IND vs PAK: ಭಾರತದ ವಿರುದ್ಧ ಟಾಸ್ ಗೆದ್ದ ಪಾಕ್; ಹೈವೋಲ್ಟೇಜ್ ಪಂದ್ಯಕ್ಕೆ ಪ್ಲೇಯಿಂಗ್ 11 ಹೀಗಿದೆ
Women’s Asia Cup 2024 IND vs PAK: ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಟೂರ್ನಿಯನ್ನು ಆರಂಭಿಸುವ ನಿರೀಕ್ಷೆಯಲ್ಲಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಇದರೊಂದಿಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.
2024 ರ ಮಹಿಳಾ ಏಷ್ಯಾಕಪ್ಗೆ ಇಂದಿನಿಂದ ಚಾಲನೆ ದೊರೆತಿದೆ. ಲೀಗ್ನ ಮೊದಲ ದಿನವೇ ಬದ್ಧವೈರಿಗಳು ಮುಖಾಮುಖಿಯಾಗುತ್ತಿದ್ದಾರೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ವನಿತಾ ಪಡೆ ಪಾಕಿಸ್ತಾನದ ವಿರುದ್ಧದ ಪಂದ್ಯದೊಂದಿಗೆ ತನ್ನ ಅಭಿಯಾನವನ್ನು ಪ್ರಾರಂಭಿಸುತ್ತದೆ. ಎರಡೂ ತಂಡಗಳ ಈ ಹೈವೋಲ್ಟೇಜ್ ಕದನಕ್ಕೆ ದಂಬುಲಾದ ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಟೂರ್ನಿಯನ್ನು ಆರಂಭಿಸುವ ನಿರೀಕ್ಷೆಯಲ್ಲಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಇದರೊಂದಿಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.
ಭಾರತ-ಪಾಕಿಸ್ತಾನ ಮುಖಾಮುಖಿ ದಾಖಲೆ
ಮಹಿಳಾ ಏಷ್ಯಾಕಪ್‌ನ 9 ಆವೃತ್ತಿಗಳು ಇಲ್ಲಿಯವರೆಗೆ ನಡೆದಿವೆ. ಈ ಅವಧಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ 6 ಬಾರಿ ಪಂದ್ಯಗಳು ನಡೆದಿವೆ. ಇದರಲ್ಲಿ ಟೀಂ ಇಂಡಿಯಾ 5 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಕೇವಲ 1 ಪಂದ್ಯ ಮಾತ್ರ ಗೆದ್ದಿದೆ. ಇನ್ನು ಅಂತರಾಷ್ಟ್ರೀಯ ಟಿ20 ಯಲ್ಲಿ ಉಭಯ ತಂಡಗಳ ನಡುವೆ ಇದುವರೆಗೆ 14 ಪಂದ್ಯಗಳು ನಡೆದಿವೆ. ಈ ಪೈಕಿ ಭಾರತ ತಂಡ 11 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ.
ಏಷ್ಯಾಕಪ್‌ನಲ್ಲಿ ಭಾರತದ ಪ್ರಾಬಲ್ಯ
ಮಹಿಳೆಯರ ಏಷ್ಯಾಕಪ್ ನಲ್ಲಿ ಭಾರತ ಆರಂಭದಿಂದಲೂ ಪ್ರಾಬಲ್ಯ ಮೆರೆದಿದೆ. ಟೀಂ ಇಂಡಿಯಾ ತನ್ನ 9 ಆವೃತ್ತಿಗಳಲ್ಲಿ 8 ಬಾರಿ ಚಾಂಪಿಯನ್ ಆಗಿದೆ. 2022ರ ಕೊನೆಯ ಆವೃತ್ತಿಯಲ್ಲೂ ಭಾರತ ತಂಡ ಫೈನಲ್‌ನಲ್ಲಿ ಶ್ರೀಲಂಕಾವನ್ನು ಸೋಲಿಸಿ ಚಾಂಪಿಯನ್ ಆಗಿತ್ತು. ಹೀಗಾಗಿ ಈ ಬಾರಿ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಇರಾದೆಯೊಂದಿಗೆ ಮಹಿಳಾ ಪಡೆ ಕಣಕ್ಕಿಳಿದಿದೆ.
🚨 Toss & Team News 🚨
Pakistan have elected to bat against #TeamIndia.
A look at our Playing XI 🔽
Follow The Match ▶️ https://t.co/30wNRZNiBJ#WomensAsiaCup2024 | #ACC | #INDvPAK pic.twitter.com/yV86Mp7bbW
— BCCI Women (@BCCIWomen) July 19, 2024
ಉಭಯ ತಂಡಗಳು ಹೀಗಿವೆ
ಟೀಂ ಇಂಡಿಯಾ: ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ದಯಾಲನ್ ಹೇಮಲತಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್‌ಕೀಪರ್), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ಶ್ರೇಯಾಂಕ ಪಾಟೀಲ್, ರೇಣುಕಾ ಠಾಕೂರ್.
ಪಾಕಿಸ್ತಾನ ತಂಡ: ಸಿದ್ರಾ ಅಮೀನ್, ಗುಲ್ ಫಿರೋಜಾ, ಮುನಿಬಾ ಅಲಿ (ವಿಕೆಟ್ ಕೀಪರ್), ನಿದಾ ದಾರ್ (ನಾಯಕಿ), ಅಲಿಯಾ ರಿಯಾಜ್, ಇರಾಮ್ ಜಾವೇದ್, ಫಾತಿಮಾ ಸನಾ, ತುಬಾ ಹಸನ್, ಸಾದಿಯಾ ಇಕ್ಬಾಲ್, ನಶ್ರಾ ಸಂಧು, ಸೈಯದಾ ಅರುಬ್ ಶಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:58 pm, Fri, 19 July 24