Harmanpreet Kaur: ಮಹಿಳಾ ಕ್ರಿಕೆಟ್​ನಲ್ಲಿ ಇತಿಹಾಸ ಸೃಷ್ಟಿಸಿದ ಹರ್ಮನ್​ಪ್ರೀತ್ ಕೌರ್: ಇದುವರೆಗೆ ಯಾರೂ ಮಾಡಿಲ್ಲ ಈ ಸಾಧನೆ

IND W vs SL W, Womens Asia Cup: 8 ವಿಕೆಟ್​ಗಳ ಅಮೋಘ ಗೆಲುವು ಕಂಡ ಟೀಮ್ ಇಂಡಿಯಾ ಏಷ್ಯಾಕಪ್​ನಲ್ಲಿ ತಾನೇ ಬಲಿಷ್ಠ ಎಂಬುದನ್ನು ಮತ್ತೊಮ್ಮೆ ಸಾಭೀತು ಮಾಡಿದೆ. ಇದರ ನಡುವೆ ಭಾರತ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ (Harmanpreet Kaur) ಇತಿಹಾಸ ನಿರ್ಮಿಸಿದ್ದಾರೆ.

Harmanpreet Kaur: ಮಹಿಳಾ ಕ್ರಿಕೆಟ್​ನಲ್ಲಿ ಇತಿಹಾಸ ಸೃಷ್ಟಿಸಿದ ಹರ್ಮನ್​ಪ್ರೀತ್ ಕೌರ್: ಇದುವರೆಗೆ ಯಾರೂ ಮಾಡಿಲ್ಲ ಈ ಸಾಧನೆ
Harmanpreet Kaur
Follow us
TV9 Web
| Updated By: Vinay Bhat

Updated on:Oct 16, 2022 | 8:52 AM

ಮಹಿಳಾ ಏಷ್ಯಾಕಪ್ ಟಿ20 2022 (Womens Asia Cup 2022) ಟೂರ್ನಿಗೆ ತೆರೆಬಿದ್ದಿದೆ. ಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಶ್ರೀಲಂಕಾವನ್ನು (India Women vs Sri Lanka Women) ಸೋಲಿಸಿ ಏಳನೇ ಬಾರಿ ಪ್ರಶಸ್ತಿ ಎತ್ತಿ ಹಿಡಿದಿದೆ. ಭಾರತ ಪುರುಷರ ತಂಡ ಕೂಡ ಏಳು ಬಾರಿ ಏಷ್ಯಾಕಪ್​ ಜಯಿಸಿದೆ. ಈ ಮೂಲಕ ವನಿತೆಯರು ಈ ದಾಖಲೆಯಲ್ಲಿ ಸಮಭಲ ಸಾಧಿಸಿದ್ದಾರೆ. ಹೈವೋಲ್ಟೇಜ್ ಕದನ ಆಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಈ ಪಂದ್ಯ ನಿರಾಸೆ ಮೂಡಿಸಿತು. ಏಕಪಕ್ಷಿಯವಾಗಿ ನಡೆದ ಪಂದ್ಯದಲ್ಲಿ ಭಾರತ ಸಂಪೂರ್ಣ ಮೇಲುಗೈ ಸಾಧಿಸಿತು. 8 ವಿಕೆಟ್​ಗಳ ಅಮೋಘ ಗೆಲುವು ಕಂಡ ಟೀಮ್ ಇಂಡಿಯಾ ಏಷ್ಯಾಕಪ್​ನಲ್ಲಿ ತಾನೇ ಬಲಿಷ್ಠ ಎಂಬುದನ್ನು ಮತ್ತೊಮ್ಮೆ ಸಾಭೀತು ಮಾಡಿದೆ. 15 ವರ್ಷಗಳ ಬಳಿಕ ಫೈನಲ್​ಗೆ ತಲುಪಿದ್ದ ಶ್ರೀಲಂಕಾ ಮಹಿಳಾ ತಂಡ ತೀರಾ ಕಳಪೆ ಪ್ರದರ್ಶನ ತೋರಿತು. ಇದರ ನಡುವೆ ಭಾರತ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ (Harmanpreet Kaur) ಇತಿಹಾಸ ನಿರ್ಮಿಸಿದ್ದಾರೆ.

