Asia Cup Semi Final: ಹರ್ಮನ್ ಪಡೆಗೆ ಸುಲಭ ತುತ್ತಾದ ಥಾಯ್ಲೆಂಡ್; ಏಷ್ಯಾಕಪ್ ಫೈನಲ್​ಗೇರಿದ ಭಾರತ..!

Asia Cup Semi Final: ಭಾರತ ವನಿತಾ ತಂಡ ಹಾಗೂ ಥಾಯ್ಲೆಂಡ್ ವನಿತಾ ತಂಡಗಳ ನಡುವೆ ನಡೆದ ಮಹಿಳಾ ಏಷ್ಯಾಕಪ್‌ನ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಹರ್ಮನ್​ಪ್ರೀತ್ ಪಡೆ ಸುಲಭ ಜಯ ಸಾಧಿಸುವುದರೊಂದಿಗೆ ಮಹಿಳಾ ಏಷ್ಯಾಕಪ್​ನಲ್ಲಿ ಫೈನಲ್​ಗೇರಿದೆ.

Asia Cup Semi Final: ಹರ್ಮನ್ ಪಡೆಗೆ ಸುಲಭ ತುತ್ತಾದ ಥಾಯ್ಲೆಂಡ್; ಏಷ್ಯಾಕಪ್ ಫೈನಲ್​ಗೇರಿದ ಭಾರತ..!
Indian Cricket Team
Follow us
TV9 Web
| Updated By: ಪೃಥ್ವಿಶಂಕರ

Updated on:Oct 13, 2022 | 11:45 AM

ಭಾರತ ವನಿತಾ ತಂಡ ( Indian women’s cricket ) ಹಾಗೂ ಥಾಯ್ಲೆಂಡ್ ವನಿತಾ ತಂಡಗಳ ನಡುವೆ ನಡೆದ ಮಹಿಳಾ ಏಷ್ಯಾಕಪ್‌ನ (Women’s Asia Cup 2022) ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಹರ್ಮನ್​ಪ್ರೀತ್ ಪಡೆ ಸುಲಭ ಜಯ ಸಾಧಿಸುವುದರೊಂದಿಗೆ ಮಹಿಳಾ ಏಷ್ಯಾಕಪ್​ನಲ್ಲಿ ಫೈನಲ್​ಗೇರಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 148 ರನ್​ ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಪರ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ (Shefali Verma) 42 ರನ್​ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಇವರನ್ನು ಹೊರತುಪಡಿಸಿ ತಂಡದ ನಾಯಕಿ ಹರ್ಮನ್​ಪ್ರೀತ್ 36 ರನ್​ ಗಳಿಸಿದರೆ, ಜಮೀಮಾ 27 ರನ್​ ಗಳಿಸಿದರು. ಈ ಗುರಿ ಬೆನ್ನಟ್ಟಿದ ಥಾಯ್ಲೆಂಡ್ ತಂಡ ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳಲಾರಂಭಿಸಿತು. ಅಂತಿಮವಾಗಿ ಥಾಯ್ ಪಡೆ 20 ಓವರ್​ಗಳಲ್ಲಿ ವಿಕೆಟ್ ಕಳೆದುಕೊಂಡು 74 ರನ್ ಗಳಿಸಲಷ್ಟೇ ಶಕ್ತವಾಯಿತು.

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 148 ರನ್ ಗಳಿಸಿತ್ತು. ಬೌಲರ್ ಸ್ನೇಹಿ ಪಿಚ್‌ನಲ್ಲಿ ಭಾರತದ ಬ್ಯಾಟರ್​ಗಳು ಮುಕ್ತವಾಗಿ ಆಡುವುದು ಕಷ್ಟಕರವಾಗಿತ್ತು. ನಂತರ ಭಾರತೀಯ ಬೌಲರ್‌ಗಳು ಕೂಡ ಇದರ ಲಾಭ ಪಡೆದು ಥಾಯ್ಲೆಂಡ್ ತಂಡವನ್ನು ಕೇವಲ 74 ರನ್‌ಗಳಿಗೆ ಸೀಮಿತಗೊಳಿಸಿ 74 ರನ್‌ಗಳ ಜಯ ಸಾಧಿಸಿದರು.

