Women’s Asia Cup 2024: 10 ವಿಕೆಟ್​ಗಳಿಂದ ಗೆದ್ದ ಪಾಕಿಸ್ತಾನ

Women’s Asia Cup 2024: ಟಿ20 ಶ್ರೀಲಂಕಾದ ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮಹಿಳೆಯರ ಟಿ20 ಏಷ್ಯಾಕಪ್​ನ 9ನೇ ಪಂದ್ಯದಲ್ಲಿ ಯುಎಇ ಮಹಿಳಾ ತಂಡವನ್ನು 10 ವಿಕೆಟ್​ಗಳಿಂದ ಮಣಿಸಿದ ಪಾಕಿಸ್ತಾನ ಮಹಿಳಾ ತಂಡ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಟೂರ್ನಿಯಲ್ಲಿ ಇದುವರೆಗೆ ಮೂರು ಪಂದ್ಯಗಳನ್ನು ಆಡಿರುವ ನಿದಾ ದರ್ ಪಡೆ 2 ಗೆಲುವು ಹಾಗೂ 1 ಸೋಲಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

Women’s Asia Cup 2024: 10 ವಿಕೆಟ್​ಗಳಿಂದ ಗೆದ್ದ ಪಾಕಿಸ್ತಾನ
ಪಾಕಿಸ್ತಾನ ಮಹಿಳಾ ತಂಡ
Follow us
ಪೃಥ್ವಿಶಂಕರ
|

Updated on:Jul 23, 2024 | 5:14 PM

ಟಿ20 ಶ್ರೀಲಂಕಾದ ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮಹಿಳೆಯರ ಟಿ20 ಏಷ್ಯಾಕಪ್​ನ 9ನೇ ಪಂದ್ಯದಲ್ಲಿ ಯುಎಇ ಮಹಿಳಾ ತಂಡವನ್ನು 10 ವಿಕೆಟ್​ಗಳಿಂದ ಮಣಿಸಿದ ಪಾಕಿಸ್ತಾನ ಮಹಿಳಾ ತಂಡ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಟೂರ್ನಿಯಲ್ಲಿ ಇದುವರೆಗೆ ಮೂರು ಪಂದ್ಯಗಳನ್ನು ಆಡಿರುವ ನಿದಾ ದರ್ ಪಡೆ 2 ಗೆಲುವು ಹಾಗೂ 1 ಸೋಲಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ 7 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದ ಪಾಕ್ ತಂಡ, ಆ ಬಳಿಕ ಗೆಲುವಿನ ಲಯಕ್ಕೆ ಮರಳಿತ್ತು. ನಂತರ ನಡೆದ ಎರಡನೇ ಪಂದ್ಯದಲ್ಲಿ ನೇಪಾಳ ತಂಡವನ್ನು 9 ವಿಕೆಟ್​ಗಳಿಂದ ಮಣಿಸಿದ್ದ ಪಾಕ್ ಪಡೆ, ಇದೀಗ ತನ್ನ ಮೂರನೇ ಪಂದ್ಯದಲ್ಲಿ ಯುಎಇ ವಿರುದ್ಧ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ತೀರ್ಥ ಸತೀಶ್ ಏಕಾಂಗಿ ಹೋರಾಟ

