ಜುಲೈ 19 ರಿಂದ ಆರಂಭವಾಗಲಿರುವ ಮಹಿಳೆಯರ ಏಷ್ಯಾಕಪ್ಗೆ 15 ಸದಸ್ಯರ ಭಾರತ ವನಿತಾ ಪಡೆಯನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಪ್ರಸ್ತುತ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯನ್ನು ಆಡುತ್ತಿದ್ದು ಈ ಸರಣಿ ಮುಗಿದ ಬಳಿಕ ಹರ್ಮನ್‌ಪ್ರೀತ್ ಪಡೆ ಏಷ್ಯಾಕಪ್ ಅಖಾಡಕ್ಕೆ ಇಳಿಯಲಿದೆ. ಜುಲೈ 19 ರಿಂದ ಆರಂಭವಾಗಲಿರುವ ಮಹಿಳೆಯರ ಏಷ್ಯಾಕಪ್ ಜುಲೈ 28ರವರೆಗೆ ನಡೆಯಲ್ಲಿದೆ. 8 ತಂಡಗಳ ನಡುವೆ ನಡೆಯಲ್ಲಿರುವ ಟಿ20 ಏಷ್ಯಾಕಪ್ ಪಂದ್ಯಾವಳಿಗೆ ಶ್ರೀಲಂಕಾದ ದಂಬುಲ್ಲಾ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಈ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಈ ಗುಂಪಿನಲ್ಲಿ ನೇಪಾಳ ಮತ್ತು ಯುಎಇ ತಂಡಗಳು ಸ್ಥಾನ ಪಡೆದಿವೆ. ಜುಲೈ 19 ರಂದು ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.
ಏಷ್ಯಾಕಪ್ಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಛೆಟ್ರಿ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್, ದಯಾಲನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಾಂಕ ಪಾಟೀಲ್ ಮತ್ತು ಸಂಜನಾ ಸಂಜೀವನ್.
ಮೀಸಲು ಆಟಗಾರ್ತಿಯರು: ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್ ಮತ್ತು ಮೇಘನಾ ಸಿಂಗ್.
🚨 NEWS 🚨#TeamIndia (Senior Women) squad for Women’s Asia Cup T20, 2024 announced.
Details 🔽 #WomensAsiaCup2024 | #ACC https://t.co/Jx5QcVVFLd pic.twitter.com/QVf7wOuTvs
— BCCI Women (@BCCIWomen) July 6, 2024
ಮೇಲೆ ಹೇಳಿದಂತೆ ಜುಲೈ 19 ರಂದು ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಇನ್ನು ಮಹಿಳಾ ಟಿ20 ಯಲ್ಲಿ ಉಭಯ ತಂಡಗಳ ಮುಖಾಮುಖಿ ವರದಿಯನ್ನು ನೋಡುವುದಾದರೆ.. ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 14 ಪಂದ್ಯಗಳು ನಡೆದಿವೆ . ಇದರಲ್ಲಿ ಭಾರತ ತಂಡ 11 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ತಂಡ ಕೇವಲ 3 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಏಷ್ಯಾಕಪ್ ಟಿ20ಯಲ್ಲಿ 3 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 2 ಪಂದ್ಯಗಳನ್ನು ಗೆದ್ದಿದೆ.
ಏಷ್ಯಾಕಪ್ 2024 ರ ಮೊದಲ ಪಂದ್ಯ ಯುಎಇ ಮತ್ತು ನೇಪಾಳ ನಡುವೆ ನಡೆಯಲಿದೆ. ಎ ಗುಂಪಿನಲ್ಲಿರುವ ಭಾರತ ಜುಲೈ 21 ರಂದು ಯುಎಇ ಮತ್ತು ನಂತರ ಜುಲೈ 23 ರಂದು ನೇಪಾಳವನ್ನು ಎದುರಿಸಲಿದೆ. ಶ್ರೀಲಂಕಾ, ಬಾಂಗ್ಲಾದೇಶ, ಥಾಯ್ಲೆಂಡ್ ಮತ್ತು ಮಲೇಷ್ಯಾ ಬಿ ಗುಂಪಿನಲ್ಲಿದೆ.
2022 ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಕೊನೆಯ ಏಷ್ಯಾಕಪ್‌ನಲ್ಲಿ ಶ್ರೀಲಂಕಾವನ್ನು ಏಳು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತ ತನ್ನ ಏಳನೇ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಟೂರ್ನಮೆಂಟ್‌ನಲ್ಲಿ ಎಂಟು ತಂಡಗಳು ಭಾಗವಹಿಸಲಿವೆ. ಭಾರತ, ಪಾಕಿಸ್ತಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶದ ಹೊರತಾಗಿ, ಮಹಿಳೆಯರ ಪ್ರೀಮಿಯರ್ ಕಪ್ 2024 ರ ಸೆಮಿ-ಫೈನಲಿಸ್ಟ್‌ಗಳಾದ ಯುಎಇ, ಮಲೇಷ್ಯಾ, ನೇಪಾಳ ಮತ್ತು ಥೈಲ್ಯಾಂಡ್ ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿವೆ. ಮಹಿಳೆಯರ ಏಷ್ಯಾಕಪ್ ನಂತರ, ಮಹಿಳೆಯರ ಟಿ20 ವಿಶ್ವಕಪ್ ಆರಂಭವಾಗಲಿದ್ದು, ಈ ಮಿನಿ ವಿಶ್ವಸಮರ ಬಾಂಗ್ಲಾದೇಶದಲ್ಲಿ ಅಕ್ಟೋಬರ್ 3 ರಿಂದ ಅಕ್ಟೋಬರ್ 20 ರವರೆಗೆ ನಡೆಯಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:22 pm, Sat, 6 July 24