ಆರಂಭದಲ್ಲೇ ಮಂಧಾನ ವಿಕೆಟ್ ಪತನ

ಭಾರತ ತಂಡದ ಆರಂಭ ಉತ್ತಮವಾಗಿರಲಿಲ್ಲ. ಸ್ಫೋಟಕ ಓಪನರ್ ಸ್ಮೃತಿ ಮಂಧಾನ ಕೇವಲ 13 ರನ್ ಗಳಿಸಿ ಔಟಾದರು. ಇದಾದ ನಂತರ ಜೆಮಿಮಾ ರಾಡ್ರಿಗಸ್ 26 ಎಸೆತಗಳಲ್ಲಿ ಕೇವಲ 27 ರನ್‌ಗಳಿಸಿ ತಮ್ಮ ಇನ್ನಿಂಗ್ಸ್ ಮುಗಿಸಿದರು. ಮತ್ತೊಂದೆಡೆ, ಶಫಾಲಿ ವರ್ಮಾ ಉತ್ತಮವಾಗಿ ಬ್ಯಾಟಿಂಗ್ ಮಾಡಿ, 5 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 46 ರನ್ ಗಳಿಸಿದರು. ಇವರಲ್ಲದೆ ತಂಡದ ನಾಯಕಿ ಹರ್ಮನ್‌ಪ್ರೀತ್ 30 ಎಸೆತಗಳಲ್ಲಿ 36 ರನ್ ಗಳಿಸಿದರು. ಆದರೆ ಅಂತಿಮ ಓವರ್‌ಗಳಲ್ಲಿ ವೇಗವಾಗಿ ಬ್ಯಾಟಿಂಗ್ ಮಾಡುವುದಕ್ಕೆ ಹೆಸರುವಾಸಿಯಾಗಿರುವ ಕೌರ್, ಈ ಪಂದ್ಯದಲ್ಲಿ ವೇಗವಾಗಿ ರನ್​ಗಳಿಸುವಲ್ಲಿ ವಿಫಲರಾದರು.

ಬೌಲರ್‌ಗಳ ಅದ್ಭುತ ಪ್ರದರ್ಶನ

ಭಾರತೀಯ ಬೌಲರ್‌ಗಳು ಸ್ಪಿನ್ ಸ್ನೇಹಿ ವಿಕೆಟ್‌ನಲ್ಲಿ ಥಾಯ್ಲೆಂಡ್‌ ತಂಡಕ್ಕೆ ನೆಮ್ಮದಿಯಾಗಿ ಉಸಿರಾಡುವುದಕ್ಕೂ ಬಿಡಲಿಲ್ಲ. ಪವರ್‌ಪ್ಲೇಯಲ್ಲಿ ದೀಪ್ತಿ ಶರ್ಮಾ ಅದ್ಭುತ ಬೌಲಿಂಗ್ ಮಾಡಿ, 4 ಓವರ್​ಗಳಲ್ಲಿ ಕೇವಲ 7 ರನ್ ನೀಡಿ 3 ವಿಕೆಟ್ ಪಡೆದರು. ಇವರೊಂದಿಗೆ ರಾಜೇಶ್ವರಿ ಗಾಯಕ್ವಾಡ್ ಕೂಡ ಕೇವಲ 10 ರನ್ ನೀಡಿ 2 ವಿಕೆಟ್ ಪಡೆದರು. ರೇಣುಕಾ ಸಿಂಗ್, ಸ್ನೇಹ ರಾಣಾ ಕೂಡ ಥಾಯ್ಲೆಂಡ್‌ಗೆ ಮುಕ್ತವಾಗಿ ಆಡಲು ಬಿಡಲಿಲ್ಲ. ಅಂತಿಮವಾಗಿ ಥಾಯ್ಲೆಂಡ್ ತಂಡ 20 ಓವರ್‌ಗಳಲ್ಲಿ 74 ರನ್ ಗಳಿಸಲಷ್ಟೇ ಶಕ್ತವಾಗಿ 9 ವಿಕೆಟ್‌ಗಳನ್ನು ಕಳೆದುಕೊಂಡಿತು.

Published On - 11:25 am, Thu, 13 October 22

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