AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಮಹಿಳಾ ಏಷ್ಯಾಕಪ್‌ ಆರಂಭ; ಭಾರತದ ಮೊದಲ ಎದುರಾಳಿ ಯಾರು?

Women's Asia Cup 2026: 2026 ರ ಮಹಿಳಾ ಏಷ್ಯಾಕಪ್ ಆಗಸ್ಟ್ 28 ರಿಂದ ಯುಎಇಯಲ್ಲಿ ಆರಂಭವಾಗಿದ್ದು, 8 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ತಂಡ ಕಳೆದ ಬಾರಿ ರನ್ನರ್ ಅಪ್ ಆಗಿದ್ದು, ಈ ಬಾರಿ ಕಪ್ ಗೆಲ್ಲಲು ಸಜ್ಜಾಗಿದೆ. ಸಂಪೂರ್ಣ ವೇಳಾಪಟ್ಟಿ, ತಂಡಗಳ ಮಾಹಿತಿ, ಪಂದ್ಯಗಳ ನೇರ ಪ್ರಸಾರದ ವಿವರಗಳು ಲೇಖನದಲ್ಲಿವೆ.

ಇಂದಿನಿಂದ ಮಹಿಳಾ ಏಷ್ಯಾಕಪ್‌ ಆರಂಭ; ಭಾರತದ ಮೊದಲ ಎದುರಾಳಿ ಯಾರು?
Asia Cup
ಪೃಥ್ವಿಶಂಕರ
|

Updated on:Aug 28, 2026 | 3:59 PM

Share

2026 ರ ಮಹಿಳಾ ಏಷ್ಯಾಕಪ್‌ನ (Women’s Asia Cup 2026) 10 ನೇ ಆವೃತ್ತಿಯು ಇಂದಿನಿಂದ ಅಂದರೆ ಆಗಸ್ಟ್ 28 ರಿಂದ ಯುಎಇಯಲ್ಲಿ ಆರಂಭವಾಗುತ್ತಿದೆ. 8 ತಂಡಗಳ ನಡುವೆ ನಡೆಯಲಿರುವ ಈ ಟೂರ್ನಿಯಲ್ಲಿ ಮುಂದಿನ ಎರಡು ವಾರಗಳಲ್ಲಿ 15 ಪಂದ್ಯಗಳು ನಡೆಯಲಿವೆ. ಈ ಪಂದ್ಯಾವಳಿಯ ಅತ್ಯಂತ ಯಶಸ್ವಿ ತಂಡವಾಗಿರುವ ಭಾರತ ಮಹಿಳಾ ತಂಡ ಕೂಡ ಈ ಟೂರ್ನಿಗೆ ಯುಎಇ ತಲುಪಿದೆ. ಕಳೆದ ಆವೃತ್ತಿಯಲ್ಲಿ ಪ್ರಶಸ್ತಿ ಪಂದ್ಯದಲ್ಲಿ ಸೋತು ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಕೊಂಡಿದ್ದ ಹರ್ಮನ್‌ಪ್ರೀತ್ ಕೌರ್ ಪಡೆ ಈ ಬಾರಿ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿದೆ. ಇನ್ನು ಈ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಥೈಲ್ಯಾಂಡ್ ಹಾಗೂ ಹಾಂಕ್​ ಕಾಂಗ್ ತಂಡಗಳು ಮುಖಾಮುಖಿಯಾಗುತ್ತಿವೆ. ಹಾಗೆಯೇ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ತಂಡವು ಆಗಸ್ಟ್ 30 ರಂದು ತನ್ನ ಆರಂಭಿಕ ಪಂದ್ಯದಲ್ಲಿ ಥೈಲ್ಯಾಂಡ್ ತಂಡವನ್ನು ಎದುರಿಸಲಿದೆ.

ತಲಾ 4 ತಂಡಗಳ 2 ಗುಂಪು

ಮಹಿಳಾ ಏಷ್ಯಾಕಪ್​ನಲ್ಲಿ ಭಾಗವಹಿಸುತ್ತಿರುವ ಎಂಟು ತಂಡಗಳನ್ನು ತಲಾ 4 ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಗುಂಪು ಎ ಭಾರತ, ಥೈಲ್ಯಾಂಡ್, ಹಾಂಗ್ ಕಾಂಗ್ ಮತ್ತು ಪಾಕಿಸ್ತಾನ ಒಳಗೊಂಡಿದ್ದರೆ, ಗುಂಪು ಬಿ ಬಾಂಗ್ಲಾದೇಶ, ಶ್ರೀಲಂಕಾ, ಚೀನಾ ಮತ್ತು ಇಂಡೋನೇಷ್ಯಾ ತಂಡವನ್ನು ಒಳಗೊಂಡಿಡಿದೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಮುನ್ನಡೆಯುತ್ತವೆ.