ಟೀಮ್ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಟಿ20 ಪಂದ್ಯಗಳನ್ನು ಆಡಿದ ಸಾಧನೆ ಮಾಡಿದ್ದಾರೆ. ಅವರಿಗೆ ಶ್ರೀಲಂಕಾ ವಿರುದ್ಧದ ಫೈನಲ್ ಪಂದ್ಯ 137 ಟಿ 20ಯ ಆಟವಾಗಿತ್ತು. ಇದಕ್ಕೂ ಮುನ್ನ ಇವರು ನ್ಯೂಜಿಲೆಂಡ್ ನಾಯಕಿ ಸೂಝಿ ಬೆಟ್ಸ್ ಅವರ ಜೊತೆ ಜಂಟಿ ಸ್ಥಾನ ಹಂಚಿಕೊಂಡಿದ್ದರು. ಕ್ರಿಕೆಟ್ ಲೋಕದಲ್ಲಿ ಅತಿ ಹೆಚ್ಚು ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ ಪ್ಲೇಯರ್ ರೋಹಿತ್ ಶರ್ಮಾ ಆಗಿದ್ದು 142 ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. ಅಂತೆಯೆ ಮಹಿಳಾ ಟಿ20 ಕ್ರಿಕೆಟ್​ನಲ್ಲಿ ಹರ್ಮನ್ (2694) ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯರ ಸಾಲಿನಲ್ಲಿ 6ನೇ ಸ್ಥಾನಕ್ಕೇರಿದ್ದಾರೆ.

ಇದನ್ನೂ ಓದಿ
Image
Sri Lanka vs Namibia T20 World Cup 2022: ಐಸಿಸಿ ಟಿ20 ವಿಶ್ವಕಪ್​ಗೆ ಇಂದು ಚಾಲನೆ: ಶ್ರೀಲಂಕಾ- ನಮೀಬಿಯಾ ಪಂದ್ಯ ಎಷ್ಟು ಗಂಟೆಗೆ ಆರಂಭ?, ಯಾವುದರಲ್ಲಿ ನೇರಪ್ರಸಾರ?
Image
T20 World Cup 2022: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಆಡುತ್ತಿರುವ ಅತ್ಯಂತ ಕಿರಿಯ ಕ್ರಿಕೆಟಿಗರಿವರು..
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
Sourav Ganguly: CAB ಅಧ್ಯಕ್ಷ ಸ್ಥಾನದತ್ತ ಮುಖ ಮಾಡಿದ ಸೌರವ್ ಗಂಗೂಲಿ

ಪಂದ್ಯ ಮುಗಿದ ಬಳಿಕ ಮಾತನಾಡಿದ ನಾಯಕಿ ಹರ್ಮನ್, ”ಈ ಗೆಲುವಿನ ಶ್ರೇಯವನ್ನು ಬೌಲರ್‌ಗಳು ಮತ್ತು ಫೀಲ್ಡರ್‌ಗಳಿಗೆ ನೀಡಿದ್ದಾರೆ. ‘ನಮ್ಮ ಗೆಲುವಿಗೆ ಮುಖ್ಯ ಕಾರಣ ಬೌಲರ್‌ಗಳು. ನಮ್ಮ ಫೀಲ್ಡಿಂಗ್ ವಿಭಾಗವು ಮೊದಲ ಎಸೆತದಿಂದಲೂ ಉತ್ತಮವಾಗಿ ಕಾರ್ಯ ನಿರ್ವಹಿಸಿತು. ಸುಲಭವಾಗಿ ರನ್‌ಗಳನ್ನು ಬಿಟ್ಟುಕೊಡಬಾರದು ಎಂದು ನಾವು ಚರ್ಚೆ ಮಾಡಿದ್ದೆವು. ಪಿಚ್ ಅರ್ಥ ಮಾಡಿಕೊಂಡು ಅದರಂತೆ ಫೀಲ್ಡಿಂಗ್ ಸೆಟ್ ಮಾಡುವುದು ಮುಖ್ಯವಾಗಿತ್ತು. ಅದರಂತೆ ಪಿಚ್ ಅನ್ನು ಅರಿತುಕೊಂಡೆ ಫೀಲ್ಡಿಂಗ್ ಸೆಟ್ ಮಾಡಿದ್ದೆವು. ಸ್ಕೋರ್‌ ಬೋರ್ಡ್ ಕಡೆ ನಾವು ನೋಡುತ್ತಿರಲಿಲ್ಲ”, ಎಂದು ಹೇಳಿದ್ದಾರೆ.

ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಮಹಿಳೆಯರ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿತ್ತು. ಆದರೆ, ಸ್ಲೋ ಪಿಚ್‌ನಲ್ಲಿ 9 ವಿಕೆಟ್ ಕಳೆದುಕೊಂಡು 65 ರನ್ ಗಳಿಸಲಷ್ಟೇ ಶಕ್ತವಾಯಿತು. ತಂಡ 9 ರನ್​ ಗಳಿಸುವಷ್ಟರಲ್ಲಿ ನಾಯಕಿ ಚಾಮರಿ ಅಟಪಟ್ಟು(6), ಅನೌಷ್ಕಾ ಸಂಜೀವನಿ(2), ಮಾದವಿ(1) ಮತ್ತು ಹಾಸಿನಿ ಪೆರೇರಾ(0) ಔಟ್ ಆದರು. ಆರಂಭಿಕರು ಮತ್ತು ಮುರು ನಾಲ್ಕನೇ ವಿಕೆಟ್​ ಪತನವಾದಂತೆ ಮಧ್ಯಮ ಕ್ರಮಾಂಕವೂ ಕುಸಿತ ಕಂಡಿತು. ನೀಲಾಕ್ಷಿ ಡಿ ಸಿಲ್ವಾ(6), ಕವಿಶಾ ದಿಲ್ಹಾರಿ(1), ಓಡಾಡಿ ರಣಸಿಂಘೆ(13), ಮಲ್ಶಾ ಶೆಹಾನಿ (0), ಸುಗಂಧಾ ಕುಮಾರಿ(6) ವಿಕೆಟ್​ ಒಪ್ಪಿಸಿದರು. ಭಾರತದ ಪರ ರೇಣುಕಾ ಸಿಂಗ್​ 3 ವಿಕೆಟ್​ ಪಡೆದರು. ರಾಜೇಶ್ವರಿ ಗಾಯಕ್‌ವಾಡ್ ಮತ್ತು ಸ್ನೇಹ ರಾಣಾ ತಲಾ ಎರಡು ವಿಕೆಟ್​ ಕಿತ್ತು ಮಿಂಚಿದರು.

ಸಾಧಾರಣ ಗುರಿ ಬೆನ್ನತ್ತಿದ ಭಾರತ, ಕೇವಲ 8.3 ಓವರ್‌ಗಳಲ್ಲಿ ಗುರಿ ಮುಟ್ಟಿತು. ಸ್ಮೃತಿ ಮಂಧಾನ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಗೆಲುವು ಸಾಧಿಸಿತು. ಮಂಧಾನ ಜೊತೆ ಆರಂಭಿಕರಾಗಿ ಬಂದ ಶೆಫಾಲಿ ವರ್ಮಾ (5) ಬೇಗ ವಿಕೆಟ್​ ಒಪ್ಪಿಸಿದರು. ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದ ಜೆಮಿಮಾ ರಾಡ್ರಿಗಸ್ (2) ಕೂಡ ಜಾಸ್ತಿ ಹೊತ್ತು ಕ್ರಿಸ್​ನಲ್ಲಿ ನಿಲ್ಲಲಿಲ್ಲ. ಆಗ ನಾಯಕಿ ಹರ್ಮನ್‌ಪ್ರೀತ್ ಕೌರ್ ಮಂಧಾನಗೆ ಜೊತೆಯಾದರು. ಬಿರುಸಿನಿಂದ ಆಡುತ್ತಿದ್ದ ಮಂಧಾನ 25 ಎಸೆತಗಳಲ್ಲಿ 6 ಬೌಡರಿ ಮತ್ತು 3 ಸಿಕ್ಸರ್​ ಜೊತೆಗೆ 51ರನ್​ಗಳಿಸಿ ಅಜೇಯರಾಗಿ ಉಳಿದುಕೊಂಡರು. ನಾಯಕಿ ಹರ್ಮನ್‌ಪ್ರೀತ್ ಕೌರ್ 11 ರನ್​ ಗಳಿಸಿದರು. 4 ಓವರ್‌ಗಳಲ್ಲಿ ಕೇವಲ 7 ರನ್ ಬಿಟ್ಟುಕೊಟ್ಟ ದೀಪ್ತಿ ಶರ್ಮಾ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.

Published On - 8:51 am, Sun, 16 October 22

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​