AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

ಮಹಿಳಾ ಏಷ್ಯಾಕಪ್ 2026ರಲ್ಲಿ ಇಂದು ಭಾರತ ಹಾಗೂ ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ದುಬೈನಲ್ಲಿ ನಡೆಯುವ ಈ ಪಂದ್ಯದಲ್ಲಿ ಭಾರತ ಸೆಮಿಫೈನಲ್ ಸ್ಥಾನ ಖಚಿತಪಡಿಸಿದ್ದು, ಪಾಕಿಸ್ತಾನ ಗೆಲ್ಲಲೇಬೇಕಿದೆ. ಉಭಯ ತಂಡಗಳ ಮುಖಾಮುಖಿ ದಾಖಲೆಯಲ್ಲಿ ಭಾರತವೇ ಮೇಲುಗೈ ಸಾಧಿಸಿದ್ದು, ಟಾಸ್ ಗೆದ್ದ ಪಾಕ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಇದು ಟೀಂ ಇಂಡಿಯಾಗೆ ಸವಾಲಾಗಿ ಪರಿಣಮಿಸಲಿದೆ.

ಭಾರತದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
ಭಾರತ Vs ಪಾಕಿಸ್ತಾನ
ಪೃಥ್ವಿಶಂಕರ
|

Updated on:Sep 05, 2026 | 7:44 PM

Share

ಮಹಿಳಾ ಏಷ್ಯಾಕಪ್ 2026 ರ ಬಹುನಿರೀಕ್ಷಿತ ಪಂದ್ಯ ಭಾರತ ಹಾಗೂ ಪಾಕಿಸ್ತಾನ ನಡುವೆ ಇಂದು ನಡೆಯುತ್ತಿದೆ. ಈ ಪಂದ್ಯಕ್ಕೆ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಆತಿಥ್ಯವಹಿಸಿದೆ. ಈಗಾಗಲೇ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಆದರೆ ಪಾಕಿಸ್ತಾನ ಈ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದು ಸೆಮಿಫೈನಲ್​ಗೆ ಲಗ್ಗೆ ಇಡಲು ನೋಡುತ್ತಿದೆ. ಆದರೆ ಟಿ20 ಮಾದರಿಯಲ್ಲಿ ಉಭಯ ತಂಡಗಳ ನಡುವಿನ ಮುಖಾಮುಖಿ ದಾಖಲೆಯನ್ನು ನೋಡಿದರೆ, ಭಾರತ ವನಿತಾ ಪಡೆ ಏಕಪಕ್ಷೀಯವಾಗಿ ಮೇಲುಗೈ ಸಾಧಿಸಿದೆ. ಹೀಗಾಗಿ ಈ ಪಂದ್ಯದಲ್ಲೂ ಭಾರತವೇ ಗೆಲುವಿನ ಫೇವರೇಟ್ ಎನಿಸಿಕೊಂಡಿದೆ.

ಟಾಸ್ ಗೆದ್ದ ಪಾಕಿಸ್ತಾನ

ಈ ಹೈವೋಲ್ಟೇಜ್ ಕದನದಲ್ಲಿ ಟಾಸ್ ಗೆದ್ದ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕಿ ಫಾತಿಮಾ ಸನಾ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ. ದುಬೈ ಪಿಚ್​ನಲ್ಲಿ ಗುರಿ ಬೆನ್ನಟ್ಟುವ ತಂಡಕ್ಕೆ ಬ್ಯಾಟಿಂಗ್‌ ಅಷ್ಟು ಸುಲಭವಲ್ಲ ಎಂಬುದನ್ನು ಈ ಹಿಂದಿನ ಅಂಕಿಅಂಶಗಳು ಬಹಿರಂಗಪಡಿಸಿವೆ. ಹೀಗಾಗಿ ಟೀಂ ಇಂಡಿಯಾ, ಪಾಕಿಸ್ತಾನವನ್ನು ಎಷ್ಟು ರನ್​ಗಳಿಗೆ ಕಟ್ಟಿಹಾಕಿ ಗುರಿ ಬೆನ್ನಟ್ಟುತ್ತದೆ ಎಂಬುದನ್ನು ಕಾದುನೋಡಬೇಕಿದೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಆ ಪ್ರಕಾರ, ಉಭಯ ತಂಡಗಳಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಅಂದರೆ ಎರಡು ತಂಡಗಳಲ್ಲಿ ಹಿಂದಿನ ಪಂದ್ಯದಲ್ಲಿ ಆಡಿದ ಹನ್ನೊಂದು ಆಟಗಾರ್ತಿಯರೇ ಈ ಪಂದ್ಯದಲ್ಲೂ ಆಡಲಿದ್ದಾರೆ.

