AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s T20 Asia Cup: ಥೈಲ್ಯಾಂಡ್ ವಿರುದ್ಧ ಭಾರತ ವನಿತಾ ಪಡೆಗೆ ಸುಲಭ ಜಯ

Women's T20 Asia Cup 2026: 2026ರ ಮಹಿಳಾ ಏಷ್ಯಾಕಪ್‌ನಲ್ಲಿ ಭಾರತ ಮಹಿಳಾ ತಂಡ ಥೈಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಶಫಾಲಿ ವರ್ಮಾ ಅವರ ಸ್ಫೋಟಕ 64 ರನ್‌ಗಳ ನೆರವಿನಿಂದ ಭಾರತ 159 ರನ್ ಗಳಿಸಿತು. ನಂತರ ದೀಪ್ತಿ ಶರ್ಮಾ ಮತ್ತು ನಂದಿನಿ ಶರ್ಮಾ ತಲಾ 3 ವಿಕೆಟ್ ಪಡೆದು ಥೈಲ್ಯಾಂಡ್‌ ಅನ್ನು ಕೇವಲ 65 ರನ್‌ಗಳಿಗೆ ಆಲೌಟ್ ಮಾಡಿದರು. ಈ 94 ರನ್‌ಗಳ ಜಯದೊಂದಿಗೆ ಭಾರತ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

Women's T20 Asia Cup: ಥೈಲ್ಯಾಂಡ್ ವಿರುದ್ಧ ಭಾರತ ವನಿತಾ ಪಡೆಗೆ ಸುಲಭ ಜಯ
India Vs Thailand Women
ಪೃಥ್ವಿಶಂಕರ
|

Updated on:Aug 30, 2026 | 11:03 PM

Share

2026 ರ ಮಹಿಳಾ ಏಷ್ಯಾಕಪ್​ನಲ್ಲಿ (Women’s Asia Cup 2026) ಭಾರತ ಮಹಿಳಾ ಕ್ರಿಕೆಟ್ ತಂಡ ಥೈಲ್ಯಾಂಡ್ (India vs Thailand Women) ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಿತು. ಈ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಥೈಲ್ಯಾಂಡ್ ತಂಡವನ್ನು ಮಣಿಸಿದ ಹರ್ಮನ್​ಪ್ರೀತ್ ಕೌರ್ ಪಡೆ ಟೂರ್ನಿಯಲ್ಲಿ ಗೆಲುವಿನ ಆರಂಭ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಥೈಲ್ಯಾಂಡ್‌ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 159 ರನ್ ಗಳಿಸಿ ಥೈಲ್ಯಾಂಡ್‌ಗೆ ಗೆಲ್ಲಲು 160 ರನ್‌ಗಳ ಗುರಿಯನ್ನು ನೀಡಿತು. ಈ ಗುರಿ ಬೆನ್ನಟ್ಟಿದ ಥೈಲ್ಯಾಂಡ್ ಕೇವಲ 65 ರನ್ ಕಲೆಹಾಕಲಷ್ಟೇ ಶಕ್ತವಾಗಿ 94 ರನ್​ಗಳಿಂದ ಸೋಲೊಪ್ಪಿಕೊಂಡತು.

ಭಾರತದ ವೇಗಕ್ಕೆ ಕಡಿವಾಣ

ಈ ಪಂದ್ಯದಲ್ಲಿ ಭಾರತ ತಂಡ ಉತ್ತಮ ಆರಂಭ ಪಡೆದರೂ, ಮೂರನೇ ಓವರ್‌ನಲ್ಲಿ ಸ್ಮೃತಿ ಮಂಧಾನ ರನೌಟ್ ಆದರು. ನಂತರ ಶೆಫಾಲಿ ವರ್ಮಾ ಜವಾಬ್ದಾರಿ ವಹಿಸಿಕೊಂಡು ಕೇವಲ 36 ಎಸೆತಗಳಲ್ಲಿ ಎಂಟು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳೊಂದಿಗೆ ಅದ್ಭುತ 64 ರನ್ ಗಳಿಸಿ ತಂಡವನ್ನು 100 ರನ್​ಗಳ ಗಡಿ ದಾಟಿಸಿದರು. ಪ್ರತಿಕಾ ರಾವಲ್ 18 ಎಸೆತಗಳಲ್ಲಿ 22 ರನ್ ಬಾರಿಸಿ ಶಫಾಲಿಗೆ ಬೆಂಬಲ ನೀಡಿದರು. ಅಂತಿಮವಾಗಿ, ಕ್ರಾಂತಿ ಗೌಡ್ ಎಂಟು ಎಸೆತಗಳಲ್ಲಿ ಅಜೇಯ 15 ರನ್ ಗಳಿಸಿ ತಂಡವನ್ನು 159ರನ್​ಗಳಿಗೆ ತಲುಪಿಸಿದರು. ಇವರನ್ನು ಹೊರತುಪಡಿಸಿ, ಬೇರೆ ಯಾವುದೇ ಬ್ಯಾಟರ್​ಗೆ ಹೆಚ್ಚಿನದನ್ನು ಮಾಡಲು ಸಾಧ್ಯವಾಗಲಿಲ್ಲ. ಭಾರತದ ಆರು ಬ್ಯಾಟರ್​ಗಳು ಎರಡಂಕಿ ತಲುಪಲು ವಿಫಲರಾಗಿದ್ದು ತಂಡವನ್ನು 200 ರನ್ ದಾಟದಂತೆ ತಡೆಯಿತು.

