AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈಲ್ಯಾಂಡ್ ತಂಡವನ್ನು ಲಘುವಾಗಿ ಪರಿಗಣಿಸಿ ವಿಕೆಟ್ ಕೈಚೆಲ್ಲಿದ ಸ್ಮೃತಿ

Women's Asia Cup 2026: ದುಬೈನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಏಷ್ಯಾಕಪ್‌ನಲ್ಲಿ ಭಾರತ ಮತ್ತು ಥೈಲ್ಯಾಂಡ್ ಮಹಿಳಾ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಸೋತು ಬ್ಯಾಟಿಂಗ್‌ಗಿಳಿದ ಭಾರತ ಸ್ಮೃತಿ ಮಂಧಾನ ಅವರ ತ್ವರಿತ 19 ರನ್‌ಗಳ ಬಳಿಕ ರನೌಟ್‌ನಿಂದ ವಿಕೆಟ್ ಕಳೆದುಕೊಂಡಿತು. ಶಫಾಲಿ ವರ್ಮಾ ಮತ್ತು ಪ್ರತೀಕಾ ತಂಡಕ್ಕೆ ಉತ್ತಮ ಬೆಂಬಲ ನೀಡಿದ್ದು, ಮೂರು ಓವರ್‌ಗಳಲ್ಲಿ 38 ರನ್ ಕಲೆಹಾಕುವ ಮೂಲಕ ಭಾರತ ಬಲಿಷ್ಠ ಆರಂಭ ಪಡೆದಿದೆ.

ಥೈಲ್ಯಾಂಡ್ ತಂಡವನ್ನು ಲಘುವಾಗಿ ಪರಿಗಣಿಸಿ ವಿಕೆಟ್ ಕೈಚೆಲ್ಲಿದ ಸ್ಮೃತಿ
Smriti Mandhana
ಪೃಥ್ವಿಶಂಕರ
|

Updated on:Aug 30, 2026 | 8:43 PM

Share

ದುಬೈನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಏಷ್ಯಾಕಪ್‌ನಲ್ಲಿ(Women’s Asia Cup 2026) ಭಾರತ ಮತ್ತು ಥೈಲ್ಯಾಂಡ್ ಮಹಿಳಾ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಟೂರ್ನಿಯಲ್ಲಿ ಭಾರತ ತಂಡಕ್ಕೆ ಇದು ಮೊದಲ ಪಂದ್ಯವಾದರೆ, ಥೈಲ್ಯಾಂಡ್ ತಂಡಕ್ಕೆ ಎರಡನೇ ಪಂದ್ಯವಾಗಿದೆ. ಮೊದಲ ಪಂದ್ಯದಲ್ಲಿ ಚೀನಾ ತಂಡವನ್ನು ಮಣಿಸಿರುವ ಥೈಲ್ಯಾಂಡ್ ಗೆಲುವಿನ ಆತ್ಮವಿಶ್ವಾಸದೊಂದಿಗೆ ಟೀಂ ಇಂಡಿಯಾ ವಿರುದ್ಧ ಕಣಕ್ಕಿಳಿದಿದೆ. ಅದರಂತೆ ಈ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಬ್ಯಾಟಿಂಗ್‌ ಮಾಡುತ್ತಿದ್ದು, ಉಪನಾಯಕಿ ಸ್ಮೃತಿ ಮಂಧಾನ (Smriti Mandhana) ಅವರ ವಿಕೆಟ್ ಕಳೆದುಕೊಂಡಿದೆ.

