Women’s Asia Cup 2024: ಭಾರತ- ಲಂಕಾ ನಡುವೆ ಏಷ್ಯಾಕಪ್ ಫೈನಲ್; ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ?

|

Updated on: Jul 27, 2024 | 5:28 PM

Women's Asia Cup 2024 Final: ದಾಖಲೆಯ 8ನೇ ಬಾರಿಗೆ ಏಷ್ಯನ್ ಚಾಂಪಿಯನ್ ಆಗುವ ಇರಾದೆಯೊಂದಿಗೆ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಂ ಇಂಡಿಯಾ ಏಷ್ಯಾಕಪ್ ಫೈನಲ್ ಅಖಾಡಕ್ಕಿಳಿಯುತ್ತಿದೆ. ಫೈನಲ್ ಎದುರಾಳಿಯಾಗಿ ಆತಿಥೇಯ ಶ್ರೀಲಂಕಾ ತಂಡ ಇರುವುದರಿಂದ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಕಾಳಗ ನಡೆಯುವುದಂತೂ ಖಚಿತವಾಗಿದೆ.

Womens Asia Cup 2024: ಭಾರತ- ಲಂಕಾ ನಡುವೆ ಏಷ್ಯಾಕಪ್ ಫೈನಲ್; ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ?
ಭಾರತ- ಲಂಕಾ ವನಿತಾ ಪಡೆ
Follow us on

ದಾಖಲೆಯ 8ನೇ ಬಾರಿಗೆ ಏಷ್ಯನ್ ಚಾಂಪಿಯನ್ ಆಗುವ ಇರಾದೆಯೊಂದಿಗೆ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಂ ಇಂಡಿಯಾ ಏಷ್ಯಾಕಪ್ ಫೈನಲ್ ಅಖಾಡಕ್ಕಿಳಿಯುತ್ತಿದೆ. ಫೈನಲ್ ಎದುರಾಳಿಯಾಗಿ ಆತಿಥೇಯ ಶ್ರೀಲಂಕಾ ತಂಡ ಇರುವುದರಿಂದ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಕಾಳಗ ನಡೆಯುವುದಂತೂ ಖಚಿತವಾಗಿದೆ. ಇನ್ನು ಟೂರ್ನಿಯಲ್ಲಿ ಟೀಂ ಇಂಡಿಯಾದ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಇದುವರೆಗೆ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಭಾರತ, ಲೀಗ್ ಹಂತದಲ್ಲಿ ಪಾಕಿಸ್ತಾನವನ್ನು ಏಳು ವಿಕೆಟ್‌ಗಳಿಂದ, ಯುನೈಟೆಡ್ ಅರಬ್ ಎಮಿರೇಟ್ಸ್ ತಂಡವನ್ನು 78 ರನ್‌ಗಳಿಂದ ಮತ್ತು ನೇಪಾಳವನ್ನು 82 ರನ್‌ಗಳಿಂದ ಸೋಲಿಸಿತು. ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶವನ್ನು 10 ವಿಕೆಟ್‌ಗಳಿಂದ ಸೋಲಿಸಿದ್ದ ಹರ್ಮನ್ ಪಡೆ ಅಜೇಯ ತಂಡವಾಗಿ ಫೈನಲ್ ಪ್ರವೇಶಿತ್ತು. ಪ್ರಸ್ತುತ ತಂಡದ ಆಟಗಾರ್ತಿಯರ ಫಾರ್ಮ್​ ನೋಡಿದರೆ, ಈ ಬಾರಿಯೂ ಭಾರತವೇ ಚಾಂಪಿಯನ್ ಆಗುವುದು ಖಚಿತ ಎನ್ನಬಹುದು.

ಲಂಕಾ ಪ್ರದರ್ಶನ ಹೀಗಿದೆ

ಮತ್ತೊಂದೆಡೆ, ಶ್ರೀಲಂಕಾ ತಂಡ ಕೂಡ ಇಲ್ಲಿಯವರೆಗೆ ಅಜೇಯವಾಗಿದೆ. ಪಂದ್ಯಾವಳಿಯಲ್ಲಿ ರನ್‌ಗಳ ವಿಷಯದಲ್ಲಿ ಅತಿ ದೊಡ್ಡ ಗೆಲುವನ್ನೂ ಸಾಧಿಸಿದ ದಾಖಲೆ ನಿರ್ಮಿಸಿದೆ. ಶ್ರೀಲಂಕಾ ಗುಂಪು ಹಂತದಲ್ಲಿ ಮಲೇಷ್ಯಾವನ್ನು 144 ರನ್‌ಗಳಿಂದ ಸೋಲಿಸಿತ್ತು. ಇದುವರೆಗೆ ಶ್ರೀಲಂಕಾ ಪರ ಗರಿಷ್ಠ 243 ರನ್ ಗಳಿಸಿರುವ ನಾಯಕಿ ಚಾಮರಿ ಅಟಪಟ್ಟು ಭಾರತದ ಬೌಲರ್​ಗಳಿಗೆ ದೊಡ್ಡ ತಲೆನೋವಾಗಿದ್ದಾರೆ. ಭಾರತ ಗೆಲುವು ದಾಖಲಿಸಬೇಕಾದರೆ ಆದಷ್ಟು ಬೇಗ ಚಾಮರಿ ಅಟಪಟ್ಟು ವಿಕೆಟ್​ ಪಡೆಯಬೇಕಾಗುತ್ತದೆ.

ಹೆಡ್ ಟು ಹೆಡ್ ರೆಕಾರ್ಡ್

ನಾವು ಭಾರತ ಮತ್ತು ಶ್ರೀಲಂಕಾ ನಡುವಿನ ಮುಖಾಮುಖಿ ದಾಖಲೆಯ ಬಗ್ಗೆ ಮಾತನಾಡಿದರೆ, ಇದರಲ್ಲಿ ಭಾರತ ಮೇಲುಗೈ ಹೊಂದಿದೆ. ಉಭಯ ತಂಡಗಳ ನಡುವೆ ಒಟ್ಟು 24 ಪಂದ್ಯಗಳು ನಡೆದಿದ್ದು, ಅದರಲ್ಲಿ ಭಾರತ 19 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ ನಾಲ್ಕು ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯದ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

ಲೈವ್ ಸ್ಟ್ರೀಮಿಂಗ್ ವಿವರ

ಭಾರತ ಮತ್ತು ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್‌ ಫೈನಲ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್‌ ಫೈನಲ್ ಪಂದ್ಯ ಜುಲೈ 28 ರಂದು ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್‌ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್‌ ಫೈನಲ್ ಪಂದ್ಯ ಶ್ರೀಲಂಕಾದ ದಂಬುಲ್ಲಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಹೈ ವೋಲ್ಟೇಜ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯದ ನೇರ ಪ್ರಸಾರ ಯಾವ ವಾಹಿನಿಯಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್‌ ಫೈನಲ್ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯ ಯಾವ ಅಪ್ಲಿಕೇಶನ್‌ನಲ್ಲಿ ಆನ್‌ಲೈನ್ ಸ್ಟ್ರೀಮಿಂಗ್ ಆಗಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್‌ ಫೈನಲ್ ಪಂದ್ಯದ ಡಿಸ್ನಿ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಆನ್‌ಲೈನ್ ಸ್ಟ್ರೀಮಿಂಗ್ ಆಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