Asia Cup 2024: ಶ್ರೀಲಂಕಾ ತಲುಪಿದ ಟೀಂ ಇಂಡಿಯಾ; ಮೊದಲ ಎದುರಾಳಿ ಪಾಕಿಸ್ತಾನ
Women’s Asia Cup 2024: ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಚಿತ್ರಗಳಲ್ಲಿ ಭಾರತ ಮತ್ತು ಬಾಂಗ್ಲಾದೇಶದ ಆಟಗಾರರು ಕಾಣಿಸಿಕೊಂಡಿದ್ದಾರೆ. ಕ್ಯಾಪ್ಟನ್ ಹರ್ಮನ್‌ಪ್ರೀತ್ ಕೌರ್, ಶ್ರೇಯಾಂಕಾ ಪಾಟೀಲ್ ಮತ್ತು ಜೆಮಿಮಾ ರೋಡ್ರಿಗಸ್ ವಿಮಾನ ನಿಲ್ದಾಣದಿಂದ ಹೊರಹೊಗುತ್ತಿರುವ ಫೋಟೋಗಳನ್ನು ನಾವು ಕಾಣಬಹುದಾಗಿದೆ.
ಇದೇ ಜುಲೈ 19 ರಿಂದ ಆರಂಭವಾಗಲಿರುವ ಮಹಿಳಾ ಏಷ್ಯಾಕಪ್‌ನಲ್ಲಿ ಭಾಗವಹಿಸಲು 19 ಸದಸ್ಯರ (ಮೀಸಲು ಆಟಗಾರ್ತಿಯರನ್ನು ಸೇರಿಸಿ) ಭಾರತ ವನಿತಾ ಪಡೆ ಸಿಂಹಳೀಯರ ನಾಡಿಗೆ ಕಾಲಿಟ್ಟಿದೆ. ಹರ್ಮನ್‌ಪ್ರೀತ್ ಕೌರ್ ಪಡೆ ಶ್ರೀಲಂಕಾ ತಲುಪಿರುವ ಫೋಟೋಗಳನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿ ತನ್ನ ಸೋಶೀಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ. ಈ ಬಾರಿಯ ಏಷ್ಯಾಕಪ್ ಶ್ರೀಲಂಕಾದಲ್ಲಿ ನಡೆಯುತ್ತಿದ್ದು, ಟೂರ್ನಿಯಲ್ಲಿ ಜುಲೈ 19 ರಂದು ಟೀಂ ಇಂಡಿಯಾ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾ ಬದ್ಧವೈರಿ ಪಾಕಿಸ್ತಾನವನ್ನು ಎದುರಿಸಲಿದೆ.
ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಚಿತ್ರಗಳಲ್ಲಿ ಭಾರತ ಮತ್ತು ಬಾಂಗ್ಲಾದೇಶದ ಆಟಗಾರರು ಕಾಣಿಸಿಕೊಂಡಿದ್ದಾರೆ. ಕ್ಯಾಪ್ಟನ್ ಹರ್ಮನ್‌ಪ್ರೀತ್ ಕೌರ್, ಶ್ರೇಯಾಂಕಾ ಪಾಟೀಲ್ ಮತ್ತು ಜೆಮಿಮಾ ರೋಡ್ರಿಗಸ್ ವಿಮಾನ ನಿಲ್ದಾಣದಿಂದ ಹೊರಹೊಗುತ್ತಿರುವ ಫೋಟೋಗಳನ್ನು ನಾವು ಕಾಣಬಹುದಾಗಿದೆ.
Welcome to Sri Lanka, Team India and Team Bangladesh! 🛬
The stage is set, the teams are ready, and the action is about to begin in Dambulla on July 19th.#WomensAsiaCup #AsiaCup #SriLankaCricket pic.twitter.com/8DoVrfDn4g
— Sri Lanka Cricket 🇱🇰 (@OfficialSLC) July 16, 2024
ಟೀಂ ಇಂಡಿಯಾದ ವೇಳಾಪಟ್ಟಿ
- ಭಾರತ vs ಪಾಕಿಸ್ತಾನ (19 ಜುಲೈ)
- ಭಾರತ vs ಯುಎಇ (21 ಜುಲೈ)
- ಭಾರತ vs ನೇಪಾಳ (23 ಜುಲೈ)
ಎ ಗುಂಪಿನಲ್ಲಿ ಭಾರತ ತಂಡ
2024ರ ಏಷ್ಯಾಕಪ್‌ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಭಾರತ ತಂಡದೊಂದಿಗೆ ಪಾಕಿಸ್ತಾನ, ನೇಪಾಳ ಮತ್ತು ಯುಎಇ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿವೆ. ಉಳಿದಂತೆ, ಬಾಂಗ್ಲಾದೇಶ, ಥಾಯ್ಲೆಂಡ್, ಶ್ರೀಲಂಕಾ ಮತ್ತು ಮಲೇಷ್ಯಾ ತಂಡಗಳು ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ. ಈ ಟೂರ್ನಿಯಲ್ಲಿ ಒಟ್ಟು 15 ಪಂದ್ಯಗಳು ನಡೆಯಲಿವೆ. ಏಷ್ಯಾಕಪ್ 2024 ರ ಫೈನಲ್ ಪಂದ್ಯವು ಜುಲೈ 28 ರಂದು ನಡೆಯಲಿದೆ.
ಏಷ್ಯಾಕಪ್ಗೆ ಭಾರತ ವನಿತಾ ಪಡೆ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.
ಮೀಸಲು ಆಟಗಾರ್ತಿಯರು: ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್, ಮೇಘನಾ ಸಿಂಗ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:13 pm, Wed, 17 July 24