ಭಾರತಕ್ಕೆ ಸ್ಫೋಟಕ ಆರಂಭ

ಟೀಂ ಇಂಡಿಯಾ ಪರ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಇನ್ನಿಂಗ್ಸ್ ಆರಂಭಿಸಿದರು. ಸ್ಮೃತಿ ಮೊದಲ ಓವರ್​ನಲ್ಲೇ 3 ಬೌಂಡರಿಗಳನ್ನು ಬಾರಿಸುವ ಮೂಲಕ ಉತ್ತಮ ಆರಂಭ ಪಡೆದುಕೊಂಡರು. ಎರಡನೇ ಓವರ್​ನಲ್ಲಿ ಶಫಾಲಿ ವರ್ಮಾ 2 ಬೌಂಡರಿಗಳನ್ನು ಬಾರಿಸಿದರು. ಮೂರನೇ ಓವರ್​ನಲ್ಲಿ ಸ್ಮೃತಿ 1 ಬೌಂಡರ ಬಾರಿಸಿದರೆ, ಶಫಾಲಿ 1 ಸಿಕ್ಸರ್ ಬಾರಿಸಿದರು. ಹೀಗಾಗಿ ಟೀಂ ಇಂಡಿಯಾ ಮೊದಲ ಮೂರು ಓವರ್​ಗಳಲ್ಲಿ 38 ರನ್ ಕಲೆಹಾಕಿತು. ಆದರೆ ಇದೇ ಮೂರನೇ ಓವರ್​ನ ಕೊನೆಯ ಎಸೆತದಲ್ಲಿ ಸ್ಮೃತಿ ಮಂಧಾನ ತೊರಿದ ನಿರ್ಲಕ್ಷ್ಯತನ ಅವರ ವಿಕೆಟ್ ಉರುಳುವಂತೆ ಮಾಡಿತು.

ರನೌಟ್​ಗೆ ಬಲಿಯಾದ ಸ್ಮೃತಿ

ಮೂರನೇ ಓವರ್​ನ 5ನೇ ಎಸೆತದಲ್ಲಿ ಸಿಕ್ಸರ್ ಬಾರಿಸಿದ ಶಫಾಲಿ, ಕೊನೆಯ ಎಸೆತವನ್ನು ಲಾಂಗ್ ಆನ್ ಕಡೆಗೆ ಆಡಿ ರನ್​ಗಾಗಿ ಓಡಿದರು. ಇಬ್ಬರು ಮೊದಲ ರನ್ ಅನ್ನು ಸುಲಭವಾಗಿ ಪೂರ್ಣಗೊಳಿಸಿದರು. ಇತ್ತ ಮೊದಲ ರನ್ ವೇಗವಾಗಿ ಓಡಿದ ಸ್ಮೃತಿ ಎರಡನೇ ರನ್​ಗಾಗಿ ಓಡಲು ಆರಂಭಿಸಿದರು. ಆದರೆ ಲಾಂಗ್ ಆನ್​ನಿಂದ ಥೈಲ್ಯಾಂಡ್ ಫಿಲ್ಡರ್ ನೇರ ಎಸೆತದಲ್ಲಿ ತನ್ನನ್ನು ರನೌಟ್ ಮಾಡುತ್ತಾರೆ ಎಂಬುದನ್ನು ಕನಸಲ್ಲೂ ಊಹಿಸದ ಮಂಧಾನ ಎರಡನೇ ರನ್ ಅನ್ನು ಕೊಂಚ ನಿಧಾನವಾಗಿ ಓಡಿದರು. ಇದರ ಪರಿಣಾಮವಾಗಿ ಮಂಧಾನ ರನೌಟ್​ಗೆ ಬಲಿಯಾಗಿ ತಮ್ಮ ಇನ್ನಿಂಗ್ಸ್ ಮುಗಿಸಬೇಕಾಯಿತು.

ಶಫಾಲಿ ಅರ್ಧಶತಕ

ಔಟಾಗುವುದಕ್ಕೂ ಮುನ್ನ ಸ್ಮೃತಿ ಮಂಧಾನ 10 ಎಸೆತಗಳನ್ನು ಎದುರಿಸಿ 4 ಬೌಂಡರಿ ಸಹಿತ 19 ರನ್ ಬಾರಿಸಿದ್ದರು. ಸ್ಮೃತಿ ಔಟಾದ ಬಳಿಕ ಬಂದ ಪ್ರತೀಕಾ, ಶಫಾಲಿಗೆ ಉತ್ತಮ ಬೆಂಬಲ ನೀಡಿದರು. ಇವರಿಬ್ಬರು ಎರಡನೇ ವಿಕೆಟ್​ಗೆ ತಂಡವನ್ನು ಶತಕದ ಸಮೀಪಕ್ಕೆ ತಂದಿದ್ದಾರೆ. ಈ ಸುದ್ದಿ ಬರೆಯುವ ಹೊತ್ತಿಗೆ 9 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 91 ರನ್ ಕಲೆಹಾಕಿದೆ. ಶಫಾಲಿ ವರ್ಮಾ 26 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದ್ದರೆ, ಪ್ರತೀಕಾ 9ನೇ ಓವರ್ ಕೊನೆಯ ಎಸೆತದಲ್ಲಿ ವಿಕೆಟ್ ಕಳೆದುಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 pm, Sun, 30 August 26

Follow Us
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!