ಮುಖಾಮುಖಿ ದಾಖಲೆ

ಮಹಿಳಾ ಟಿ20 ಏಷ್ಯಾಕಪ್​ನಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ಮೇಲುಗೈ ಸಾಧಿಸಿದೆ. ಏಷ್ಯಾಕಪ್ ಇತಿಹಾಸದಲ್ಲಿ ಉಭಯ ದೇಶಗಳ ನಡುವೆ ಏಳು ಪಂದ್ಯಗಳು ನಡೆದಿದ್ದು, ಅವುಗಳಲ್ಲಿ ಆರರಲ್ಲಿ ಭಾರತ ಗೆದ್ದಿದೆ. ಈ ಪಂದ್ಯಾವಳಿಯಲ್ಲಿ ಪಾಕಿಸ್ತಾನ ಒಮ್ಮೆ ಮಾತ್ರ ಭಾರತವನ್ನು ಸೋಲಿಸುವಲ್ಲಿ ಯಶಸ್ವಿಯಾಗಿದೆ. ಇದರ ಜೊತೆಗೆ ಟಿ20 ಕ್ರಿಕೆಟ್‌ನಲ್ಲಿಯೂ ಭಾರತ ಮಹಿಳಾ ಪಡೆ ಮೇಲುಗೈ ಸಾಧಿಸಿದೆ. ಇಲ್ಲಿಯವರೆಗೆ ಉಭಯ ತಂಡಗಳ ನಡುವೆ ಆಡಿರುವ 17 ಟಿ20 ಪಂದ್ಯಗಳಲ್ಲಿ ಭಾರತ 14 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಭಾರತದ ವಿರುದ್ಧ ಕೇವಲ ಮೂರು ಬಾರಿ ಮಾತ್ರ ಗೆದ್ದಿದೆ.

ಉಭಯ ತಂಡಗಳು

ಟೀಂ ಇಂಡಿಯಾ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಪ್ರತೀಕಾ ರಾವಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಭಾರತಿ ಫುಲ್ಮಾಲಿ, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಪ್ರೇಮಾ ರಾವತ್, ಎನ್ ಶ್ರೀ ಚರಣಿ, ಕ್ರಾಂತಿ ಗೌಡ್, ನಂದನಿ ಶರ್ಮಾ.

ಪಾಕಿಸ್ತಾನ ತಂಡ: ಮುನೀಬಾ ಅಲಿ (ವಿಕೆಟ್ ಕೀಪರ್), ಶಾವಾಲ್ ಜುಲ್ಫಿಕರ್, ಗುಲ್ ಫಿರೋಜಾ, ಆಯೇಶಾ ಜಾಫರ್, ಸದಾಫ್ ಶಮಾಸ್, ಫಾತಿಮಾ ಸನಾ (ನಾಯಕಿ), ಉಮ್-ಎ-ಹನಿ, ಐಮನ್ ಫಾತಿಮಾ, ತುಬಾ ಹಸನ್, ನಶ್ರಾ ಸುಂಧು ಮತ್ತು ಸಾದಿಯಾ ಇಕ್ಬಾಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 pm, Sat, 5 September 26

Follow Us