ಕೈಕೊಟ್ಟ ಮಧ್ಯಮ ಕ್ರಮಾಂಕ

ನಾಯಕಿ ಹರ್ಮನ್‌ಪ್ರೀತ್ ಕೌರ್ 9 ಎಸೆತಗಳಲ್ಲಿ ಕೇವಲ 5 ರನ್ ಗಳಿಸಿದರೆ, ಭಾರತಿ ಫುಲ್ಮಾಲಿ ಕೂಡ 13 ರನ್‌ಗಳಿಗೆ ಸುಸ್ತಾದರು. ಸ್ಫೋಟಕ ಬ್ಯಾಟರ್ ರಿಚಾ ಘೋಷ್ ಮೊದಲ ಎಸೆತದಲ್ಲೇ ವಿಕೆಟ್ ಕಳೆದುಕೊಂಡರು. ದೀಪ್ತಿ ಶರ್ಮಾ ಕೂಡ 5 ರನ್ ಗಳಿಸಿ ರನೌಟ್ ಆದರು. ಪ್ರೇಮಾ ರಾವತ್ 6 ರನ್, ನಂದನಿ ಶರ್ಮಾ ಕೇವಲ 1 ರನ್ ಬಾರಿಸಿ ಔಟಾದರೆ, ಶ್ರೀ ಚರಣಿ 8 ಎಸೆತಗಳಲ್ಲಿ 6 ರನ್ ಗಳಿಸಿ ಅಜೇಯರಾಗಿ ಉಳಿದರು. ಥೈಲ್ಯಾಂಡ್ ಪರ ಅತ್ಯಂತ ಯಶಸ್ವಿ ಬೌಲರ್ ಸುಲೀಪೋರ್ನ್ ಲಾವೋಮಿ ನಾಲ್ಕು ಓವರ್‌ಗಳಲ್ಲಿ ಕೇವಲ 26 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಕಬಳಿಸಿದರು.

Women’s T20 Asia Cup: ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌

65 ರನ್​ಗಳಿಗೆ ಆಲೌಟ್

ಭಾರತ ನೀಡಿದ 160 ರನ್​ಗಳ ಗುರಿ ಬೆನ್ನಟ್ಟಿದ ಥೈಲ್ಯಾಂಡ್​ನ ಅನಾನುಭವಿ ಬ್ಯಾಟಿಂಗ್‌ ವಿಭಾಗಕ್ಕೆ ಭಾರತದ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿಲ್ಲ. ತಂಡದ ಪರ ನನ್ನಪತ್ ಕೊಂಚರೋಯೆಂಕೈ ಅತ್ಯಧಿಕ 41 ರನ್​ಗಳ ಇನ್ನಿಂಗ್ಸ್ ಆಡಿದನ್ನು ಬಿಟ್ಟರೆ ಉಳಿದವರಲ್ಲಿ ಯಾರೂ ಕೂಡ ಒಂದಂಕಿ ಮೊತ್ತ ದಾಟಲಿಲ್ಲ. ಅಂತಿಮವಾಗಿ ಥೈಲ್ಯಾಂಡ್‌ ತಂಡ 16.1 ಓವರ್​ಗಳಲ್ಲಿ ಕೇವಲ 65 ರನ್​ಗಳಿಗೆ ಆಲೌಟ್ ಆಯಿತು. ಭಾರತದ ಪರ ದೀಪ್ತಿ ಶರ್ಮಾ ಹಾಗೂ ನಂದನಿ ಶರ್ಮಾ ತಲಾ 3 ವಿಕೆಟ್‌ಗಳನ್ನು ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:01 pm, Sun, 30 August 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