Asia Cup 2024 Final: ಇಂದು ಭಾರತ vs ಶ್ರೀಲಂಕಾ ನಡುವೆ ಫೈನಲ್ ಫೈಟ್
Asia Cup 2024 Final: 2004 ರಲ್ಲಿ ಶುರುವಾದ ಏಷ್ಯಾಕಪ್ನಲ್ಲಿ ಭಾರತ ತಂಡವು 7 ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಇನ್ನು ಒಂದು ಬಾರಿ ಬಾಂಗ್ಲಾದೇಶ್ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಆದರೆ ಶ್ರೀಲಂಕಾ ತಂಡವು ಈವರೆಗೆ ಏಷ್ಯಾಕಪ್ ಗೆದ್ದಿಲ್ಲ. ಹೀಗಾಗಿ ತವರಿನಲ್ಲಿ ನಡೆಯುತ್ತಿರುವ ಈ ಬಾರಿಯ ಟೂರ್ನಿಯ ಮೂಲಕ ಪ್ರಶಸ್ತಿ ಬರ ನೀಗಿಸಿಕೊಳ್ಳುವ ಇರಾದೆಯಲ್ಲಿದೆ ಲಂಕಾದ ಮಹಿಳಾ ಪಡೆ.
ಮಹಿಳಾ ಏಷ್ಯಾಕಪ್ 2024ರ ಫೈನಲ್ ಪಂದ್ಯವು ಇಂದು (ಜುಲೈ 28) ನಡೆಯಲಿದೆ. ದಂಬುಲ್ಲಾದ ರಂಗಿರಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಮೊದಲ ಸೆಮಿಫೈನಲ್ನಲ್ಲಿ ಬಾಂಗ್ಲಾದೇಶ್ ವಿರುದ್ಧ 10 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ಫೈನಲ್ಗೆ ಪ್ರವೇಶಿಸಿದರೆ, ಅತ್ತ ಶ್ರೀಲಂಕಾ ತಂಡವು ಎರಡನೇ ಸೆಮಿಫೈನಲ್ನಲ್ಲಿ ಪಾಕಿಸ್ತಾನ್ ವಿರುದ್ಧ 3 ವಿಕೆಟ್ಗಳ ಗೆಲುವು ದಾಖಲಿಸಿ ಅಂತಿಮ ಹಂತಕ್ಕೇರಿದೆ. ಅದರಂತೆ ಇಂದು ನಡೆಯಲಿರುವ ಪ್ರಶಸ್ತಿ ಸುತ್ತಿನಲ್ಲಿ ಏಷ್ಯಾದ ಬಲಿಷ್ಠ ಮಹಿಳಾ ತಂಡಗಳು ಮುಖಾಮುಖಿಯಾಗಲಿದೆ.
9ನೇ ಫೈನಲ್:
ಮಹಿಳಾ ಏಷ್ಯಾಕಪ್ ಶುರುವಾದಾಗಿಂದ ಭಾರತ ತಂಡವು ಪ್ರತಿ ಬಾರಿ ಫೈನಲ್ ಆಡಿದೆ. ಈ ವೇಳೆ 7 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಇನ್ನು 2018 ರಲ್ಲಿ ಬಾಂಗ್ಲಾದೇಶ್ ವಿರುದ್ಧ ಮುಗ್ಗರಿಸುವ ಮೂಲಕ ಒಂದು ಬಾರಿ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ. ಇದೀಗ 9ನೇ ಬಾರಿಗೆ ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟಿರುವ ಟೀಮ್ ಇಂಡಿಯಾ ಈ ಸಲ ಕೂಡ ಟ್ರೋಫಿ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ.
ಎಷ್ಟು ಗಂಟೆಗೆ ಪಂದ್ಯ ಶುರು?
ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆ 2.30 ಕ್ಕೆ ನಡೆಯಲಿದೆ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಫೈನಲ್ ಪಂದ್ಯದ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ಚಾನೆಲ್ಗಳಲ್ಲಿ ಇರಲಿದೆ. ಹಾಗೆಯೇ ಡಿಸ್ನಿ ಹಾಟ್ ಸ್ಟಾರ್ ಆ್ಯಪ್ ಮೂಲಕ ಕೂಡ ಈ ಪಂದ್ಯವನ್ನು ಲೈವ್ ವೀಕ್ಷಿಸಬಹುದು.
ಉಭಯ ತಂಡಗಳು:
ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ರೇಣುಕಾ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ಸಜನಾ ಸಜೀವನ್, ತನುಜಾ ಕನ್ವರ್.
ಇದನ್ನೂ ಓದಿ: Suryakumar Yadav: ಸೂರ್ಯಕುಮಾರ್ ಯಾದವ್ ಅಬ್ಬರಕ್ಕೆ ಮ್ಯಾಕ್ಸ್ವೆಲ್ ವಿಶ್ವ ದಾಖಲೆ ಉಡೀಸ್
ಶ್ರೀಲಂಕಾ ತಂಡ: ಚಾಮರಿ ಅಥಾಪತ್ತು (ನಾಯಕಿ), ಅನುಷ್ಕಾ ಸಂಜೀವನಿ, ಹರ್ಷಿತಾ ಸಮರವಿಕ್ರಮ, ಹಾಸಿನಿ ಪೆರೇರಾ, ಅಮಾ ಕಾಂಚನಾ, ಉದೇಶಿಕಾ ಪ್ರಬೋದನಿ, ಕಾವ್ಯಾ ಕವಿಂದಿ, ಸುಗಂದಿಕಾ ಕುಮಾರಿ, ಅಚಿನಿ ಕುಲಸೂರಿಯಾ, ಕವೀಶಾ ದಿಲ್ಹಾರಿ, ವಿಶ್ಮಿ ಗುಣರತ್ನೆ, ಶಶಿನಿ, ಶಶಿನಿ ಪ್ರಿಯದರ್ಶನಿ, ಶಶಿನಿ ಪ್ರಿಯದರ್ಶನ್ ಗಿಮ್ಹಾನಿ
Published On - 9:13 am, Sun, 28 July 24