ 2024 ರ ಸೆಮಿ-ಫೈನಲಿಸ್ಟ್‌ಗಳಾದ ಯುಎಇ, ಮಲೇಷ್ಯಾ, ನೇಪಾಳ ಮತ್ತು ಥೈಲ್ಯಾಂಡ್ ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿವೆ. ಮಹಿಳೆಯರ ಏಷ್ಯಾಕಪ್ ನಂತರ, ಮಹಿಳೆಯರ ಟಿ20 ವಿಶ್ವಕಪ್ ಆರಂಭವಾಗಲಿದ್ದು, ಈ ಮಿನಿ ವಿಶ್ವಸಮರ ಬಾಂಗ್ಲಾದೇಶದಲ್ಲಿ ಅಕ್ಟೋಬರ್ 3 ರಿಂದ ಅಕ್ಟೋಬರ್ 20 ರವರೆಗೆ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 pm, Sat, 6 July 24

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