ಮಹಿಳಾ ಏಷ್ಯಾಕಪ್ ಪಂದ್ಯಗಳು ಎಲ್ಲಿ ನಡೆಯುತ್ತವೆ?

2026 ರ ಮಹಿಳಾ ಏಷ್ಯಾಕಪ್‌ನ ಎಲ್ಲಾ ಪಂದ್ಯಗಳು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿವೆ.

ಮಹಿಳಾ ಏಷ್ಯಾಕಪ್ ಪಂದ್ಯಗಳು ಎಷ್ಟು ಗಂಟೆಗೆ ಪ್ರಾರಂಭವಾಗುತ್ತವೆ?

ಮಹಿಳೆಯರ ಏಷ್ಯಾಕಪ್​ನ ಎಲ್ಲಾ ಪಂದ್ಯಗಳು ರಾತ್ರಿ 8 ಗಂಟೆಗೆ ಆರಂಭವಾಗಲಿವೆ.

ಮಹಿಳಾ ಏಷ್ಯಾಕಪ್ ಪಂದ್ಯಗಳ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ಭಾರತದಲ್ಲಿ, ಮಹಿಳಾ ಏಷ್ಯಾಕಪ್ ಪಂದ್ಯಗಳ ನೇರ ಪ್ರಸಾರವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ.

Asia Cup 2026: ಏಷ್ಯಾಕಪ್​ಗೆ ಭಾರತ ಮಹಿಳಾ ತಂಡ ಪ್ರಕಟ; ಚೇತರಿಸಿಕೊಳ್ಳದ ಶ್ರೇಯಾಂಕ ಪಾಟೀಲ್

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ

  • ಆಗಸ್ಟ್ 28: ಥೈಲ್ಯಾಂಡ್ vs ಹಾಂಗ್ ಕಾಂಗ್.
  • ಆಗಸ್ಟ್ 29: ಶ್ರೀಲಂಕಾ vs ಯುನೈಟೆಡ್ ಅರಬ್ ಎಮಿರೇಟ್ಸ್.
  • ಆಗಸ್ಟ್ 30: ಭಾರತ vs ಥೈಲ್ಯಾಂಡ್.
  • ಆಗಸ್ಟ್ 31: ಬಾಂಗ್ಲಾದೇಶ vs ಇಂಡೋನೇಷ್ಯಾ.
  • ಸೆಪ್ಟೆಂಬರ್ 1: ಪಾಕಿಸ್ತಾನ vs ಥೈಲ್ಯಾಂಡ್.
  • ಸೆಪ್ಟೆಂಬರ್ 2: ಶ್ರೀಲಂಕಾ vs ಇಂಡೋನೇಷ್ಯಾ.
  • ಸೆಪ್ಟೆಂಬರ್ 3: ಭಾರತ vs ಹಾಂಗ್ ಕಾಂಗ್.
  • ಸೆಪ್ಟೆಂಬರ್ 4: ಯುನೈಟೆಡ್ ಅರಬ್ ಎಮಿರೇಟ್ಸ್ vs ಇಂಡೋನೇಷ್ಯಾ. ಸೆಪ್ಟೆಂಬರ್ 5: ಭಾರತ vs ಪಾಕಿಸ್ತಾನ.
  • ಸೆಪ್ಟೆಂಬರ್ 6: ಶ್ರೀಲಂಕಾ vs ಬಾಂಗ್ಲಾದೇಶ.
  • ಸೆಪ್ಟೆಂಬರ್ 7: ಪಾಕಿಸ್ತಾನ vs ಹಾಂಗ್ ಕಾಂಗ್.
  • ಸೆಪ್ಟೆಂಬರ್ 8: ಬಾಂಗ್ಲಾದೇಶ vs ಯುನೈಟೆಡ್ ಅರಬ್ ಎಮಿರೇಟ್ಸ್.
  • ಸೆಪ್ಟೆಂಬರ್ 10: ಸೆಮಿಫೈನಲ್ 1.
  • ಸೆಪ್ಟೆಂಬರ್ 11: ಸೆಮಿಫೈನಲ್ 2.
  • ಸೆಪ್ಟೆಂಬರ್ 13: ಫೈನಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:58 pm, Fri, 28 August 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್