ಟಿ20 ಶ್ರೀಲಂಕಾದ ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮಹಿಳೆಯರ ಟಿ20 ಏಷ್ಯಾಕಪ್ನ 9ನೇ ಪಂದ್ಯದಲ್ಲಿ ಯುಎಇ ಮಹಿಳಾ ತಂಡವನ್ನು 10 ವಿಕೆಟ್ಗಳಿಂದ ಮಣಿಸಿದ ಪಾಕಿಸ್ತಾನ ಮಹಿಳಾ ತಂಡ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಟೂರ್ನಿಯಲ್ಲಿ ಇದುವರೆಗೆ ಮೂರು ಪಂದ್ಯಗಳನ್ನು ಆಡಿರುವ ನಿದಾ ದರ್ ಪಡೆ 2 ಗೆಲುವು ಹಾಗೂ 1 ಸೋಲಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ 7 ವಿಕೆಟ್ಗಳ ಹೀನಾಯ ಸೋಲು ಕಂಡಿದ್ದ ಪಾಕ್ ತಂಡ, ಆ ಬಳಿಕ ಗೆಲುವಿನ ಲಯಕ್ಕೆ ಮರಳಿತ್ತು. ನಂತರ ನಡೆದ ಎರಡನೇ ಪಂದ್ಯದಲ್ಲಿ ನೇಪಾಳ ತಂಡವನ್ನು 9 ವಿಕೆಟ್ಗಳಿಂದ ಮಣಿಸಿದ್ದ ಪಾಕ್ ಪಡೆ, ಇದೀಗ ತನ್ನ ಮೂರನೇ ಪಂದ್ಯದಲ್ಲಿ ಯುಎಇ ವಿರುದ್ಧ 10 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಎಇ ತಂಡ ಮೊದಲ ವಿಕೆಟ್ಗೆ 29 ರನ್ಗಳ ಜೊತೆಯಾಟ ನೀಡಿತು. ಆದರೆ ಇದಕ್ಕೆ 7 ಓವರ್ಗಳನ್ನು ತೆಗೆದುಕೊಂಡಿತು. ಆ ಬಳಿಕ ತಂಡದಿಂದ ಯಾವುದೇ ಉತ್ತಮ ಜೊತೆಯಾಟ ಕಂಡುಬರಲಿಲ್ಲ. ನಿಯಮಿತ ಅಂತರದಲ್ಲಿ ತಂಡ ವಿಕೆಟ್ ಕಳೆದುಕೊಳ್ಳುತ ಸಾಗಿತು. ಹೀಗಾಗಿ ತಂಡ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 103 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ತಂಡದ ಪರ ಏಕಾಂಗಿ ಹೋರಾಟ ನೀಡಿದ ತೀರ್ಥ ಸತೀಶ್, 36 ಎಸೆತಗಳಲ್ಲಿ 5 ಬೌಂಡರಿ ಸಹಿತ 40 ರನ್ಗಳ ಇನ್ನಿಂಗ್ಸ್ ಆಡಿದರು.
First 🇵🇰 pair to have two 💯 stands in Women's T20Is ✅
Pakistan's second 1️⃣0️⃣-wicket win in Women's T20Is ✅
Huge victory in our final group-stage match 💪#PAKWvUAEW | #WomensAsiaCup2024 | #BackOurGirls pic.twitter.com/IavtTG6tAm
— Pakistan Cricket (@TheRealPCB) July 23, 2024
ಇವರ ಹೊರತಾಗಿ ನಾಯಕಿ ಇಶ ಓಝಾ ಹಾಗೂ ಖುಷಿ ಶರ್ಮಾ ಕ್ರಮವಾಗಿ 16 ಹಾಗೂ 12 ರನ್ ದಾಖಲಿಸಿ ಎರಡಂಕಿ ಮೊತ್ತ ಪೇರಿಸುವಲ್ಲಿ ಯಶಸ್ವಿಯಾದರು. ಈ ಮೂವರನ್ನು ಬಿಟ್ಟರೆ ತಂಡದ ಮತ್ತ್ಯಾರು ಎರಡಂಕಿ ಮೊತ್ತ ದಾಖಲಿಸಲಿಲ್ಲ. ಹೀಗಾಗಿ ಯುಎಇ ತಂಡ ಅಲ್ಪ ರನ್ಗಳಿಗೆ ಕುಸಿಯಿತು. ಪಾಕಿಸ್ತಾನ ಪರ ಸಾದಿಯಾ ಇಕ್ಬಾಲ್, ನಶ್ರಾ ಸಂಧು ಹಾಗೂ ತುಬಾ ಹಾಸನ್ ತಲಾ 2 ವಿಕೆಟ್ ಪಡೆದು ಮಿಂಚಿದರು.
ಯುಎಇ ನೀಡಿದ 103 ರನ್ಗಳ ಅಲ್ಪ ರನ್ ಬೆನ್ನತ್ತಿದ ಪಾಕಿಸ್ತಾನ ತಂಡ ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್ ನಡೆಸಿತು. ಇದಲ್ಲದೆ ಯುಎಇ ತಂಡಕ್ಕೆ ವಿಕೆಟ್ ಪಡೆಯುವ ಒಂದೇ ಒಂದು ವಿಕೆಟ್ ಪಡೆಯುವ ಅವಕಾಶವನ್ನು ನೀಡಲಿಲ್ಲ. ಹೀಗಾಗಿ ತಂಡ ಕೇವಲ 14.1 ಓವರ್ಗಳಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ ಜಯದ ನಗೆ ಬೀರಿತು. ತಂಡದ ಪರ ಆರಂಭಿಕರಾದ ಗುಲ್ ಫಿರೋಜಾ 55 ಎಸೆತಗಳಲ್ಲಿ 8 ಬೌಂಡರಿ ಸಹಿತ ಅಜೇತ 62 ರನ್ ಬಾರಿಸಿದರೆ, ವಿಕೆಟ್ಕೀಪರ್ ಬ್ಯಾಟರ್ ಮುನೀಬ ಅಲಿ 30 ಎಸೆತಗಳಲ್ಲಿ 4 ಬೌಂಡರಿ ಸಹಿತ ಅಜೇಯ 37 ರನ್ ಕಲೆಹಾಕಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:02 pm, Tue, 23 July 24