Women’s Asia Cup 2024: ಭಾರತ- ಬಾಂಗ್ಲಾ ಸೆಮೀಸ್ ಕಾಳಗ; ಈ ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ?

Women's Asia Cup 2024: ಮಹಿಳಾ ಏಷ್ಯಾಕಪ್ ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವೆ ಒಟ್ಟು 4 ಪಂದ್ಯಗಳು ನಡೆದಿದ್ದು, ಉಭಯ ತಂಡಗಳು ತಲಾ ಎರಡೆರಡು ಪಂದ್ಯಗಳನ್ನು ಗೆದ್ದಿವೆ. ಈ ಹಿಂದೆ ಬಾಂಗ್ಲಾದೇಶ 2018ರ ಫೈನಲ್ ಪಂದ್ಯದಲ್ಲಿ ಭಾರತವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹೀಗಾಗಿ ಉಭಯ ತಂಡಗಳಿಂದ ಸಮಬಲದ ಹೋರಾಟವನ್ನು ನಿರೀಕ್ಷಿಸಬಹುದಾಗಿದೆ.

Women's Asia Cup 2024: ಭಾರತ- ಬಾಂಗ್ಲಾ ಸೆಮೀಸ್ ಕಾಳಗ; ಈ ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ?
ಭಾರತ- ಬಾಂಗ್ಲಾದೇಶ
Follow us
ಪೃಥ್ವಿಶಂಕರ
|

Updated on:Jul 25, 2024 | 10:44 PM

2024 ರ ಮಹಿಳಾ ಏಷ್ಯಾಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ. ಈ ಟೂರ್ನಿಯ ಹಾಲಿ ಚಾಂಪಿಯನ್ ಆಗಿರುವ ಭಾರತ ತಂಡ ಇದುವರೆಗಿನ ಎಲ್ಲಾ ಪಂದ್ಯಗಳನ್ನು ಗೆದ್ದಿದೆ. ಇತ್ತ ಬಾಂಗ್ಲಾದೇಶ, ಶ್ರೀಲಂಕಾ ವಿರುದ್ಧ ಒಂದು ಪಂದ್ಯದಲ್ಲಿ ಸೋತಿದೆ. ಮಹಿಳಾ ಏಷ್ಯಾಕಪ್ ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವೆ ಒಟ್ಟು 4 ಪಂದ್ಯಗಳು ನಡೆದಿದ್ದು, ಉಭಯ ತಂಡಗಳು ತಲಾ ಎರಡೆರಡು ಪಂದ್ಯಗಳನ್ನು ಗೆದ್ದಿವೆ. ಈ ಹಿಂದೆ ಬಾಂಗ್ಲಾದೇಶ 2018ರ ಫೈನಲ್ ಪಂದ್ಯದಲ್ಲಿ ಭಾರತವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹೀಗಾಗಿ ಉಭಯ ತಂಡಗಳಿಂದ ಸಮಬಲದ ಹೋರಾಟವನ್ನು ನಿರೀಕ್ಷಿಸಬಹುದಾಗಿದೆ.

ಭಾರತ- ಬಾಂಗ್ಲಾದೇಶ ಮುಖಾಮುಖಿ

ಟಿ20ಯಲ್ಲಿ ಉಭಯ ತಂಡಗಳ ನಡುವೆ ಮುಖಾಮುಖಿ ಕುರಿತು ಮಾತನಾಡಿದರೆ ಒಟ್ಟು 13 ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ 11 ಪಂದ್ಯಗಳನ್ನು ಗೆದ್ದಿದ್ದರೆ, ಬಾಂಗ್ಲಾದೇಶ 2 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಇನ್ನು ಉಭಯ ತಂಡಗಳ ಇತ್ತೀಚಿನ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಭಾರತ ತಂಡ ಇದುವರೆಗೆ ಉತ್ತಮ ಪ್ರದರ್ಶನ ನೀಡಿದೆ. ಆದರೆ, ಬಾಂಗ್ಲಾದೇಶವನ್ನು ಹಗುರವಾಗಿ ಪರಿಗಣಿಸುವ ತಪ್ಪನ್ನು ಭಾರತ ಮಾಡುವಂತಿಲ್ಲ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಸೆಮಿಫೈನಲ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಬಾಂಗ್ಲಾದೇಶ ಮಹಿಳಾ ತಂಡಗಳ ನಡುವಿನ ಮೊದಲ ಸೆಮಿಫೈನಲ್ ಪಂದ್ಯ ಶುಕ್ರವಾರ, ಜುಲೈ 26 ರಂದು ನಡೆಯಲಿದೆ.

ಭಾರತ ಮತ್ತು ಬಾಂಗ್ಲಾದೇಶ ಮಹಿಳಾ ತಂಡದ ನಡುವಿನ ಸೆಮಿಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯವು ದಂಬುಲಾದ ರಂಗಿರಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಮಹಿಳೆಯರ ಏಷ್ಯಾ ಕಪ್ 2024 ರ ಮೊದಲ ಸೆಮಿ-ಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ನೀವು ಎಲ್ಲಿ ವೀಕ್ಷಿಸಬಹುದು?

ಮೊದಲ ಸೆಮಿಫೈನಲ್ ಪಂದ್ಯವನ್ನು ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ನೋಡಬಹುದು.

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್‌ಕೀಪರ್), ಉಮಾ ಛೆಟ್ರಿ (ವಿಕೆಟ್‌ಕೀಪರ್), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಕರ್, ಅರುಂಧತಿ ರೆಡ್ಡಿ, ಜೆಮಿಮಾ ರೋಡ್ರಿಗಸ್, ರೇಣುಕಾ ಠಾಕೂರ್, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಾಂಕ ಪಾಟೀಲ್, ಸಜ್ನಾ ಸಜೀವನ್

ಬಾಂಗ್ಲಾದೇಶ ತಂಡ: ನಿಗರ್ ಸುಲ್ತಾನಾ ಜೋತಿ (ನಾಯಕಿ), ಶೋರ್ನಾ ಅಖ್ತರ್, ನಹಿದಾ ಅಖ್ತರ್, ಮುರ್ಷಿದಾ ಖಾತೂನ್, ಶೋರಿಫಾ ಖಾತೂನ್, ರಿತು ಮೋನಿ, ರುಬಿಯಾ ಹೈದರ್ ಜೆಲಿಕ್, ಸುಲ್ತಾನಾ ಖಾತೂನ್, ಜಹನಾರಾ ಆಲಂ, ದಿಲಾರಾ ಅಖ್ತರ್, ಇಷ್ಮಾ ತಂಝಿಮ್, ರಬಿಯಾ ಖಾನ್, ರುಮಾನಾ ಅಹ್ಮದ್, ಸಬಿಕುನ್ ನಹರ್ ಜಾಸ್ಮಿನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:41 pm, Thu, 25 July 24

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು