IND vs PAK: ಭಾರತಕ್ಕೆ ಸುಲಭ ತುತ್ತಾದ ಪಾಕಿಸ್ತಾನ; ಹರ್ಮನ್ ಪಡೆಗೆ ಗೆಲುವಿನ ಶುಭಾರಂಭ
Women’s Asia Cup 2024: ಶ್ರೀಲಂಕಾದ ದಂಬುಲಾದ ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ಏಷ್ಯಾಕಪ್ ಪಂದ್ಯದಲ್ಲಿ ಹರ್ಮನ್ಪ್ರೀತ್ ಕೌರ್ ನಾಯಕತ್ವದ ಟೀಂ ಇಂಡಿಯಾ, ಪಾಕಿಸ್ತಾನವನ್ನು 7 ವಿಕೆಟ್ಗಳಿಂದ ಏಕಪಕ್ಷೀಯವಾಗಿ ಮಣಿಸಿದೆ. ಇದರೊಂದಿಗೆ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.
ಶ್ರೀಲಂಕಾದ ದಂಬುಲಾದ ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ಏಷ್ಯಾಕಪ್ ಪಂದ್ಯದಲ್ಲಿ ಹರ್ಮನ್ಪ್ರೀತ್ ಕೌರ್ ನಾಯಕತ್ವದ ಟೀಂ ಇಂಡಿಯಾ, ಪಾಕಿಸ್ತಾನವನ್ನು 7 ವಿಕೆಟ್ಗಳಿಂದ ಏಕಪಕ್ಷೀಯವಾಗಿ ಮಣಿಸಿದೆ. ಇದರೊಂದಿಗೆ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡ ಪರಿಣಾಮ ಪೂರ್ಣ 20 ಓವರ್ಗಳನ್ನು ಆಡಲು ಸಾಧ್ಯವಾಗದೆ 19.2 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 108 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಆರಂಭಿಕರಿಬ್ಬರ ಸಿಡಿಲಬ್ಬರದ ಬ್ಯಾಟಿಂಗ್ನಿಂದಾಗಿ 14.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.
ಪಾಕ್ ಇನ್ನಿಂಗ್ಸ್ ಹೀಗಿತ್ತು
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 19.2 ಓವರ್‌ಗಳಲ್ಲಿ 10 ವಿಕೆಟ್‌ಗೆ 108 ರನ್ ಗಳಿಸಿತು. ಈ ಪಂದ್ಯದಲ್ಲಿ ಪಾಕಿಸ್ತಾನದ ಬ್ಯಾಟಿಂಗ್ ಕ್ರಮಾಂಕ ಸಂಪೂರ್ಣ ವಿಫಲವಾಯಿತು. ಕೇವಲ ಐದು ರನ್ ಗಳಿಸಿದ ಗುಲ್ ಫಿರೋಜಾ ಅವರ ರೂಪದಲ್ಲಿ ತಂಡಕ್ಕೆ ಮೊದಲ ಹೊಡೆತ ಬಿದ್ದಿತು. ಇದಾದ ಬಳಿಕ ಮುನಿಬಾ ಅಲಿ ಕೂಡ 11 ರನ್ ಗಳಿಸಿ ಔಟಾದರು. ಸಿದ್ರಾ ಅಮೀನ್ ಪಾಕಿಸ್ತಾನದ ಪರ ಗರಿಷ್ಠ 25 ರನ್ ಬಾರಿಸಿದರು. ಅವರ ಇನ್ನಿಂಗ್ಸ್ನಲ್ಲಿ ಮೂರು ಬೌಂಡರಿಗಳು ಸೇರಿದ್ದವು. ಉಳಿದಂತೆ ಅಲಿಯಾ ರಿಯಾಜ್ ಆರು ರನ್, ನಿದಾ ದಾರ್ ಎಂಟು ರನ್, ಇರಾಮ್ ಜಾವೇದ್ ಶೂನ್ಯ, ತುಬಾ ಹಸನ್ 22 ರನ್, ಸೈದಾ ಅರುಬ್ ಶಾ 2 ರನ್, ನಶ್ರಾ ಸಂಧು ಶೂನ್ಯ, ಸಾದಿಯಾ ಇಕ್ಬಾಲ್ ಶೂನ್ಯ ಮತ್ತು ಫಾತಿಮಾ ಸನಾ ( ನಾಟೌಟ್) 22 ರನ್ ಬಾರಿಸಿದರು. ಭಾರತದ ಪರ ದೀಪ್ತಿ ಶರ್ಮಾ ಮೂರು ವಿಕೆಟ್ ಪಡೆದರೆ, ರೇಣುಕಾ, ಪೂಜಾ ಮತ್ತು ಶ್ರೇಯಾಂಕಾ ತಲಾ ಎರಡು ವಿಕೆಟ್ ಪಡೆದರು.
A strong win against Pakistan to start the Women’s Asia Cup T20 2024 for India 👊
📸 @ACCMedia1#INDvPAK: https://t.co/Qd5auhcXGT pic.twitter.com/SUXcUMM6xz
— ICC (@ICC) July 19, 2024
ಸ್ಮೃತಿ-ಶೆಫಾಲಿ ಜೊತೆಯಾಟ
ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ ನಿರೀಕ್ಷೆಯಂತೆ ಉತ್ತಮ ಆರಂಭ ಪಡೆಯಿತು. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ, ಟೆಸ್ಟ್ ಹಾಗೂ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸ್ಮೃತಿ ಮಂಧಾನ ಮತ್ತು ಶೆಫಾಲಿ ವರ್ಮಾ ಜೋಡಿ ಮತ್ತೊಮ್ಮೆ ಅದ್ಭುತ ಜೊತೆಯಾಟ ನಡೆಸಿ ಗೆಲುವನ್ನು ಖಾತ್ರಿಪಡಿಸಿತು. ಇವರಿಬ್ಬರೂ ಮೊದಲ ವಿಕೆಟ್‌ಗೆ 9.3 ಓವರ್‌ಗಳಲ್ಲಿ 85 ರನ್‌ಗಳ ಜೊತೆಯಾಟ ನಡೆಸಿ ಪಾಕಿಸ್ತಾನವನ್ನು ಪಂದ್ಯದಿಂದ ಹೊರಹಾಕಿದರು. ಈ ವೇಳೆ ಸ್ಮೃತಿ ಕೂಡ ಒಂದೇ ಓವರ್‌ನಲ್ಲಿ 5 ಬೌಂಡರಿ ಬಾರಿಸಿದರು. ಆದರೆ, ಅರ್ಧಶತಕ ಪೂರೈಸಲು ಸಾಧ್ಯವಾಗದೆ 45 ರನ್ ಗಳಿಸಿ ಔಟಾದರು. 40 ರನ್‌ಗಳ ಉತ್ತಮ ಇನ್ನಿಂಗ್ಸ್ ಆಡಿದ ಶೆಫಾಲಿ ಕೂಡ ಪೆವಿಲಿಯನ್‌ಗೆ ಮರಳಿದರು. ಅಂತಿಮವಾಗಿ ಟೀಂ ಇಂಡಿಯಾ 14.1 ಓವರ್‌ಗಳಲ್ಲಿ ಗುರಿ ತಲುಪುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:37 pm, Fri, 19 July 24