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಎಇ ತಂಡ ಮೊದಲ ವಿಕೆಟ್​ಗೆ 29 ರನ್​ಗಳ ಜೊತೆಯಾಟ ನೀಡಿತು. ಆದರೆ ಇದಕ್ಕೆ 7 ಓವರ್​ಗಳನ್ನು ತೆಗೆದುಕೊಂಡಿತು. ಆ ಬಳಿಕ ತಂಡದಿಂದ ಯಾವುದೇ ಉತ್ತಮ ಜೊತೆಯಾಟ ಕಂಡುಬರಲಿಲ್ಲ. ನಿಯಮಿತ ಅಂತರದಲ್ಲಿ ತಂಡ ವಿಕೆಟ್ ಕಳೆದುಕೊಳ್ಳುತ ಸಾಗಿತು. ಹೀಗಾಗಿ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 103 ರನ್​ ಕಲೆಹಾಕಲಷ್ಟೇ ಶಕ್ತವಾಯಿತು. ತಂಡದ ಪರ ಏಕಾಂಗಿ ಹೋರಾಟ ನೀಡಿದ ತೀರ್ಥ ಸತೀಶ್, 36 ಎಸೆತಗಳಲ್ಲಿ 5 ಬೌಂಡರಿ ಸಹಿತ 40 ರನ್​ಗಳ ಇನ್ನಿಂಗ್ಸ್ ಆಡಿದರು.

ಎರಡಂಕಿ ಮೊತ್ತ ದಾಖಲಿಸಿದ ಮೂವರು

ಇವರ ಹೊರತಾಗಿ ನಾಯಕಿ ಇಶ ಓಝಾ ಹಾಗೂ ಖುಷಿ ಶರ್ಮಾ ಕ್ರಮವಾಗಿ 16 ಹಾಗೂ 12 ರನ್ ದಾಖಲಿಸಿ ಎರಡಂಕಿ ಮೊತ್ತ ಪೇರಿಸುವಲ್ಲಿ ಯಶಸ್ವಿಯಾದರು. ಈ ಮೂವರನ್ನು ಬಿಟ್ಟರೆ ತಂಡದ ಮತ್ತ್ಯಾರು ಎರಡಂಕಿ ಮೊತ್ತ ದಾಖಲಿಸಲಿಲ್ಲ. ಹೀಗಾಗಿ ಯುಎಇ ತಂಡ ಅಲ್ಪ ರನ್​ಗಳಿಗೆ ಕುಸಿಯಿತು. ಪಾಕಿಸ್ತಾನ ಪರ ಸಾದಿಯಾ ಇಕ್ಬಾಲ್, ನಶ್ರಾ ಸಂಧು ಹಾಗೂ ತುಬಾ ಹಾಸನ್ ತಲಾ 2 ವಿಕೆಟ್ ಪಡೆದು ಮಿಂಚಿದರು.

ಪಾಕ್ ತಂಡಕ್ಕೆ 10 ವಿಕೆಟ್ ಜಯ

ಯುಎಇ ನೀಡಿದ 103 ರನ್​ಗಳ ಅಲ್ಪ ರನ್ ಬೆನ್ನತ್ತಿದ ಪಾಕಿಸ್ತಾನ ತಂಡ ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್ ನಡೆಸಿತು. ಇದಲ್ಲದೆ ಯುಎಇ ತಂಡಕ್ಕೆ ವಿಕೆಟ್ ಪಡೆಯುವ ಒಂದೇ ಒಂದು ವಿಕೆಟ್ ಪಡೆಯುವ ಅವಕಾಶವನ್ನು ನೀಡಲಿಲ್ಲ. ಹೀಗಾಗಿ ತಂಡ ಕೇವಲ 14.1 ಓವರ್​ಗಳಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ ಜಯದ ನಗೆ ಬೀರಿತು. ತಂಡದ ಪರ ಆರಂಭಿಕರಾದ ಗುಲ್ ಫಿರೋಜಾ 55 ಎಸೆತಗಳಲ್ಲಿ 8 ಬೌಂಡರಿ ಸಹಿತ ಅಜೇತ 62 ರನ್ ಬಾರಿಸಿದರೆ, ವಿಕೆಟ್​ಕೀಪರ್ ಬ್ಯಾಟರ್ ಮುನೀಬ ಅಲಿ 30 ಎಸೆತಗಳಲ್ಲಿ 4 ಬೌಂಡರಿ ಸಹಿತ ಅಜೇಯ 37 ರನ್ ಕಲೆಹಾಕಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Tue, 23 July 24

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