AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್ ಸೆಮಿಫೈನಲ್‌: ಭಾರತಕ್ಕೆ ಬಾಂಗ್ಲಾ ಎದುರಾಳಿ; ಈ ಚಾನೆಲ್​ನಲ್ಲಿ ಉಚಿತವಾಗಿ ವೀಕ್ಷಸಿ

2026ರ ಮಹಿಳಾ ಏಷ್ಯಾಕಪ್ ಸೆಮಿಫೈನಲ್‌ನಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಸೆಪ್ಟೆಂಬರ್ 10 ರಂದು ದುಬೈನಲ್ಲಿ ಮುಖಾಮುಖಿಯಾಗಲಿವೆ. ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗುವ ಈ ರೋಚಕ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ಮತ್ತು ಸೋನಿಲಿವ್ ಆ್ಯಪ್‌ನಲ್ಲಿ ವೀಕ್ಷಿಸಬಹುದು. ಗ್ರೂಪ್ ಹಂತದಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ ಎರಡನೇ ಸ್ಥಾನದಲ್ಲಿದೆ. ಈ ಮಹತ್ವದ ಸೆಮಿಫೈನಲ್‌ನಲ್ಲಿ ಗೆದ್ದ ತಂಡ ಫೈನಲ್‌ಗೆ ಪ್ರವೇಶಿಸಲಿದೆ.

ಏಷ್ಯಾಕಪ್ ಸೆಮಿಫೈನಲ್‌: ಭಾರತಕ್ಕೆ ಬಾಂಗ್ಲಾ ಎದುರಾಳಿ; ಈ ಚಾನೆಲ್​ನಲ್ಲಿ ಉಚಿತವಾಗಿ ವೀಕ್ಷಸಿ
ಭಾರತ Vs ಬಾಂಗ್ಲಾದೇಶ
ಪೃಥ್ವಿಶಂಕರ
|

Updated on:Sep 09, 2026 | 10:27 PM

Share

2026 ರ ಮಹಿಳಾ ಏಷ್ಯಾಕಪ್​ನಲ್ಲಿ ಗುಂಪು ಹಂತ ಮುಗಿದಿದ್ದು ಸೆಮಿಫೈನಲ್ ಸುತ್ತು ನಾಳೆಯಿಂದ ಆರಂಭವಾಗಲಿದೆ. ಎ ಗುಂಪಿನಿಂದ ಭಾರತ ಹಾಗೂ ಪಾಕಿಸ್ತಾನ ಸೆಮಿಫೈನಲ್​ಗೆ ಅರ್ಹತೆ ಪಡೆದಿದ್ದರೆ, ಇತ್ತ ಬಿ ಗುಂಪಿನಿಂದ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ತಂಡಗಳು ಸೆಮಿಫೈನಲ್‌ ಪ್ರವೇಶಿಸಿವೆ. ಎ ಗುಂಪಿನಲ್ಲಿ ಆಡಿದ ಎಲ್ಲಾ 3 ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಅಗ್ರ ತಂಡವಾಗಿ ಸೆಮಿಫೈನಲ್​ಗೆ ಟಿಕೆಟ್ ಪಡೆದಿರುವುದರಿಂದ ಬಿ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದಿರುವ ತಂಡವನ್ನು ಸೆಮಿಫೈನಲ್​ನಲ್ಲಿ ಎದುರಿಸಲಿದೆ. ಇತ್ತ ಬಿ ಗುಂಪಿನಲ್ಲಿ ಶ್ರೀಲಂಕಾ ಅಗ್ರಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ ಎರಡನೇ ಸ್ಥಾನದಲ್ಲಿದೆ. ಅಂದರೆ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ಮಹಿಳಾ ತಂಡಗಳು ಮುಖಾಮುಖಿಯಾಗಲಿವೆ.

ಭಾರತ- ಬಾಂಗ್ಲಾದೇಶ ನಡುವಿನ ಏಷ್ಯಾಕಪ್ ಸೆಮಿಫೈನಲ್‌ ಪಂದ್ಯ ಯಾವಾಗ ನಡೆಯಲಿದೆ?

ಭಾರತ- ಬಾಂಗ್ಲಾದೇಶ ನಡುವಿನ ಏಷ್ಯಾಕಪ್ ಸೆಮಿಫೈನಲ್‌ ಪಂದ್ಯ ಸೆಪ್ಟೆಂಬರ್ 10 ರಂದು ನಡೆಯಲಿದೆ.

ಭಾರತ- ಬಾಂಗ್ಲಾದೇಶ ನಡುವಿನ ಏಷ್ಯಾಕಪ್ ಸೆಮಿಫೈನಲ್‌ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ- ಬಾಂಗ್ಲಾದೇಶ ನಡುವಿನ ಏಷ್ಯಾಕಪ್ ಸೆಮಿಫೈನಲ್‌ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ- ಬಾಂಗ್ಲಾದೇಶ ನಡುವಿನ ಏಷ್ಯಾಕಪ್ ಸೆಮಿಫೈನಲ್‌ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ- ಬಾಂಗ್ಲಾದೇಶ ನಡುವಿನ ಏಷ್ಯಾಕಪ್ ಸೆಮಿಫೈನಲ್‌ ಪಂದ್ಯ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಶುರುವಾಗಲಿದೆ.

ಭಾರತ- ಬಾಂಗ್ಲಾದೇಶ ನಡುವಿನ ಏಷ್ಯಾಕಪ್ ಸೆಮಿಫೈನಲ್‌ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ- ಬಾಂಗ್ಲಾದೇಶ ನಡುವಿನ ಏಷ್ಯಾಕಪ್ ಸೆಮಿಫೈನಲ್‌ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು. ಹಾಗೆಯೇ ಸೋನಿಲಿವ್ ಅಪ್ಲಿಕೇಶನ್ ಬಳಸಿ ನಿಮ್ಮ ಮೊಬೈಲ್​ನಲ್ಲಿ ಪಂದ್ಯದ ನೇರಪ್ರಸಾರ ವೀಕ್ಷಿಸಬಹುದು.

ಏಷ್ಯಾಕಪ್​ನಲ್ಲಿ ಟೀಂ ಇಂಡಿಯಾದ ಸೆಮಿಫೈನಲ್ ಎದುರಾಳಿ ಯಾರು?

ಉಭಯ ತಂಡಗಳು

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್, ಜಿ ಕಮಲಿನಿ, ಅರುಂಧತಿ ರೆಡ್ಡಿ, ಪ್ರೇಮಾ ರಾವತ್, ರಾಧಾ ಯಾದವ್, ಶ್ರೀ ಚರಣಿ, ರೇಣುಕಾ ಠಾಕೂರ್, ನಂದನಿ ಶರ್ಮಾ, ಕ್ರಾಂತಿ ಗೌಡ್, ಪ್ರತೀಕಾ ರಾವಲ್.

ಬಾಂಗ್ಲಾದೇಶ ತಂಡ: ನಿಗರ್ ಸುಲ್ತಾನಾ (ನಾಯಕಿ), ಸೋಭಾನಾ ಮೊಸ್ತರಿ, ರಬೇಯಾ ಖಾನ್, ದಿಲಾರಾ ಅಕ್ಟರ್, ರಿತು ಮೋನಿ, ನಹಿದಾ ಅಕ್ಟರ್, ಮಾರುಫಾ ಅಕ್ಟರ್, ಫರ್ಜಾನಾ ಈಸ್ಮಿನ್, ಸುಲ್ತಾನಾ ಖಾತುನ್, ಶೋರ್ನಾ ಅಕ್ಟರ್, ಜುವೈರಿಯಾ ಫೆರ್ದೌಸ್, ಸರ್ಮಿನ್ ಸುಲ್ತಾನಾ, ಫಾಹಿಮಾ ಖಾತುನ್, ಶರ್ಮಿನ್ ಅಕ್ತೆರ್ ಸುಪ್ತಾ, ಶಂಜಿದಾ ಅಕ್ಥರ್ ಮಘ್ಲಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 pm, Wed, 9 September 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಬರಪೀಡಿತ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ
ಬರಪೀಡಿತ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
‘ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು’: ಗಾನವಿ ಬಗ್ಗೆ ಗಗನ್ ಚಿನ್ನಪ್ಪ ಟೀಕೆ
‘ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು’: ಗಾನವಿ ಬಗ್ಗೆ ಗಗನ್ ಚಿನ್ನಪ್ಪ ಟೀಕೆ
ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಎಚ್​​ಡಿಕೆ
ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಎಚ್​​ಡಿಕೆ
ಲಡಾಖ್‌ಗೆ 3,350 ಕೋಟಿ ರೂ. ಯೋಜನೆಗಳ ಕೊಡುಗೆ
ಲಡಾಖ್‌ಗೆ 3,350 ಕೋಟಿ ರೂ. ಯೋಜನೆಗಳ ಕೊಡುಗೆ
ದಸರಾ, ದೀಪಾವಳಿ: ರಾಜ್ಯಾದ್ಯಂತ ಸಿಹಿ ತಿಂಡಿ ಅಂಗಡಿಗಳ ಮೇಲೆ FSSAI ದಾಳಿ
ದಸರಾ, ದೀಪಾವಳಿ: ರಾಜ್ಯಾದ್ಯಂತ ಸಿಹಿ ತಿಂಡಿ ಅಂಗಡಿಗಳ ಮೇಲೆ FSSAI ದಾಳಿ
ಚಲಿಸುತ್ತಿದ್ದಾಗಲೇ ಕಳಚಿಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಟೈರ್
ಚಲಿಸುತ್ತಿದ್ದಾಗಲೇ ಕಳಚಿಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಟೈರ್
ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ
ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ
RSSಗೇ ಹೆದರಲಿಲ್ಲ, ನಿಮಗೆ ಹೆದರ್ತೀನಾ?: ಹೆಚ್​​ಡಿಕೆಗೆ ಪ್ರಿಯಾಂಕ್ ಕೌಂಟರ್​
RSSಗೇ ಹೆದರಲಿಲ್ಲ, ನಿಮಗೆ ಹೆದರ್ತೀನಾ?: ಹೆಚ್​​ಡಿಕೆಗೆ ಪ್ರಿಯಾಂಕ್ ಕೌಂಟರ್​